ಸ್ಪರ್ಧೆ ನಿಶ್ಚಿತ, 5 ಕ್ಷೇತ್ರ ಆಯ್ಕೆ ಮಾಡಿರುವೆ, ಬಿಜೆಪಿ ಟಿಕೆಟ್ ಕೊಡದಿದ್ದರೆ ನಾನು ಇಂಡಿಪೆಂಡೆಂಟ್ -ಪ್ರಮೋದ್ ಮುತಾಲಿಕ್ ಪ್ರಕಟ

Pramod Muthalik: ಎಸ್ಸಿ ಎಸ್ಟಿ ಮೀಸಲಾತಿ, ಮಹಿಳಾ ಮೀಸಲಾತಿ ಹಾಗೂ ಪದವೀಧರರಿಗೆ ಮೀಸಲಾತಿಯಂತೆ ಬಿಜೆಪಿಯಲ್ಲಿ ಹಿಂದುಗಳಿಗೂ ಮೀಸಲಾತಿ ನೀಡಬೇಕು ಎಂಬುದು ಮುತಾಲಿಕ್ ಆಗ್ರಹವಾಗಿದೆ.

ಸ್ಪರ್ಧೆ ನಿಶ್ಚಿತ, 5 ಕ್ಷೇತ್ರ ಆಯ್ಕೆ ಮಾಡಿರುವೆ, ಬಿಜೆಪಿ ಟಿಕೆಟ್ ಕೊಡದಿದ್ದರೆ ನಾನು ಇಂಡಿಪೆಂಡೆಂಟ್ -ಪ್ರಮೋದ್ ಮುತಾಲಿಕ್ ಪ್ರಕಟ
ಬಿಜೆಪಿ ಟಿಕೆಟ್ ಕೊಡದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗುವೆ -ಪ್ರಮೋದ್ ಮುತಾಲಿಕ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 21, 2022 | 2:53 PM

ಮೈಸೂರು: ಮುಂದಿನ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ (Karnataka assembly elections 2023) ಕರ್ನಾಟಕದಲ್ಲಿ ರಾಜಕೀಯ ಗರಿಗೆದರಿದೆ. ಸಂಭವನೀಯ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಅದಾಗಲೇ ಚುನಾವಣಾ ರಣತಂತ್ರ ರೂಪಿಸುವಲ್ಲಿ ನಿರತರಾಗಿದ್ದಾರೆ. ಈ ಮಧ್ಯೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Sri Rama Sene chief Pramod Muthalik) ಮೈಸೂರಿನಲ್ಲಿ ಮಾತನಾಡಿದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ನಿಶ್ಚಿತ ಎಂದಿದ್ದಾರೆ. ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ರಾಜ್ಯದ 6 ವಿಧಾನಸಭಾ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದೇನೆ. 5 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಪಕ್ಷೇತರವಾಗಿ ಸ್ಪರ್ಧಿಸಿದರೂ ಹಿಂದುತ್ವದ ಅಜೆಂಡಾದ ಮೂಲಕ ಗೆದ್ದು ಬರುತ್ತೇನೆ:

ತಾವು ಸ್ಪರ್ಧಿಸಬಯಸುವ 5 ಕ್ಷೇತ್ರಗಳು ಯಾವುವು ಎಂಬುದನ್ನೂ ಘೋಷಿಸಿರುವ ಪ್ರಮೋದ್ ಮುತಾಲಿಕ್ ಅವರು ಜಮಖಂಡಿ, ತೇರದಾಳ, ಧಾರವಾಡ ನಗರ, ಶೃಂಗೇರಿ ಮತ್ತು ಕಾರ್ಕಳ ವಿಧಾನಸಭಾ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರದ ದಾಖಲೆಗಳಿವೆ, ಮುಂದಿನ ದಿನದಲ್ಲಿ ನಿಮ್ಮ ಮೇಲೆ ಕೇಸ್ ಹಾಕುತ್ತೇನೆ: ಸುನಿಲ್​ ಕುಮಾ​ರ್​ಗೆ ಮುತಾಲಿಕ್​ ಎಚ್ಚರಿಕೆ

ಬಿಜೆಪಿ ಟಿಕೆಟ್​ ಕೊಡದಿದ್ದರೆ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ ಎಂದಿರುವ ಪ್ರಮೋದ್​ ಮುತಾಲಿಕ್ ಬಿಜೆಪಿಯಿಂದ 25 ಟಿಕೆಟ್​ ಕೇಳಿದ್ದೇವೆ. ಈ ಪೈಕಿ ಐವರು ಸ್ವಾಮೀಜಿಗಳಿಗೂ ಟಿಕೆಟ್ ನೀಡುವಂತೆ ಕೇಳಿದ್ದೇವೆ. ಒಂದು ವೇಳೆ ಟಿಕೆಟ್​​ ಕೊಡದಿದ್ರೆ ನಾವೆಲ್ಲ ಪಕ್ಷೇತರವಾಗಿ ಸ್ಪರ್ಧೆ ಮಾಡ್ತೇವೆ. ಪಕ್ಷೇತರವಾಗಿ ಸ್ಪರ್ಧಿಸಿದರೂ ಹಿಂದುತ್ವದ ಅಜೆಂಡಾ (Hindutva) ಮೂಲಕ ಗೆದ್ದು ಬರುತ್ತೇನೆ ಎಂದು ಮೈಸೂರಿನಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಮುತಾಲಿಕ್ ಹೇಳಿದ್ದಾರೆ. ಎಸ್ಸಿ ಎಸ್ಟಿ ಮೀಸಲಾತಿ, ಮಹಿಳಾ ಮೀಸಲಾತಿ ಹಾಗೂ ಪದವೀಧರರಿಗೆ ಮೀಸಲಾತಿಯಂತೆ ಬಿಜೆಪಿಯಲ್ಲಿ ಹಿಂದುಗಳಿಗೂ ಮೀಸಲಾತಿ ನೀಡಬೇಕು ಎಂಬುದು ಮುತಾಲಿಕ್ ಆಗ್ರಹವಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಕುರಿತಾದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:47 pm, Wed, 21 December 22

ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ