ಚಾಮರಾಜನಗರದಲ್ಲಿಯೂ ಸಾಫ್ಟ್ ಡ್ರಿಂಕ್ ಫ್ಯಾಕ್ಟರಿ ಆರಂಭಿಸಲಿದ್ದಾರೆ ಶ್ರೀಲಂಕಾ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್

Muthiah Muralitharan Factory in Chamarajanagar; ಸಾಫ್ಟ್ ಡ್ರಿಂಕ್ ಫ್ಯಾಕ್ಟರಿ ಆರಂಭಿಸಲು ಅಗತ್ಯವಿರುವ ಆಡಳಿತಾತ್ಮಕ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಕಾರ್ಖಾನೆಯ ನಿರ್ಮಾಣ ಪ್ರಾರಂಭವಾಗಿದೆ. ಮುತ್ತಯ್ಯ ಪಾನೀಯಗಳ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ರ್ಯಾಂಡ್, ತಂಪು ಪಾನೀಯಗಳು, ರಿಫ್ರೆಶ್ ಡ್ರಿಂಕ್ಸ್​​ ಮತ್ತು ಫ್ಲೇವರ್ಡ್ ಹಾಲನ್ನು ತಯಾರಿಸಲಿದೆ.

ಚಾಮರಾಜನಗರದಲ್ಲಿಯೂ ಸಾಫ್ಟ್ ಡ್ರಿಂಕ್ ಫ್ಯಾಕ್ಟರಿ ಆರಂಭಿಸಲಿದ್ದಾರೆ ಶ್ರೀಲಂಕಾ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್
ಮುತ್ತಯ್ಯ ಮುರಳೀಧರನ್ (ಸಂಗ್ರಹ ಚಿತ್ರ)
Follow us
|

Updated on: Aug 17, 2023 | 8:47 PM

ಬೆಂಗಳೂರು: ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ಮತ್ತು ಖ್ಯಾತ ಆಫ್ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ (Muttiah Muralitharan) ಧಾರವಾಡದಲ್ಲಿ ಉದ್ಯಮ ಸ್ಥಾಪಿಸಲು ಯೋಜನೆ ರೂಪಿಸಿರುವ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಇದೀಗ, ಅವರು ಚಾಮರಾಜನಗರದಲ್ಲಿ (Chamarajanagar) ಸಾಫ್ಟ್ ಡ್ರಿಂಕ್ ಫ್ಯಾಕ್ಟರಿ (Soft Drink Factroy) ಆರಂಭಿಸಲಿದ್ದಾರೆ ಎಂದು ವರದಿಯಾಗಿದೆ. ಮುತ್ತಯ್ಯ ಬಿವರೇಜ್ ಆ್ಯಂಡ್ ಕೆನ್​ಫೆಕ್ಷನರಿ ಪ್ರೈವೇಟ್ ಲಿಮಿಟೆಡ್ (Muthiah Beverage and Confectionery Private Limited) ಘಟಕವನ್ನು ಮುರಳೀಧರನ್ ಅವರು, ಚಾಮರಾಜನಗರದ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ವಲಯದಲ್ಲಿ ಸ್ಥಾಪಿಸಲಿದ್ದಾರೆ. ಸುಮಾರು 46 ಎಕರೆ ವಿಸ್ತಾರವಾದ ಪ್ರದೇಶದಲ್ಲಿ ಘಟಕ ಸ್ಥಾಪನೆಯಾಗಲಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸಾಫ್ಟ್ ಡ್ರಿಂಕ್ ಫ್ಯಾಕ್ಟರಿ ಆರಂಭಿಸಲು ಅಗತ್ಯವಿರುವ ಆಡಳಿತಾತ್ಮಕ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಕಾರ್ಖಾನೆಯ ನಿರ್ಮಾಣ ಪ್ರಾರಂಭವಾಗಿದೆ. ಮುತ್ತಯ್ಯ ಪಾನೀಯಗಳ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ರ್ಯಾಂಡ್, ತಂಪು ಪಾನೀಯಗಳು, ರಿಫ್ರೆಶ್ ಡ್ರಿಂಕ್ಸ್​​ ಮತ್ತು ಫ್ಲೇವರ್ಡ್ ಹಾಲನ್ನು ತಯಾರಿಸಲಿದೆ. ಈ ಬ್ರ್ಯಾಂಡ್​​ನಲ್ಲಿ ಚಾಕೊಲೇಟ್‌ಗಳನ್ನು ಸಹ ಉತ್ಪಾದಿಸಲಾಗುತ್ತದೆ. ಈ ಆಲ್ಕೋಹಾಲ್ ರಹಿತ ಪಾನೀಯಗಳ ಉತ್ಪಾದನೆಯು ಚಾಮರಾಜನಗರದ ಬೆಳವಣಿಗೆಗೆ ಕೊಡುಗೆ ನೀಡಲಿದ್ದು, ಅಭಿವೃದ್ಧಿಗೆ ಪೂರಕವಾಗಲಿದೆ ಎನ್ನಲಾಗಿದೆ.

250 ಕೋಟಿ ರೂ.ನಿಂದ 400 ಕೋಟಿ ರೂ.ವರೆಗೆ ಈ ಯೋಜನೆಗೆ ಹೂಡಿಕೆ ಮಾಡಲಾಗುತ್ತಿದೆ. ಇದರಿಂದಾಗಿ ಸ್ಥಳೀಯವಾಗಿ 500 ರಿಂದ 800 ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಪರೋಕ್ಷವಾಗಿ ನೂರಾರು ಮಂದಿಗೆ ಉದ್ಯೋಗಾವಕಾಶ ಸೃಷ್ಟಿಸಲಿದೆ ಎಂಬುದಾಗಿ ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

ಕಾರ್ಖಾನೆ ಸ್ಥಾಪನೆಗಾಗಿ ಮುರಳೀಧರನ್ ಅವರು ಆರು ತಿಂಗಳ ಹಿಂದೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ (ಕೆಐಎಡಿಬಿ) ಭೂಮಿ ಖರೀದಿಸಿದ್ದರು.

ಮುತ್ತಯ್ಯ ಬಿವರೇಜಸ್ ಘಟಕದ ಕಾಮಗಾರಿ 9 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಕಾರ್ಖಾನೆ ಮೂಲಗಳು ತಿಳಿಸಿವೆ. ಮುತ್ತಯ್ಯ ಬೆವರೇಜಸ್ ಚಾಮರಾಜನಗರದ ಕೈಗಾರಿಕಾ ರಂಗದ ಚಹರೆಯನ್ನು ಬದಲಾಯಿಸಲಿದೆ ಮತ್ತು ಸ್ಥಳೀಯ ಜನರಿಗೆ ಉದ್ಯೋಗವನ್ನು ನೀಡಲಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಧಾರವಾಡಕ್ಕೆ ಎಂಟ್ರಿ: ಕಾರ್ಖಾನೆ ಆರಂಭಿಸಲಿರುವ ಮುತ್ತಯ್ಯ ಮುರಳಿಧರನ್

ಶ್ರೀಲಂಕಾದ ಮೆ. ಸಿಲೋನ್ ಬಿವರೇಜ್ ಕ್ಯಾನ್ ಪ್ರೈವೆಟ್ ಲಿಮಿಟೆಡ್ ಸಹಯೋಗದೊಂದಿಗೆ ಮುರಳೀಧರನ್ ಅವರು ಚಾಮರಾಜನಗರದಲ್ಲಿ ಉದ್ಯಮ ವಿಸ್ತರಣೆ ಯೋಜನೆ ಹಾಕಿಕೊಂಡಿದ್ದಾರೆ. ಕರ್ನಾಟಕ ಸರ್ಕಾರವು ಕ್ರಿಕೆಟ್ ಕ್ಷೇತ್ರದಲ್ಲಿ ಮುರಳೀಧರನ್ ಅವರ ಸಾಧನೆಯನ್ನು ಗುರುತಿಸಿ ಅವರ ಉದ್ಯಮಕ್ಕಾಗಿ ಭೂಮಿ ಗುತ್ತಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಧಾರವಾಡದಲ್ಲಿ ಉದ್ಯಮ ಸ್ಥಾಪಿಸಲು ಈಗಾಗಲೇ ಯೋಜನೆ ರೂಪಿಸಿರುವ ಮುರಳೀಧರನ್, ಎಫ್ಎಂಸಿಜಿ ಕ್ಲಸ್ಟರ್ ನಲ್ಲಿ ತನ್ನ ಘಟಕ ಸ್ಥಾಪಿಸಲು ಅನುಮತಿ ಹಾಗೂ ಸ್ಥಳಾವಕಾಶ ಕೋರಿ ಕರ್ನಾಟಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಎಲ್ಲವೂ ಯೋಜನೆ ಪ್ರಕಾರ ನಡೆದರೆ, ಮೂರು ತಿಂಗಳಲ್ಲಿ ಉದ್ದೇಶಿತ ಕೈಗಾರಿಕೆ ಸ್ಥಾಪನೆಯ ಪ್ರಾಥಮಿಕ ಕಾರ್ಯಗಳು ಆರಂಭವಾಗಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು