ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಕೆಲ ರಾಜಕಾರಣಿಗಳು ತಿರುಚಿದ್ದಾರೆ: ಸಂಸದ ಪ್ರತಾಪ್ ಸಿಂಹ

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಬಂದಾಗ ಮೈಸೂರು ಪ್ಯಾರಿಸ್ ಮಾಡುತ್ತೇನೆ ಎಂದು ಹೇಳಿರುವ ಹೇಳಿಕೆ, ಈಗ ಮತ್ತೆ ಚರ್ಚೆಗೆ ಗ್ರಾಸವಾಗಿದ್ದು, ಈ ಕುರಿತಾಗಿ ಮೈಸೂರಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸ್ಪಷ್ಟಣೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಕೆಲ ರಾಜಕಾರಣಿಗಳು ತಿರುಚಿದ್ದಾರೆ: ಸಂಸದ ಪ್ರತಾಪ್ ಸಿಂಹ
ಬಿಜೆಪಿ ಸಂಸದ ಪ್ರತಾಪ್ ಸಿಂಹ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: May 24, 2022 | 11:44 AM

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಮೈಸೂರನ್ನು ಪ್ಯಾರಿಸ್​​ ಮಾಡುತ್ತೇನೆಂದು ಹೇಳಿಲ್ಲ. ಮೈಸೂರು ಕೂಡ ಪ್ಯಾರಿಸ್‌ನಂತೆ ಇದೆ. ಪ್ಯಾರಿಸ್ ನಗರದಷ್ಟೇ ಮೈಸೂರು ಆಕರ್ಷಕವಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಹೇಳಿಕೆಯನ್ನು ಕೆಲ ರಾಜಕಾರಣಿಗಳು ತಿರುಚಿದ್ದಾರೆ ಎಂದು ನಗರದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.  2014ರಲ್ಲಿ ನರೇಂದ್ರ ಮೋದಿ‌ ಮಾಡಿದ ಭಾಷಣವನ್ನು ನೋಡಿ. ಮೈಸೂರನ್ನು ಪ್ಯಾರಿಸ್ ಮಾಡುತ್ತೇನೆ ಎಂದು ಎಲ್ಲಿ ಹೇಳಿದ್ದಾರೆ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದರು. ಮೈಸೂರಿಗೆ ಪ್ಯಾರಿಸ್‌ನಷ್ಟೇ ಪ್ರವಾಸಿಗರನ್ನು ಸೆಳೆಯುವ ಶಕ್ತಿ ಇದೆ. ಅದಕ್ಕೆ ಪೂರಕವಾದ ಕನೆಕ್ಟಿವಿಟಿಯನ್ನು ನೀಡಿದ್ದಾರೆ. ಪ್ಯಾರಿಸ್ ಮಾಡುತ್ತೇನೆ ಎಂದು ಮೋದಿ ಹೇಳಿಲ್ಲ. 2014ರಲ್ಲಿ ಪ್ಯಾರಿಸ್ ಅತಿ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಿತ್ತು. ಮೈಸೂರಿಗೂ ಅಂತಹ ಶಕ್ತಿ ಇದೆ ಅಂತ ಮೋದಿ ಹೇಳಿದ್ದರು ಎಂದು ಹೇಳಿದರು.

ಇದನ್ನೂ ಓದಿ: Vidhan Parishad Election 2022: ಪರಿಷತ್​ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ

ಯೋಗ ದಿನಾಚರಣೆ ಕಾರ್ಯಕ್ರಮದ ಬಗ್ಗೆ ನಗರದಲ್ಲಿ ಸಚಿವ ಎಸ್.ಟಿ ಸೋಮಶೇಖರ್ ಹೇಳಿಕೆ ನೀಡಿದ್ದು, ಸ್ಥಳ ನಿಗದಿಯಾಗಿಲ್ಲ. ಮುಂದಿನ ದಿನದಲ್ಲಿ ಚರ್ಚೆ ಮಾಡಿ ಸ್ಥಳದ ಬಗ್ಗೆ ನಿರ್ಧಾರ ಮಾಡಲಾಗುವುದು. ಈಗಾಗಲೇ ಈ ಬಗ್ಗೆ ಸಭೆ ನಡೆಸಲಾಗಿದೆ. ಈ ಬಗ್ಗೆ ಒಂದು ಸಮಿತಿ ಮಾಡಲಾಗುತ್ತಿದ್ದು, ಎಲ್ಲಾ ಪಕ್ಷದ ಶಾಸಕರು, ಪರಿಷತ್ ಸದಸ್ಯರು ಮತ್ತು ಯೋಗ ಸಂಸ್ಥೆಯವರು ಸಮಿಯಲ್ಲಿ ಇರಲಿದ್ದಾರೆ. ಸಮಿತಿಯಲ್ಲಿ ಚರ್ಚೆ ನಡೆಸಿ ಎಲ್ಲಾ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.

ಜೂನ್ 21ಕ್ಕೆ ಮೈಸೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ;

ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಈ ಬಾರಿ ದೇಶದ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುತ್ತಿದ್ದಾರೆ. ಕಾರ್ಯಕ್ರಮದ ಬಗ್ಗೆ ಪ್ರಧಾನಿ ಕಾರ್ಯಾಲಯ ದೃಢಪಡಿಸಿದ್ದು, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್​ಗೆ ಪತ್ರ ಬರೆದಿದೆ. ಪಿ.ರವಿಕುಮಾರ್​ಗೆ ಬರೆದ ಪತ್ರದಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಪಿಎಂಒ ತಿಳಿಸಿದೆ. ಯೋಗ ದಿನಾಚರಣೆಯಲ್ಲಿ ಪ್ರಧಾನಿ ಭಾಗವಹಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕುಟುಂಬ ಸಮೇತರಾಗಿ ಪ್ರಧಾನಿಯನ್ನು ಭೇಟಿಯಾಗಿ ಆಹ್ವಾನಿಸಿದ್ದರು.

ಆಯುಷ್ ಸಚಿವಾಲಯವು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನಗರದ ರೇಸ್ ಕೋರ್ಸ್ ಆವರಣದಲ್ಲಿ ಭರ್ಜರಿ ಸಿದ್ಧತೆ ಮಾಡಲಾಗುತ್ತಿದೆ. ವಿಜಯನಗರದಲ್ಲಿರುವ ಯೋಗಾ ನರಸಿಂಹಸ್ವಾಮಿ ದೇಗುಲದಲ್ಲಿ ಯೋಗ ದಿನಾಚರಣೆ ಕುರಿತು ಪೋಸ್ಟರ್​ ಬಿಡುಗಡೆ ಮಾಡಲಾಯಿತು. 2017ರಲ್ಲಿ ಗಿನ್ನೆಸ್ ದಾಖಲೆಗೆ ಸೇರ್ಪಡೆಯಾಗಿದ್ದ ಮೈಸೂರು, ಮತ್ತೆ ಗಿನ್ನೆಸ್​​​ ದಾಖಲೆ ಸೇರಲು ಸಾಂಸ್ಕೃತಿಕ ನಗರಿಯಲ್ಲಿ ಸಿದ್ಧತೆ ನಡೆದಿದ್ದು, ಈ ಬಾರಿ 2 ಲಕ್ಷ ಯೋಗಪಟುಗಳನ್ನು ಸೇರಿಸುವ ಆಶಯವಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.