Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಬುಡಕ್ಕೆ ಮುಡಾ ಹಗರಣ: ಇಡಿ, ಲೋಕಾಯುಕ್ತಕ್ಕೆ ದೂರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಮುಡಾ ಹಗರಣದ ತನಿಖೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು 14 ಸೈಟ್ ಪಡೆದಿದ್ದಾರೆಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಇದೇ ಹೊತ್ತಲ್ಲೇ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದು, ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಲ್ಲಿಸಿದ್ದಾರೆ. ಮತ್ತೊಂದ್ಕಡೆ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಯುತ್ತಿದೆ. ಇದರ ಮಧ್ಯ ಇದೀಗ ಮುಡಾ ಹಗರಣ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಬುಡಕ್ಕೆ ಬಂದಿದೆ.

ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಬುಡಕ್ಕೆ ಮುಡಾ ಹಗರಣ: ಇಡಿ, ಲೋಕಾಯುಕ್ತಕ್ಕೆ ದೂರು
Gt Devegowda
Follow us
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ

Updated on: Jan 28, 2025 | 4:25 PM

ಮೈಸೂರು, (ಜನವರಿ 28): ಮುಡಾ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿದೆ. ಈವರೆಗಿನ ತನಿಖೆಯ ವರದಿಯನ್ನ ಲೋಕಾಯುಕ್ತ ಪೊಲೀಸರು ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದ್ದಾರೆ. ಆದ್ರೆ, ಲೋಕಾಯುಕ್ತ ತನಿಖೆಗೆ ಆಕ್ಷೇಪ ವ್ಯಕ್ತಪಡಿಸಿರೋ ದೂರುದಾರ ಸ್ನೇಹಮಯಿ ಕೃಷ್ಣ, ಪ್ರಕರಣವನ್ನ ಸಿಬಿಐಗೆ ನೀಡಬೇಕೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇನ್ನೊಂದೆಡೆ ಈ ಹಗರಣದಲ್ಲಿ ಇಡಿ ಪ್ರವೇಶ ಮಾಡಿದ್ದು, ತನಿಖೆ ನಡೆಸಿದೆ. ಇದರ ಮಧ್ಯ ಇದೀಗ ಜೆಡಿಎಸ್​​ ಶಾಸಕ ಜಿಟಿ ದೇವೇಗೌಡ ವಿರುದ್ಧವೂ ಸಹ ಅಕ್ರಮವಾಗಿ 50:50 ಅನುಪಾತದಲ್ಲಿ ಸುಮಾರು 19 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸ್ನೇಹಮಯಿ‌ಕೃಷ್ಣ ದೂರು ನೀಡಿದ್ದಾರೆ.

ಜಿಟಿ ದೇವೇಗೌಡ ವಿರುದ್ಧ ದೂರು ದಾಖಲು

ಮುಡಾದಲ್ಲಿ ಅಕ್ರಮವಾಗಿ ಸಿದ್ದರಾಮಯ್ಯನವರು ಪತ್ನಿ ಪಾರ್ವತಿ ಅವರು ನಿವೇಶಗಳನ್ನು ಪಡೆದುಕೊಂಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಅವರು ದೂರು ನೀಡಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಇದೀಗ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧವೂ ಸಹ ದೂರು ದಾಖಲಿಸಿದ್ದಾರೆ. ಸಹೋದರಿಯ ಮಗ ಮಹೇಂದ್ರ ಹೆಸರಿನಲ್ಲಿ ಬೇನಾಮಿಯಾಗಿ ಪರಿಹಾರ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮುಡಾ ಕೇಸ್: ಆದೇಶ ಕಾಯ್ದಿರಿಸಿದ ಹೈಕೋರ್ಟ್​, ಸಿದ್ದರಾಮಯ್ಯಗೆ ಟೆನ್ಷನ್​ ಟೆನ್ಷನ್!

ದೇವನೂರು ಗ್ರಾಮದ ಸರ್ವೆ ನಂ.81/2 ರಲ್ಲಿ 2.22 ಎಕರೆ ಜಮೀನನ್ನು ಖರೀದಿಸಿದ್ದು, ಸದರಿ ಜಮೀನಿಗೆ ಪರಿಹಾರ ನೀಡಿಲ್ಲ ಎಂಬಂತೆ 50:50 ಅನುಪಾತದಲ್ಲಿ ಅಕ್ರಮವಾಗಿ ಸುಮಾರು 19 ನಿವೇಶನವನ್ನು ಪಡೆದುಕೊಂಡಿದ್ದಾರೆ. ಈ ಬಗ್ಗೆ ಬಗ್ಗೆ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕೆಂದು ಸ್ನೇಹಮಯಿ‌ಕೃಷ್ಣ ಅವರು ಮೈಸೂರು ಲೋಕಾಯುಕ್ತ ಎಸ್​ಪಿಗೆ ಲಿಖಿತ ದೂರು ನೀಡಿದ್ದಾರೆ. ಜೊತೆಗೆ ಒಂದು ಪ್ರತಿಯನ್ನು ಜಾರಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕರಿಗೂ ನೀಡಿದ್ದಾರೆ.

ಸ್ನೇಹಮಯಿ‌ಕೃಷ್ಣ ನೀಡಿದ ದೂರಿನಲ್ಲೇನಿದೆ?

ದೂರಿನ ಜೊತೆ ಆರು ಪೋಟೋ ಸಾಕ್ಷಿ ನೀಡಿದ್ದಾರೆ. ದೇವನೂರು ಗ್ರಾಮದ ಸರ್ವೆ ನಂ.81/2 ರ ಮಾಲೀಕರೆಂದು ಹೇಳುವವರ ಮನೆಗೆ ಜಿ.ಟಿ.ದೇವೇಗೌಡ ಮತ್ತು ಅವರ ಮಗ ಜಿ.ಡಿ.ಹರೀಶ್ ಗೌಡರ ಮತ್ತು ಇತರರು ಹೋಗಿರುವ ಪೋಟೋವನ್ನು ದೂರಿನಲ್ಲಿ ಲಗತ್ತಿಸಿದ್ದಾರೆ. ಅಲ್ಲಿ ಮಾತುಕತೆಯನ್ನು ನಡೆಸಿ, ಚೆಕ್ಕುಗಳನ್ನು ನೀಡಿರುವುದು ಕಂಡು ಬರುತ್ತದೆ. ಆದ್ದರಿಂದ ಸದರಿ ಫೋಟೊಗಳನ್ನು ಆಧರಿಸಿ ವಿಚಾರಣೆ ಮಾಡಿ. ಫೋಟೊಗಳಲ್ಲಿ ಇರುವವರನ್ನು ವಿಚಾರಣೆಗೊಳಪಡಿಸಿ. ಯಾವ ವಿಚಾರದ ಸಲುವಾಗಿ ಅವರುಗಳು ವ್ಯವಹಾರ ನಡೆಸಿರುತ್ತಾರೆ? ಚೆಕ್ಕುಗಳನ್ನು ವಿತರಣೆ ಮಾಡಿಸಿರುತ್ತಾರೆ ? ಸದರಿ ಚೆಕ್ಕುಗಳು ಯಾರಿಗೆ ಸೇರಿದ್ದು ? ಎಂಬ ಅಂಶಗಳ ಬಗ್ಗೆ ತನಿಖೆ ನಡೆಸಿ.

ದೇವನೂರು ಗ್ರಾಮದ ಸರ್ವೆ ನಂ.81/2 ರ ಜಮೀನಿನ ಸಂಬಂಧ ಜಿ.ಟಿ.ದೇವಗೌಡ ರವರು ವ್ಯವಹಾರ ನಡೆಸಿ ಚೆಕ್ಕುಗಳನ್ನು ವಿತರಣೆ ಮಾಡಿರುವುದು ತಿಳಿದು ಬರುತ್ತದೆ. ಹೀಗಾಗಿ ಕ್ರಯಪತ್ರದಲ್ಲಿ ಉಲ್ಲೇಖಿಸಿರುವ ಚೆಕ್ಕುಗಳು ಯಾರದ್ದು, ಸದರಿ ಹಣ ಯಾರ ಖಾತೆಯಿಂದ ಜಮೆಯಾಗಿದೆ ತಿಳಿದುಕೊಳ್ಳಬೇಕಿದೆ. ಜಿ.ಟಿ.ದೇವೇಗೌಡರ ಸಹೋದರಿಯ ಮಗ ಮಹೇಂದ್ರರವರ ಹೆಸರಿಗೆ ಕ್ರಯಪತ್ರ ನೊಂದಣಿ ಆಗಿದೆ. ಸದರಿ ಜಮೀನಿನಲ್ಲಿ ಮನೆಗಳಿರುವುದು ಗಮನಕ್ಕೆ ಬಂದಿದ್ದರೂ ಕೃಷಿ ಎಂಬಂತೆ ಖಾತೆ ಮಾಡಲು ಆದೇಶ ಮಾಡಿರುವುದು ತಿಳಿದು ಬರುತ್ತದೆ. ಈ ದಾಖಲೆಗಳನ್ನು ಆಧರಿಸಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರ ನೀಡಲಾಗಿದೆ.

ಇದನ್ನೂ ಓದಿ: ಮುಡಾ ಹಗರಣ: ಸಿಎಂ ಪತ್ನಿ ಪಾರ್ವತಿಗೆ ಬಿಗ್​ ರಿಲೀಫ್, ಇಡಿ ವಿಚಾರಣೆಯಿಂದ ಬಚಾವ್

ಮಹೇಂದ್ರರವರ ಹೆಸರಿಗೆ 50:50 ಅನುಪಾತದ ಹೆಸರಿನಲ್ಲಿ ನಿವೇಶನಗಳನ್ನು ಪಡೆದಿರುತ್ತಾರೆ. ಈ ಎಲ್ಲಾ ಅಂಶಗಳ ಬಗ್ಗೆ ತನಿಖೆಯನ್ನು ನಡೆಸಿ . ಜಿ.ಟಿ.ದೇವೇಗೌಡ ರವರು ಬೇನಾಮಿ ಹೆಸರಿನಲ್ಲಿ ಅವರ ಸಹೋದರಿಯ ಮಗ ಮಹೇಂದ್ರರವರ ವ್ಯವಹಾರ ನಡೆಸಿರುವುದನ್ನು ಖಚಿತಪಡಿಸಿಕೊಂಡು ಬೇನಾಮಿ ಹೆಸರಿನಲ್ಲಿ ವ್ಯವಹಾರ ನಡೆಸಿರುವವರು. ಇವರಿಗೆ ಸಹಕರಿಸಿರುವವರ ವಿರುದ್ದ ಕ್ರಮ ಕೈಗೊಳ್ಳಿ ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಜಿಟಿಡಿ

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಹೆಸರು ಕೇಳಿಬರುತ್ತಿದ್ದಂತೆಯೇ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಟೀಕೆಗಳ ಸುರಿಮಳೆಗೈಯುತ್ತಿದ್ದಾರೆ. ಹಗರಣದಲ್ಲಿ ಸಿದ್ದರಾಮಯ್ಯ ಹೆಸರು ಕೇಳಿಬಂದಿದ್ದರಿಂದ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ಬಿಗಿಪಟ್ಟು ಹಿಡಿದಿವೆ. ಇದರ ಮಧ್ಯ ಜೆಡಿಎಸ್​ ಶಾಸಕ ಜಿಟಿ ದೇವೇಗೌಡ ಅವರು ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ. ಈ ಸಂಬಂಧ ಮೈಸೂರು ದಸರಾ ಕಾರ್ಯಕ್ರಮದಲ್ಲೇ ಬಹಿರಂಗವಾಗಿಯೇ ಜಿಟಿ ದೇವೇಗೌಡ ಅವರು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದರು. ಆರೋಪ ಕೇಳಿಬಂದ ತಕ್ಷಣ ರಾಜೀನಾಮೆ ನೀಡಬೇಕೆಂಬ ನಿಯಮವಿದೆಯೇ? ಈ ಹಿಂದೆ ಎಚ್​ಡಿ ಕುಮಾರಸ್ವಾಮಿ ರಾಜೀನಾಮೆ ನೀಡಿದ್ರಾ ಎಂದು ಟಾಂಗ್ ಕೊಟ್ಟಿದ್ದರು.

ಇದರ ಬೆನ್ನಲ್ಲೇ ಇದೀಗ ಜಿಟಿ ದೇವೇಗೌಡ ಅವರ ಬುಡಕ್ಕೆ ಇದೀಗ ಮುಡಾ ಹಗರಣ ಬಂದಿದ್ದು, ಮುಂದೆ ಈ ಪ್ರಕರಣ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ