ಮೈಸೂರು, ಅಕ್ಟೋಬರ್ 06: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ಕಡತ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಸುರೇಶ್ (Byrathi Suresh) ಮತ್ತು ಹಿಂದಿನ ಲೋಕಾಯುಕ್ತ ಎಸ್ಪಿ ಸಜಿತ್ ವಿರುದ್ಧ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ದೂರು ನೀಡಿದ್ದಾರೆ. ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಲಿಖಿತ ದೂರು ನೀಡಿದ್ದಾರೆ.
ಲೋಕಾಯುಕ್ತ ನೀಡಿದ್ದ ಸರ್ಚ್ ವಾರಂಟ್ ಆಧರಿಸಿ ಜು.26ರಂದು ಮುಡಾ ಕಚೇರಿ ಮೇಲೆ ದಾಳಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ದಾಳಿ ವಿಚಾರವನ್ನು ಮೈಸೂರು ಲೋಕಾಯುಕ್ತದ ಅಂದಿನ ಅಧೀಕ್ಷಕ ಸಜಿತ್ ಅವರು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಮಾಹಿತಿ ನೀಡಿದ್ದರು.
ಇದನ್ನೂ ಓದಿ: ಈ ದಸರಾಗೆ ಮುಡಾ ಸೈಟ್ ನೋಡುವುದನ್ನ ತಪ್ಪಿಸಿಕೊಳ್ಳಬೇಡಿ: ಸಿಎಂ ವಿರುದ್ಧ ಬಿಜೆಪಿ ವ್ಯಂಗ್ಯ
ಭೈರತಿ ಸುರೇಶ್ ಕೂಡಲೇ ಮೈಸೂರಿಗೆ ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾದಲ್ಲಿನ ಕೆಲವು ಪ್ರಮುಖ ಕಡತಗಳನ್ನು ತೆಗೆದುಕೊಂಡು ಹೋಗಿದ್ದರು. ಈ ಕಡತದಲ್ಲಿನ ದಾಖಲೆಗಳನ್ನು ಇಟ್ಟುಕೊಂಡೇ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾ ಗೋಷ್ಠಿಯನ್ನು ನಡೆಸಿದ್ದರು. ಈ ರೀತಿ ಸಹಾಯ ಮಾಡಿದ ಕಾರಣಕ್ಕಾಗಿ ಮೈಸೂರು ಲೋಕಾಯುಕ್ತದಲ್ಲಿ ಪೊಲೀಸ್ ಅಧೀಕ್ಷಕರಾಗಿದ್ದ ಸುಜೀತ್ ಅವರನ್ನು ಬೆಂಗಳೂರಿನ ಆಯಾಕಟ್ಟಿನ ಜಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:27 pm, Sun, 6 October 24