AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ನಿವಾಸದ ಮೇಲೆ ಕಲ್ಲು ಎಸೆದವ ಅರೆಸ್ಟ್​​, ವಿಚಾರಣೆ ವೇಳೆ ಆರೋಪಿಯ ಮತ್ತಷ್ಟು ಕೃತ್ಯಗಳು ಬಯಲಿಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖಾಸಗಿ ನಿವಾಸದ ಮೇಲೆ ಕಲ್ಲು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ಆರೋಪಿ ಸತ್ಯಮೂರ್ತಿ ಸಾಮಾಜಿಕ ಜಾಲತಾಣದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕಿರುವುದಾಗಿ ಬಹಿರಂಗವಾಗಿದೆ.

ಸಿದ್ದರಾಮಯ್ಯ ನಿವಾಸದ ಮೇಲೆ ಕಲ್ಲು ಎಸೆದವ ಅರೆಸ್ಟ್​​, ವಿಚಾರಣೆ ವೇಳೆ ಆರೋಪಿಯ ಮತ್ತಷ್ಟು ಕೃತ್ಯಗಳು ಬಯಲಿಗೆ
ಸಿದ್ದರಾಮಯ್ಯ ಮನೆ (ಎಡಚಿತ್ರ) ಆರೋಪಿ ಸತ್ಯಮೂರ್ತಿ (ಬಲಚಿತ್ರ)
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ|

Updated on:Oct 11, 2023 | 7:40 AM

Share

ಮೈಸೂರು ಅ.11: ಮಂಗಳವಾರ ಮುಂಜಾನೆ ಮೈಸೂರಿನ ಟಿಕೆ ಲೇಔಟ್‌ನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಖಾಸಗಿ ನಿವಾಸದ ಮೇಲೆ ಕಲ್ಲು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಸ್ವತಿಪುರಂ ಠಾಣೆ ಪೊಲೀಸರು (Police) ಆರೋಪಿಯನ್ನು ಬಂಧಿಸಿದ್ದಾರೆ. ಸತ್ಯಮೂರ್ತಿ ಆರೋಪಿ. ಸತ್ಯಮೂರ್ತಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಕಲ್ಲು ಎಸೆದು ಪರಾರಿಯಾಗಿದ್ದನು. ಪ್ರಕರಣ ಸಂಬಂಧ ಆರೋಪಿ ವಿರುದ್ಧ ಸರಸ್ವತಿಪುರಂ ಪೊಲೀಸ್ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಸೆಕ್ಷನ್​​ 427 353 ಹಾಗೂ 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ನಂತರ ಸರಸ್ವತಿಪುರಂ ಇನ್ಸಪೆಕ್ಟರ್ ರವೀಂದ್ರ ನೇತೃತ್ವದ ತಂಡ ಆರೋಪಿಯ ಕಾರ್ಯಾಚರಣೆಗೆ ಇಳಿದಿತ್ತು. ಆರೋಪಿ ಸತ್ಯಮೂರ್ತಿ ಮೈಸೂರು ಹೊರವಲಯದಲ್ಲಿ ತಲೆ ಮರೆಸಿಕೊಂಡಿರುವ ಸುಳಿವು ಸಿಕ್ಕಿದೆ. ಕೂಡಲೆ ಸ್ಥಳಕ್ಕೆ ಧಾವಿಸಿದ ಪೊಲೀಸರ ತಂಡ ಆರೋಪಿ ಸತ್ಯಮೂರ್ತಿಯನ್ನು ವಶಕ್ಕೆ ಪಡೆಯಲು ಮುಂದಾದರು. ಈ ವೇಳೆ ಸತ್ಯಮೂರ್ತಿ ಸಬ್ ಇನ್ಸಪೆಕ್ಟರ್ ಮಹೇಂದ್ರ ಹಾಗೂ ಇತರ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ. ಕೊನೆಗೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಆರೋಪಿ ಸತ್ಯಮೂರ್ತಿಯನ್ನು ಬಂಧಿಸಿದ್ದಾರೆ.

ಪೊಲೀಸರು ಆರೋಪಿ ಸತ್ಯಮೂರ್ತಿಯನ್ನು ಮೈಸೂರಿನ 3ನೇ ಜೆಎಂಎಫ್​ಸಿ ನ್ಯಾಯಾಲಯದ ನ್ಯಾಯಾದೀಶರ ಮುಂದೆ ಹಾಜರುಪಡಿಸಿದರು. ಆರೋಪಿ ಸತ್ಯಮೂರ್ತಿಯನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಸರ್ವೆಗೆ ಹೋಗಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಕಲ್ಲು ತೂರಾಟ

ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್‌

ಇನ್ನು ಪೊಲೀಸರ ತನಿಖೆ ವೇಳೆ ಆರೋಪಿ ಸತ್ಯಮೂರ್ತಿ ಸಾಮಾಜಿಕ ಜಾಲತಾಣದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕಿರುವುದಾಗಿ ಬಹಿರಂಗವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್ ಕಮಿಷನರ್, ಡಿಸಿಪಿ ಮತ್ತು ಎಸಿಪಿ ವಿರುದ್ಧ, ದಸರಾ ಮುಗಿಯುವವರೆಗೂ ಎಲ್ಲಾ ಅಧಿಕಾರಿಗಳು ವಿದೇಶಕ್ಕೆ ಹೋಗಿ ಅಂತ ಬರೆದುಕೊಂಡಿದ್ದಾನೆ. ಅಲ್ಲದೆ ವೈಯಕ್ತಿಕ ಚಾರಿತ್ರ್ಯ ಹರಣ ಮಾಡಿದ್ದಾನೆ. ಮತ್ತು ಸಂಸದ ಪ್ರತಾಪ ಸಿಂಹ್ ಅವರ​​ ವಿರುದ್ಧ ನಿಮಗೆ ಸಂಬಳ ಕೊಡುವುದು ದಸರಾ ಫಿರಂಗಿ ಪೂಜೆ ಮಾಡಲು ಅಲ್ಲ ಎಂದು ಪೋಸ್ಟ್ ಮಾಡಿದ್ದಾನೆ.

ನಟ ಪ್ರಕಾಶ್ ರಾಜ್ ಅವರ ಭಾವಚಿತ್ರ ಹಾಕಿ, ಅಧಿಕಾರಿಗಳ ಕರ್ತವ್ಯ ಪ್ರಶ್ನೆ ಮಾಡಲ್ಲ ಪ್ರಾಮಾಣಿಕರನ್ನು ಪ್ರಶ್ನೆ ಮಾಡಿ ಹಿಂಸೆ ನೀಡುತ್ತಾರೆ. ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಗಾಂಧಿ ಜಯಂತಿ ದಿನ ಸ್ವಚ್ಛತೆಯಲ್ಲಿ ತೊಡಗಿರುವ ಹಾಕಿರುವ ಭಾವಚಿತ್ರ ಹಾಕಿ, ಪ್ರಧಾನಿಗಳು ಮತ್ತು ರಾಷ್ಟ್ರಪತಿಗಳು ಎರಡು ವಾರ ರಜೆ ಪಡೆದು ಆರೋಗ್ಯ ಕಾಪಾಡಿಕೊಳ್ಳಿ ಅಂತ ಮನವಿ ಮಾಡಿದ್ದಾನೆ.

ಉಸ್ತುವಾರಿ ಸಚಿವರ ಬಳಿ ಸಮಸ್ಯೆ ಹೇಳಿಕೊಂಡಿದ್ದ ಆರೋಪಿ

ಪೊಲೀಸರು ಆರೋಪಿ ಸತ್ಯಮೂರ್ತಿ ದಿನಚರಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ಕೆಲ ದಿನಗಳ ಹಿಂದೆ ಮೈಸೂರು ಅರಮನೆಗೆ ಭೇಟಿ ನೀಡಿದ್ದನು. ಅರಮನೆಯಲ್ಲಿ ದಸರಾ ಗಜಪಡೆ ಬಳಿ ತೆರಳಿದ್ದನು. ಅಲ್ಲಿ ಗಜಪಡೆಗಳ ಜೊತೆ ಸೆಲ್ಫಿ ವಿಡಿಯೋ ಮಾಡಿಕೊಂಡಿದ್ದನು. ಹಾಗೆ ಉಸ್ತುವಾರಿ ಸಚಿವ ಮಹದೇವಪ್ಪ ಅವರು ನಡೆಸಿದ್ದ ಜನತಾ ದರ್ಶನಕ್ಕೂ ಬಂದಿದ್ದನು. ಈ ವೇಳೆ ಸಚಿವರ ಬಳಿ ಮತ್ತು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಬಳಿ ಹಲವು ಸಮಸ್ಯೆ ಹೇಳಿಕೊಂಡಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:22 am, Wed, 11 October 23

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?