ಮೈಸೂರು, ಬೆಂಗಳೂರು, ಚೆನ್ನೈ ರೈಲು ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದ ನೈಋತ್ಯ ರೈಲ್ವೆ; ಇಲ್ಲಿದೆ ವಿವರ

ಚೆನ್ನೈ-ಮೈಸೂರು-ಚೆನ್ನೈ ಶತಾಬ್ದಿ ಎಕ್ಸ್‌ಪ್ರೆಸ್ ಮತ್ತು ವಂದೇ ಭಾರತ್ ಎಕ್ಸ್‌ಪ್ರೆಸ್ ಎರಡಕ್ಕೂ 2023 ರ ಡಿಸೆಂಬರ್ 20 ರಿಂದ ಪರಿಷ್ಕೃತ ವೇಳಾಪಟ್ಟಿಯನ್ನು ಜಾರಿಗೆ ತರಲಾಗುವುದು. ರೈಲು ವೇಳಾಪಟ್ಟಿಯಲ್ಲಿನ ಈ ಬದಲಾವಣೆಗಳನ್ನು ಪ್ರಯಾಣಿಕರು ಗಮನಿಸಿ ಮತ್ತು ಅದಕ್ಕೆ ಅನುಗುಣವಾಗಿ ತಮ್ಮ ಯೋಜನೆಗಳನ್ನು ರೂಪಿಸಿಕೊಳ್ಳಬಹುದಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಮೈಸೂರು, ಬೆಂಗಳೂರು, ಚೆನ್ನೈ ರೈಲು ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದ ನೈಋತ್ಯ ರೈಲ್ವೆ; ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Aug 24, 2023 | 4:35 PM

ಮೈಸೂರು, ಆಗಸ್ಟ್ 24: ಮೈಸೂರು ಮತ್ತು ಚೆನ್ನೈ ಮಧ್ಯೆ ಸಂಪರ್ಕ ಕಲ್ಪಿಸುವ ಶತಾಬ್ಧಿ ಎಕ್ಸ್‌ಪ್ರೆಸ್ (Shatabdi Express) ಮತ್ತು ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲುಗಳು ಬುಧವಾರದಂದು ಲಭ್ಯವಿಲ್ಲದ ಕಾರಣ ತೀವ್ರ ತೊಂದರೆ ಅನುಭವಿಸುತ್ತಿದ್ದ ರೈಲು ಪ್ರಯಾಣಿಕರಿಗೆ ಈಗ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ರೈಲು ವೇಳಾಪಟ್ಟಿಯನ್ನು ನೈಋತ್ಯ ರೈಲ್ವೆ (SWR)ಯ ಮೈಸೂರು ವಿಭಾಗ ಪರಿಷ್ಕರಣೆ ಮಾಡಿದ್ದು, ಚೆನ್ನೈ-ಮೈಸೂರು-ಚೆನ್ನೈ ಶತಾಬ್ಧಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 12007/12008) ಗುರುವಾರ ಹೊರತುಪಡಿಸಿ ಬುಧವಾರ ಸೇರಿದಂತೆ ವಾರದಲ್ಲಿ ಆರು ದಿನಗಳು ಸಂಚರಿಸಲಿದೆ ಎಂದು ತಿಳಿಸಿದೆ. ಹೊಸ ವೇಳಾಪಟ್ಟಿ 2023 ರ ಡಿಸೆಂಬರ್ 20 ರಿಂದ ಜಾರಿಗೆ ಬರಲಿದೆ. ಈ ಹಿಂದೆ ಶತಾಬ್ಧಿ ರೈಲು ಬುಧವಾರದಂದು ಲಭ್ಯವಿರಲಿಲ್ಲ. ಪರಿಷ್ಕೃತ ವೇಳಾಪಟ್ಟಿಯೊಂದಿಗೆ, ಪ್ರಯಾಣಿಕರು ಗುರುವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಶತಾಬ್ಧಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸಬಹುದಾಗಿದೆ.

ಮೈಸೂರು ಮತ್ತು ಚೆನ್ನೈ ನಡುವೆ ಪ್ರಯಾಣಿಸುವವರಿಗೆ ಹೆಚ್ಚಿನ ಅನುಕೂಲತೆ, ಪ್ರಯೋಜನವನ್ನು ಒದಗಿಸುವ ಉದ್ದೇಶದಿಂದ ಈ ಬದಲಾವಣೆ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ತಿಳಿಸಿದೆ.

ಹೆಚ್ಚುವರಿಯಾಗಿ, ಚೆನ್ನೈ-ಮೈಸೂರು-ಚೆನ್ನೈ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯು ಬುಧವಾರ ಹೊರತುಪಡಿಸಿ ವಾರದಲ್ಲಿ ಆರು ದಿನಗಳು ಲಭ್ಯವಾಗಲಿದೆ ಎಂದು ಹೇಳಲಾಗಿದೆ. ವಂದೇ ಭಾರತ್ ಮತ್ತೊಂದು ಹೈಸ್ಪೀಡ್ ರೈಲು ಸೇವೆಯಾಗಿದ್ದು ಅದು ಪ್ರಮುಖ ನಗರಗಳನ್ನು ಸಂಪರ್ಕಿಸುತ್ತದೆ ಮತ್ತು ಪ್ರಯಾಣಿಕರಿಗೆ ಪ್ರೀಮಿಯಂ ಪ್ರಯಾಣದ ಅನುಭವವನ್ನು ನೀಡುತ್ತದೆ. ರೈಲು ವೇಳಾಪಟ್ಟಿಯಲ್ಲಿನ ಈ ಬದಲಾವಣೆಗಳನ್ನು ಪ್ರಯಾಣಿಕರು ಗಮನಿಸಿ ಮತ್ತು ಅದಕ್ಕೆ ಅನುಗುಣವಾಗಿ ತಮ್ಮ ಯೋಜನೆಗಳನ್ನು ರೂಪಿಸಿಕೊಳ್ಳಬಹುದಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Vande Bharat Express; ಬೆಂಗಳೂರು ಹೈದರಾಬಾದ್ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಶೀಘ್ರ ಚಾಲನೆ

ಚೆನ್ನೈ-ಮೈಸೂರು-ಚೆನ್ನೈ ಶತಾಬ್ದಿ ಎಕ್ಸ್‌ಪ್ರೆಸ್ ಮತ್ತು ವಂದೇ ಭಾರತ್ ಎಕ್ಸ್‌ಪ್ರೆಸ್ ಎರಡಕ್ಕೂ 2023 ರ ಡಿಸೆಂಬರ್ 20 ರಿಂದ ಪರಿಷ್ಕೃತ ವೇಳಾಪಟ್ಟಿಯನ್ನು ಜಾರಿಗೆ ತರಲಾಗುವುದು ಎಂದು ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಪ್ರೊ. ಕೆ. ಲೋಹಿತೇಶ್ವರ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ