ಹುಳು ಬಿದ್ದಿದ್ದ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಹುಳು ಬಿದ್ದಿದ್ದ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮೈಸೂರು: ಹುಳು ಬಿದ್ದಿದ್ದ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಹೆಚ್​.ಡಿ.ಕೋಟೆ ತಾಲೂಕಿನ ಆದರ್ಶ ಶಾಲೆಯಲ್ಲಿ ನಡೆದಿದೆ. ಮಧ್ಯಾಹ್ನದ ಬಿಸಿಯೂಟವನ್ನು 6ನೇ ತರಗತಿ ವಿದ್ಯಾರ್ಥಿಗಳು ಮಾತ್ರ ಸೇವಿಸಿದ್ದರು.

ಊಟದಲ್ಲಿ ಹುಳು ಕಂಡ ತಕ್ಷಣ ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡಿದ್ದಾರೆ. ಕೂಡಲೇ ಎಚ್ಚೆತ್ತ ಶಾಲಾ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಊಟ ಬಡಿಸುವುದನ್ನು ಸ್ಥಗಿತಗೊಳಿಸಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.



Click on your DTH Provider to Add TV9 Kannada