AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬೆನ್ನು ಬಿಡದ ಸ್ನೇಹಮಯಿ‌ ಕೃಷ್ಣ: ಸಾಮಾಜಿಕ ಜಾಲತಾಣದಲ್ಲಿ ಹಳೆ ವಿಡಿಯೋ ಹಂಚಿಕೊಂಡು ಟಾಂಗ್​

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ವಿರುದ್ದ ಮೈಸೂರು ಲೋಕಾಯುಕ್ತದಲ್ಲಿ ಎಫ್​ಐಆರ್ ದಾಖಲಾಗಿದೆ. ಆದರೂ ಬೆನ್ನು ಬಿಡದ ದೂರುದಾರ ಸ್ನೇಹಮಯಿ‌ ಕೃಷ್ಣ(Snehamayi Krishna) ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಅವರ 2011ರ ವಿಡಿಯೋ ಹಾಕಿ ಟಾಂಗ್ ಕೊಟ್ಟಿದ್ದಾರೆ. ವಿಡಿಯೋ ಅಲ್ಲಿ ಏನಿದೆ ಅಂತೀರಾ? ಈ ಸ್ಟೋರಿ ಓದಿ.

ಸಿಎಂ ಬೆನ್ನು ಬಿಡದ ಸ್ನೇಹಮಯಿ‌ ಕೃಷ್ಣ: ಸಾಮಾಜಿಕ ಜಾಲತಾಣದಲ್ಲಿ ಹಳೆ ವಿಡಿಯೋ ಹಂಚಿಕೊಂಡು ಟಾಂಗ್​
ಸಾಮಾಜಿಕ ಜಾಲತಾಣದಲ್ಲಿ ಸಿಎಂ ಹಳೆ ವಿಡಿಯೋ ಹಂಚಿಕೊಂಡ ಸ್ನೇಹಮಯಿ‌ ಕೃಷ್ಣ
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್|

Updated on:Sep 28, 2024 | 4:48 PM

Share

ಮೈಸೂರು, ಸೆ. 28: ಅಕ್ರಮವಾಗಿ ಮುಡಾ ಸೈಟ್​ನ್ನು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ವಿರುದ್ದ ಮೈಸೂರು ಲೋಕಾಯುಕ್ತದಲ್ಲಿ ಎಫ್​ಐಆರ್ ದಾಖಲಾಗಿದೆ. ಆದರೂ ಬೆನ್ನು ಬಿಡದ ದೂರುದಾರ ಸ್ನೇಹಮಯಿ‌ ಕೃಷ್ಣ(Snehamayi Krishna) ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಅವರ 2011ರ ವಿಡಿಯೋ ಹಾಕಿ ಟಾಂಗ್ ಕೊಟ್ಟಿದ್ದಾರೆ. ಹೌದು, ರಾಜ್ಯಪಾಲರು ರಾಷ್ಟ್ರಪತಿಗಳ ಅಣತಿಯಂತೆ ಕೆಲಸ ಹಾಗೂ ರಾಜ್ಯ ಸರ್ಕಾರ ತಪ್ಪು ಮಾಡಿದಾಗ ರಾಜ್ಯಪಾಲರು ಸರಿ‌ ಮಾಡುವ ಕೆಲಸ ಮಾಡಬೇಕು ಎಂದು ರಾಜ್ಯಪಾಲರ ನಡೆ ಸಮರ್ಥಿಸಿಕೊಂಡಿದ್ದ ಸಿದ್ದರಾಮಯ್ಯನವರ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ ಏನಿದೆ?

ಸ್ನೇಹಮಯಿ‌ ಕೃಷ್ಣ ಹಂಚಿಕೊಂಡಿರುವ ವಿಡಿಯೋದಲ್ಲಿ ಸಿದ್ದರಾಮಯ್ಯ ಅವರು ಮಾತನಾಡಿ, ‘ನನ್ನ ಪ್ರಕಾರ ರಾಷ್ಟ್ರಪತಿಗಳು ಸಂವಿಧಾನದ ಮುಖ್ಯಸ್ಥರು. ಅವರ ಪ್ರತಿನಿಧಿಗಳಾಗಿ ರಾಜ್ಯಪಾಲರುಗಳು ಪ್ರತಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಾರೆ. ಒಂದು ಸರ್ಕಾರ ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದೆಯೋ ಇಲ್ಲವೋ ಎಂದು ನೋಡಿಕೊಳ್ಳುವ ಜವಾಬ್ದಾರಿ ಅವರ ಮೇಲೆ ಇರುತ್ತದೆ. ಹಾಗೆಯೇ ಸರ್ಕಾರ ತಪ್ಪು ಮಾಡಿದಾಗ, ಅವರ ಮೇಲೆ ಕ್ರಮ ತೆಗೆದುಕೊಳ್ಳುವ, ಬುದ್ದಿ ಹೇಳುವ ಅಧಿಕಾರ ರಾಜ್ಯಪಾಲರಿಗೆ ಇದೆ. ಹೀಗಿರುವಾಗ ಅವರು ಅಧಿಕಾರವನ್ನು ಚಲಾಯಿಸಿದಾಗ, ಅದನ್ನು ರಾಜಕೀಯ ಪ್ರೇರಿತ, ವಿರೋಧ ಪಕ್ಷದವರು ಮಾಡುತ್ತಿದ್ದಾರೆ ಎಂದು ಹೇಳಿದರೆ, ಜನ ಅದನ್ನು ನಂಬಲ್ಲ ಎಂದಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಟಾಂಗ್​ ಕೊಟ್ಟಿದ್ದಾರೆ.

ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ನೀಡಿದ ಸ್ನೇಹಮಹಿ ಕೃಷ್ಣಗೂ ಸಂಕಷ್ಟ..!

ಸಿದ್ದು ಪ್ರಕರಣವನ್ನ ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಹೈಕೋರ್ಟ್​ಗೆ ಅರ್ಜಿ

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ನಿನ್ನೆ(ಸೆ.27) ಎಫ್​ಐಆರ್​ ದಾಖಲಾಗಿದೆ. ಕೋರ್ಟ್ ಆದೇಶದಂತೆ ಮೈಸೂರು ಲೋಕಾಯುಕ್ತ ಎಸ್​ಪಿ ಕಚೇರಿಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಸಿದ್ದರಾಮಯ್ಯ A1 ಆರೋಪಿಯಾಗಿದ್ದಾರೆ. ಆದರೆ, ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಅದೂ ಕೂಡ ತೃಪ್ತಿ ಆದಂತೆ ಕಾಣಿಸಿದೆ. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಸಿದ್ದರಾಮಯ್ಯನವರು ರಾಜ್ಯಪಾಲರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ವಿಡಿಯೋವನ್ನು ಹಂಚಿಕೊಂಡು ಟಾಂಗ್​ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:08 pm, Sat, 28 September 24

‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು