Mysore News: ಖೋಖೋ ಆಟದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು; ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಖೋಖೋ ಆಟದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿಯೊರ್ವ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಶಾಂಕ್(13) ಮೃತ ವಿದ್ಯಾರ್ಥಿ.
ಮೈಸೂರು: ಖೋಖೋ ಆಟದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ(Student Death)ಯೊರ್ವ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ನಂಜನಗೂಡು(Nanjangud) ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಶಾಂಕ್(13) ಮೃತ ವಿದ್ಯಾರ್ಥಿ. ಗ್ರಾಮದ ಎಚ್. ಎಸ್ ಪಾಪಣ್ಣ ಮತ್ತು ಕುಮಾರಿ ದಂಪತಿ ಪುತ್ರನಾದ ಮೃತ ಶಶಾಂಕ್ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ. ಇನ್ನು ಶಾಲಾ ಅವಧಿ ಮುಗಿದ ನಂತರ ವಿದ್ಯಾರ್ಥಿಗಳು ಖೋಖೋ ಅಭ್ಯಾಸ ಮಾಡುತ್ತಿದ್ದರು. ಈ ವೇಳೆ ಶಶಾಂಕ್ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನ ಹೆಚ್.ಡಿ ಕೋಟೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶಶಾಂಕ್ ಸಾವನ್ನಪ್ಪಿದ್ದಾನೆ. ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಿರ್ಮಾಣ ಹಂತದ ಶಾಲೆ ಕಟ್ಟಡ ಕುಸಿದು ಬಿದ್ದು ವಿದ್ಯಾರ್ಥಿ ಸಾವು
ಧಾರವಾಡ: ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಕಿರೇಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಿರ್ಮಾಣ ಹಂತದ ಗೋಡೆ ಕುಸಿದು 9 ವರ್ಷದ ವಿದ್ಯಾರ್ಥಿ ವಿಶೃತ್ ಬೆಳಗಲಿ ಸಾವನ್ನಪ್ಪಿದ್ದ. ವಿಶೃತ್ ಬೆಳಗ್ಗೆ ಬೇಗ ಶಾಲೆಗೆ ಹೋಗಿದ್ದ. ಇನ್ನು ಶಾಲೆಯ ಸಮಯವಾಗಿರದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಯಾವುದೇ ಶಿಕ್ಷಕರು ಇರಲಿಲ್ಲ. ಹೀಗಾಗಿ ನಿರ್ಮಾಣದ ಹಂತದ ಕಟ್ಟಡ ಬಳಿಗೆ ಮೂತ್ರವಿಸರ್ಜನೆಗೆ ತೆರಳಿದ್ದು, ಈ ವೇಳೆ ಏಕಾಏಕಿ ಗೋಡೆ ಕುಸಿದು ಇವರ ಮೇಲೆ ಬಿದ್ದಿದೆ. ಗೋಡೆ ಬಿದ್ದ ರಭಸಕ್ಕೆ ವಿಶೃತ್ ಸ್ಥಳದಲ್ಲೇ ಸಾವಿನಪ್ಪಿದ್ದ. ಇನ್ನು ಸ್ನೇಹಿತನನ್ನು ಕಾಪಾಡಲು ಹೋದ ಪ್ರಭು ನಾಗಾವಿ ಮೇಲೆ ಕೂಡ ಇಟ್ಟಿಗೆ ಬಿದ್ದು, ಕಾಲುಗಳಿಗೆ ಗಂಭೀರ ಗಾಯಗಳಾಗಿತ್ತು.
ಇದನ್ನೂ ಓದಿ:ಮಂಗಳೂರು: ನರ್ತನ ವೇಳೆಯೇ ಕುಸಿದು ಬಿದ್ದು ದೈವ ನರ್ತಕ ಸಾವು
ವಿದ್ಯಾರ್ಥಿ ಸಾವಿಗೆ ಗುತ್ತಿಗೆದಾರನ ನಿರ್ಲಕ್ಷ್ಯವೇ ಕಾರಣವೇ?
ಇನ್ನು ವಿದ್ಯಾರ್ಥಿಯ ಸಾವಿಗೆ ಗುತ್ತಿಗೆದಾರನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದೆ. ಹೌದು ಕಳಪೆ ಕಟ್ಟಡ ಕಾಮಗಾರಿ ಮಾಡಿದ್ದು ಒಂದು ಕಡೆಯಾದರೆ, ಮತ್ತೊಂದು ಕಡೆ ಕಟ್ಟಡಕ್ಕೆ ಭದ್ರತಾ ಸಿಬ್ಬಂದಿ ನೇಮಿಸುವಂತೆ ಶಾಲಾ ಆಡಳಿತ ಮಂಡಳಿ ಹೇಳಿದ್ದರೂ ಕೂಡ ಯಾವುದೇ ಕಾವಲುಗಾರರನ್ನು ನೇಮಿಸದೇ ಇರುವುದು ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ. ಸದ್ಯ ಪ್ರಭುಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟಿನಲ್ಲಿ ಯಾರದ್ದೋ ನಿರ್ಲಕ್ಷ್ಯಕ್ಕೆ ಅರಳುವ ಮುನ್ನವೇ ಹಸಿ ಕಂದಮ್ಮನ ಜೀವನ ಕಮರಿಹೋಗಿದೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ