ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ 2ನೇ ಆಷಾಢ ಶುಕ್ರವಾರದ ಸಂಭ್ರಮ: ಗಂಡಸರಿಗೂ ಬಸ್ ಫ್ರೀ
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ 2ನೇ ಆಷಾಢ ಶುಕ್ರವಾರದ ಸಂಭ್ರಮ ಮನೆ ಮಾಡಿದೆ. ಎರಡನೇ ವಾರವೂ ಬೆಟ್ಟಕ್ಕೆ ಖಾಸಗಿ ವಾಹನಗಳಿ ನಿರ್ಬಂಧ ವಿಧಿಸಲಾಗಿದೆ. ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. 2ನೇ ಆಷಾಢ ಶುಕ್ರವಾರದ ಪೂಜಾ ಕೈಂಕರ್ಯಗಖು ಜೋರಾಗಿ ನಡೆದಿವೆ. ಈ ಕುರಿತು ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ..
ಮೈಸೂರು: ಆಷಾಢ ಶುಕ್ರವಾರ ಬಂದ್ರೆ ಸಾಕು ಅರಮನೆ ನಗರಿ ಮೈಸೂರು (Mysuru) ಹಾಗೂ ಚಾಮುಂಡಿ ಭಕ್ತರಿಗೆ ಸಂಭ್ರಮವೋ ಸಂಭ್ರಮ. ಭಕ್ತಿ ಪರಕಾಷ್ಠೆಯಲ್ಲಿ ಮಿಂದೇಳುತ್ತಾರೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ 2ನೇ ಆಷಾಢ ಶುಕ್ರವಾರದಂದು ಅಂದ್ರೆ ಇಂದು(ಜೂನ್ 30) ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಗಿದೆ. ಮುಂಜಾನೆ 3 ಗಂಟೆ 30 ನಿಮಿಷಕ್ಕೆ ಅಭಿಷೇಕದೊಂದಿಗೆ ಆರಂಭವಾದ ಪೂಜಾ ಕೈಂಕರ್ಯ ಎರಡು ಗಂಟೆಗಳ ಕಾಲ ನಿರಂತರವಾಗಿ ನಡೆಯಿತ್ತು. ಅಲ್ಲದೇ ದೇವಿಗೆ ಲಕ್ಷ್ಮೀ ಅಲಂಕಾರ ಮಾಡಿ ಬಳಿಕ 5 ಗಂಟೆ 30 ನಿಮಿಷಕ್ಕೆ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ಇನ್ನು ಬೆಟ್ಟದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಬಾರದೆಂದು ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ.
ಇದನ್ನೂ ಓದಿ: ಆಷಾಢ ಮಾಸದ ಮಹತ್ವ, ತಾಯಿ ಚಾಮುಂಡೇಶ್ವರಿಯ ಇತಿಹಾಸ ತಿಳಿಸಿದ ಅರ್ಚಕ
ಬೆಟ್ಟಕ್ಕೆ ಹೋಗಲು ಭಕ್ತರಿಗೆ ಜಿಲ್ಲಾಡಳಿತ 50 ಕೆಎಸ್ಆರ್ಟಿಸಿ ಬಸ್ಸಿನ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ನಗರದ ಲಲಿತಾ ಮಹಲ್ ಹೆಲಿಪ್ಯಾಡ್ ಸಮೀಪದಿಂದ ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಲಲಿತಾ ಮಹಲ್ ಪ್ಯಾಲೇಸ್ ಹೆಲಿಪ್ಯಾಡ್ನಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಇನ್ನು ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ 300 ಮತ್ತು 50 ರೂಪಾಯಿ ಟಿಕೆಟ್ ಮುಂದುವರಿದಿದೆ ಎಂದು ಆಡಳಿತ ಮಂಡಲಿ ತಿಳಸಿದೆ.
ಇನ್ನು ಆಷಾಢ ಶುಕ್ರವಾರದಂದು ಶಕ್ತಿ ದೇವತೆಯನ್ನು ಪೂಜಿಸಿದವರಿಗೆ ವಿಘ್ನಗಳು ನಿವಾರಣೆಯಾಗಿ, ಇಷ್ಟಾರ್ಥ ಸಿದ್ಧಿಸುತ್ತದೆ ಅನ್ನೋ ನಂಬಿಕೆಯಿದೆ. ಈ ನಿಟ್ಟಿನಲ್ಲಿ ಮೈಸೂರು ಮಾತ್ರವಲ್ಲದೆ ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯದ ಲಕ್ಷಾಂತರ ಭಕ್ತರು ಸಹಾ 2ನೇ ಆಷಾಢ ಶುಕ್ರವಾರದ ಪೂಜೆಗೆ ಆಗಮಿಸಿದ್ದಾರೆ. ಒಟ್ಟಾರೆ ಸಾಂಸ್ಕತಿಕ ನಗರಿ ಮೈಸೂರಿನಲ್ಲಿ ಎರಡನೇ ಶುಕ್ರವಾರದ ಆಷಾಢ ಮಾಸದ ಪೂಜೆಯಲ್ಲಿ ಮಿಂದೆದ್ದಿದೆ. ಆಷಾಢ ಶುಕ್ರವಾರದ ಮೊದಲ ಶುಕ್ರವಾರದ ಪೂಜೆ ಚಾಮುಂಡಿಬೆಟ್ಟದಲ್ಲಿ ಯಶಸ್ವಿಯಾಗಿ ನಡೆದಿತ್ತು. ಮೊದಲ ವಾರ ಅಂದ್ರೆ ಜೂನ್ 23ರಂದು ಲಕ್ಷಾಂತರ ಭಕ್ತರು ಆಗಮಿಸಿ ತಾಯಿಯ ದರ್ಶನ ಪಡೆದಿದ್ದರು. ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಒಳಿತು ಮಾಡಲಿ ಅನ್ನೋದೆ ನಮ್ಮ ಆಶಯ.
ಇನ್ನಷ್ಟು ಮೈಸೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 7:46 am, Fri, 30 June 23