AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಕೇಸ್​: ಭೈರತಿ ಸುರೇಶ್​, ಲೋಕಾಯುಕ್ತ ಎಸ್​ಪಿ ವಿರುದ್ಧ ದೂರು

ಮುಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉರುಳಾಗಿ ಪರಿಣಮಿಸಿದೆ. ಇದೀಗ, ಈ ಉರುಳು ಸಿದ್ದರಾಮಯ್ಯ ಅವರ ಸಂಪುಟದ ಭೈರತಿ ಸುರೇಶ್​ ಅವರಿಗೂ ಸುತ್ತುವ ಸಾಧ್ಯತೆ ಇದೆ. ಹೌದು, ಸಚಿವ ಭೈರತಿ ಸುರೇಶ್​ ವಿರುದ್ಧ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.

ಮುಡಾ ಕೇಸ್​: ಭೈರತಿ ಸುರೇಶ್​, ಲೋಕಾಯುಕ್ತ ಎಸ್​ಪಿ ವಿರುದ್ಧ ದೂರು
ಸ್ನೇಹಮಯಿ ಕೃಷ್ಣ, ಭೈರತಿ ಸುರೇಶ್​
ರಾಮ್​, ಮೈಸೂರು
| Edited By: |

Updated on:Oct 06, 2024 | 6:31 PM

Share

ಮೈಸೂರು, ಅಕ್ಟೋಬರ್​ 06: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ಕಡತ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಸುರೇಶ್ (Byrathi Suresh)​ ಮತ್ತು ಹಿಂದಿನ ಲೋಕಾಯುಕ್ತ ಎಸ್​​ಪಿ ಸಜಿತ್ ವಿರುದ್ಧ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ದೂರು ನೀಡಿದ್ದಾರೆ. ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್​​ ಮೋಹನ್​​ ಅವರಿಗೆ ಲಿಖಿತ ದೂರು ನೀಡಿದ್ದಾರೆ.

ಲೋಕಾಯುಕ್ತ ನೀಡಿದ್ದ ಸರ್ಚ್​ ವಾರಂಟ್​ ಆಧರಿಸಿ ಜು.26ರಂದು ಮುಡಾ ಕಚೇರಿ ಮೇಲೆ ದಾಳಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ದಾಳಿ ವಿಚಾರವನ್ನು ಮೈಸೂರು ಲೋಕಾಯುಕ್ತದ ಅಂದಿನ ಅಧೀಕ್ಷಕ ಸಜಿತ್ ಅವರು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಈ ದಸರಾಗೆ ಮುಡಾ ಸೈಟ್ ನೋಡುವುದನ್ನ ತಪ್ಪಿಸಿಕೊಳ್ಳಬೇಡಿ: ಸಿಎಂ ವಿರುದ್ಧ ಬಿಜೆಪಿ ವ್ಯಂಗ್ಯ

ಭೈರತಿ ಸುರೇಶ್‌ ಕೂಡಲೇ ಮೈಸೂರಿಗೆ ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾದಲ್ಲಿನ ಕೆಲವು ಪ್ರಮುಖ ಕಡತಗಳನ್ನು ತೆಗೆದುಕೊಂಡು ಹೋಗಿದ್ದರು. ಈ ಕಡತದಲ್ಲಿನ ದಾಖಲೆಗಳನ್ನು ಇಟ್ಟುಕೊಂಡೇ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾ ಗೋಷ್ಠಿಯನ್ನು ನಡೆಸಿದ್ದರು. ಈ ರೀತಿ ಸಹಾಯ ಮಾಡಿದ ಕಾರಣಕ್ಕಾಗಿ ಮೈಸೂರು ಲೋಕಾಯುಕ್ತದಲ್ಲಿ ಪೊಲೀಸ್ ಅಧೀಕ್ಷಕರಾಗಿದ್ದ ಸುಜೀತ್‌ ಅವರನ್ನು ಬೆಂಗಳೂರಿನ ಆಯಾಕಟ್ಟಿನ ಜಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:27 pm, Sun, 6 October 24

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ