AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ

ಮೈಸೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಉಪನ್ಯಾಸಕನ ವಿರುದ್ಧ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಉತ್ತಮ ಅಂಕ ಮತ್ತು ಕೆಲಸದ ಆಮಿಷವೊಡ್ಡಿದ್ದಲ್ಲದೆ, ತನ್ನ ಖಾಸಗಿ ಅಂಗಗಳ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ಬಗ್ಗೆ ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಘಟನೆ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ
ಸಾಂದರ್ಭಿಕ ಚಿತ್ರ
ರಾಮ್​, ಮೈಸೂರು
| Edited By: |

Updated on: Nov 16, 2025 | 8:07 AM

Share

ಮೈಸೂರು, ನವೆಂಬರ್​ 16: ನಗರದ ಪ್ರತಿಷ್ಠಿತ ಇಂಜಿನಿಯರಿಂಗ್​​ ಕಾಲೇಜಿನಲ್ಲಿ ಉಪನ್ಯಾಸಕನೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಹೆಚ್ಚು ಮಾರ್ಕ್ಸ್ ನೀಡ್ತೇನೆ, ಒಳ್ಳೇ ಕೆಲಸ ಕೊಡಿಸುತ್ತೇನೆ. ಹೊರಗಡೆ ಪಬ್‌ಗೆ ಹೋಗಿ ಮಜಾ ಮಾಡೋಣ ಬಾ ಅಂತಾ ಕಿರುಕುಳ ನೀಡಿರೋದಾಗಿ ವಿದ್ಯಾರ್ಥಿನಿ ದೂರು ನೀಡಿದ್ದು, ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ FIR ದಾಖಲಾಗಿದೆ.

ಉಪನ್ಯಾಸಕ ನೀಡುತ್ತಿದ್ದ ಲೈಂಗಿಕ ಕಿರುಕುಳದ ಬಗ್ಗೆ ವಿದ್ಯಾರ್ಥಿನಿ ಮಹಿಳಾ ಉಪನ್ಯಾಸಕರ ಬಳಿ ದೂರಿದ್ದಳು. ಈ ವಿಚಾರಕ್ಕೆ ವಿದ್ಯಾರ್ಥಿನಿಕೆ ಕರೆ ಮಾಡಿದ್ದ ಉಪನ್ಯಾಸಕ ಭರತ್ ಭಾರ್ಗವ, ತಾನು ಹೇಳಿದಂತೆ ಕೇಳದಿದ್ದರೆ ಫೇಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ತನ್ನ ಖಾಸಗಿ ಅಂಗಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ ಎಂದು ವಿದ್ಯಾರ್ಥಿನಿ ದೂರಿನಲ್ಲಿ ಆರೋಪಿಸಿದ್ದಾಳೆ. ಉಪನ್ಯಾಸಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾಳೆ. ಆಕೆಯ ದೂರಿನ ಅನ್ವಯ ಉಪನ್ಯಾಸಕನ ವಿರುದ್ಧ BNS ಸೆಕ್ಷನ್ 126(2), 75(2), 351(2) ಅಡಿಯಲ್ಲಿ, ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:  ಆನ್​ಲೈನ್ ಟ್ರೇಡಿಂಗ್​​ ಹೆಸರಲ್ಲಿ ವಂಚನೆ, ಹೆಚ್ಚು ಹಣದ ಆಸೆಗೆ ಇದ್ದ ದುಡ್ಡನ್ನೂ ಕಳೆದುಕೊಂಡ ವ್ಯಕ್ತಿ

ಅಪ್ರಾಪ್ತೆ ಮೇಲೆ ಅತ್ಯಾಚಾರ

ಅಪ್ರಾಪ್ತೆ ಮೇಲೆ ಮನೆ ಮಾಲೀಕನೇ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಕ್ಕದ ಮನೆಯಲ್ಲಿ ಮಗಳನ್ನು ಬಿಟ್ಟು ಮನೆಯವರು ಹೊರ ಹೋಗಿದ್ದು, ಈ ವೇಳೆ ಮನೆಯ ಮಹಿಳೆ ಮನೆಯ ಮಾಲೀಕನನ್ನು ಕರೆಸಿದ್ದಾಳೆ. ಆತ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದು, ಮಹಿಳೆಯೂ ಇದಕ್ಕೆ ಸಾಥ್​ ಕೊಟ್ಟಿದ್ದಾಳೆ ಎನ್ನಲಾಗಿದೆ. ಹೊಟ್ಟೆನೋವು ಎಂದು ಸಂತ್ರಸ್ತ ಬಾಲಕಿಯನ್ನ ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಆರೋಪಿಗಳಾದ ಚಂದ್ರಶೇಖರ ಮತ್ತು ಮಂಜೂರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ದ ಪೋಕ್ಸೋ ಮತ್ತು ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.