ನಾನು ಮಾಡಿದ ಕೆಲಸ ಮಾಡಿಲ್ಲ ಅಂದರೆ ನಾನು ಸುಮ್ಮನಿರಲ್ಲ: ಸುಮಲತಾ ಅಂಬರೀಶ್ ವಾಗ್ದಾಳಿ

ನಾನು ಏನೇ ಮಾಡಿದರು ವಿರೋಧ ಮಾಡಬೇಕೆಂದು ಅವರು ನಿರ್ಧರಿಸಿದ್ದಾರೆ. ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ನಾನು ಕೆಲಸ ಮಾಡುತ್ತೇನೆ ಜನ ನನ್ನ ಪರ ಮಾತನಾಡುತ್ತಾರೆ ಅನ್ನೋ ಭಯ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.

ನಾನು ಮಾಡಿದ ಕೆಲಸ ಮಾಡಿಲ್ಲ ಅಂದರೆ ನಾನು ಸುಮ್ಮನಿರಲ್ಲ: ಸುಮಲತಾ ಅಂಬರೀಶ್ ವಾಗ್ದಾಳಿ
ಸುಮಲತಾ ಅಂಬರೀಶ್
Follow us
TV9 Web
| Updated By: ganapathi bhat

Updated on:Mar 09, 2022 | 12:46 PM

ಮೈಸೂರು: ಮಂಡ್ಯದಲ್ಲಿ ಕೆಲಸಕ್ಕಿಂತ ಕ್ರೆಡಿಟ್‌ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಾನು ಮಾಡಿರುವುದನ್ನು ಇಲ್ಲ ಅಂದಾಗ ಸುಮ್ಮನಿರಲು ಸಾಧ್ಯವಿಲ್ಲ. ಜನ ವಿಶ್ವಾಸ ಇಟ್ಟು ನನ್ನನ್ನು ಆಯ್ಕೆ ಮಾಡಿದ್ದಾರೆ. ಕ್ರೆಡಿಟ್ ತೆಗೆದುಕೊಳ್ಳಲು ನಾನು ಮಾಡಲ್ಲ. ನಿಜ ಹೇಳಲು ಭಯ ಏಕೆ? ಕ್ರೆಡಿಟ್ ವಾರ್ ಯಾರು ಆರಂಭಿಸುತ್ತಾರೋ ಅವರು ಅವರ ಜವಾಬ್ದಾರಿ ಬಗ್ಗೆ ನೋಡಿಕೊಳ್ಳಬೇಕು. ಸಂಸದರ ಕ್ರೆಡಿಟ್ ಪಡೆಯುವುದಕ್ಕೆ ಏಕೆ ಬರುತ್ತಿದ್ದಾರೋ ಗೊತ್ತಿಲ್ಲ ಎಂದು ಮೈಸೂರಿನಲ್ಲಿ ಸಂಸದೆ ಸುಮಲತಾ ಹೇಳಿಕೆ ನೀಡಿದ್ದಾರೆ. ಶಿಂಷಾ ಸೇತುವೆ ವಿಚಾರ ನಾನು ಪ್ರತಿಭಟನಾ ಸ್ಥಳಕ್ಕೆ ಹೋಗಿದ್ದೇನೆ. ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ. ನಾಲ್ಕು ಬಾರಿ ಅವರನ್ನು ಭೇಟಿ ಮಾಡಿದ್ದೇನೆ. ಆಯಾ ಕ್ಷೇತ್ರದ ಸಂಸದ ಆಯಾ ಕ್ಷೇತ್ರದ ಬಗ್ಗೆ ಕೇಳಿದರೆ ಪ್ರತಿಕ್ರಿಯೆ ಸಿಗುತ್ತದೆ. ಯಾರು ಬೇಕಾದರೂ ಪತ್ರ ಬರೆದಿರಬಹುದು. ಮಾಜಿ ಪ್ರಧಾನಿ ಅಥವಾ ಬೇರೆಯವರು ಬರೆದಿರಬಹುದು. ಅವರು ಏನು ಬರೆದಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ನನ್ನ ಕ್ಷೇತ್ರದ ವಿಚಾರವಾಗಿ ನಾನು ಕೆಲಸ ಮಾಡುತ್ತೇನೆ. ನಾನು ಮಾಡಿದ ಕೆಲಸ ಮಾಡಿಲ್ಲ ಅಂತಾ ಹೇಳಿದರೆ ನಾನು ಸುಮ್ಮನಿರಲ್ಲ. ಟಾರ್ಗೆಟ್ ಮಾಡುವುದು ಮೊದಲ ದಿನದಿಂದಲೂ ನಡೆದಿದೆ. ನನ್ನ ಜಿಲ್ಲೆಗೆ ಸಂಬಂಧಪಟ್ಟ ವಿಚಾರ ಮಾತ್ರ ನಾನು ಮಾತನಾಡುತ್ತೇನೆ. ನಾನು ಏನೇ ಮಾಡಿದರು ವಿರೋಧ ಮಾಡಬೇಕೆಂದು ಅವರು ನಿರ್ಧರಿಸಿದ್ದಾರೆ. ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ನಾನು ಕೆಲಸ ಮಾಡುತ್ತೇನೆ ಜನ ನನ್ನ ಪರ ಮಾತನಾಡುತ್ತಾರೆ ಅನ್ನೋ ಭಯ ಎಂದು ತಿಳಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ ಕೆ.ಆರ್.ನಗರ, ಕೆ.ಆರ್.ಪೇಟೆ, ಶ್ರೀರಂಗಪಟ್ಟಣದಲ್ಲಿ ರೈಲುಗಳ ನಿಲುಗಡೆ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ. ಶ್ರೀರಂಗಪಟ್ಟಣವನ್ನು ಉತ್ತಮ ಪ್ರವಾಸಿ ತಾಣ ಮಾಡಬೇಕೆಂಬ ಕನಸು ನನ್ನದು. ಸಿಎಂ ಸಹ ಬಜೆಟ್‌ನಲ್ಲಿ ಪ್ರವಾಸಿ ತಾಣಗಳಿಗೆ ಆದ್ಯತೆ ನೀಡಿದ್ದಾರೆ ಎಂದು ಸುಮಲತಾ ತಿಳಿಸಿದ್ದಾರೆ. ಅವರು ಪಾಂಡವಪುರ, ಶ್ರೀರಂಗಪಟ್ಟಣದಲ್ಲಿ ರೈಲು ನಿಲುಗಡೆ ವಿಚಾರವಾಗಿ ರೈಲ್ವೆ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ. ಡಿಆರ್‌ಎಂ ರಾಹುಲ್ ಅಗರ್ವಾಲ್, ಸೀನಿಯರ್ ಡಿವಿಜನಲ್ ಇಂಜಿನಿಯರ್ ರವಿಚಂದ್ರನ್, ರೈಲ್ವೆ ಅಧಿಕಾರಿ ಮಂಜುನಾಥ್ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ರಷ್ಯಾ ಉಕ್ರೇನ್ ಯುದ್ಧದ ನಡುವೆ ಭಾರತೀಯ ನಾಗರಿಕರನ್ನು ಏರ್​ಲಿಫ್ಟ್ ಮಾಡಿರುವ ಬಗ್ಗೆ ಸುಮಲತಾ ಮಾತನಾಡಿದ್ದಾರೆ. ಉಕ್ರೇನ್​​ನಿಂದ ಕರೆತರುವುದು ಸುಲಭದ ಪರಿಸ್ಥಿತಿ ಆಗಿರಲಿಲ್ಲ. ಇಲ್ಲಿ ಬಟನ್ ಒತ್ತಿದರೆ ಅಲ್ಲಿ ವಿಮಾ‌ನ ಇಳಿಸಲು ಸಾಧ್ಯವಿಲ್ಲ. ಎಲ್ಲರನ್ನೂ ಕರೆದುಕೊಂಡು ಬಂದಿದ್ದು ಟ್ರೆಮೆಂಡಸ್ ಜಾಬ್. ಅಲ್ಲಿನ ಪರಿಸ್ಥಿತಿ ಅರ್ಥ ಮಾಡಿಕೊಂಡ ಮಾತನಾಡಬೇಕು. ವಿದೇಶಾಂಗ ಇಲಾಖೆಯ ಕಾರ್ಯವೈಖರಿ ಬಗ್ಗೆ ಗೊತ್ತಿದೆ. ಪ್ರತಿ ವಿಷಯವನ್ನು ರಾಜಕೀಯ ಮಾಡಬಾರದು ಎಂದು ಮೈಸೂರಿನಲ್ಲಿ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಹೇಳಿದ್ದಾರೆ.

ರಾಜಕೀಯ ಒತ್ತಡದಲ್ಲಿ ಸಿನಿಮಾರಂಗವನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ

ರಾಜಕೀಯ ಒತ್ತಡದಲ್ಲಿ ಸಿನಿಮಾರಂಗವನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಆದರೂ ಒತ್ತಡದ ನಡುವೆಯೂ ಈ ವರ್ಷ ಒಂದು ಸಿನಿಮಾದಲ್ಲಿ ನಟಿಸಿದ್ದೇನೆ. ಚಿತ್ರರಂಗ ನನ್ನ ಕುಟುಂಬ ಇದ್ದಂತೆ. ಚಿತ್ರರಂಗ ನನಗೆ ಎಲ್ಲವನ್ನೂ‌ ನೀಡಿದೆ. ಅಲ್ಲಿ ಉತ್ತಮ ನೆನಪುಗಳಿವೆ ಯಾವತ್ತು ನಾನು ಚಿತ್ರರಂಗದ ಜೊತೆ ಇರುತ್ತೇನೆ ಎಂದು ಸುಮಲತಾ ತಿಳಿಸಿದ್ದಾರೆ.

ಇದನ್ನೂ ಓದಿ: ಶಾಸಕರು ಮಾಡಬೇಕಾದ ಕೆಲಸಗಳನ್ನ ನಾನು ಮಾಡ್ತಿದ್ದೇನೆ: ಜೆಡಿಎಸ್ ಶಾಸಕರತ್ತ ಚಾಟಿ ಬೀಸಿದ ಸಂಸದೆ ಸುಮಲತಾ

ಇದನ್ನೂ ಓದಿ: ಅಂಬರೀಷ್​ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ; ಅವರು ಸಂಪಾದಿಸಿದ್ದು ಹಣವನ್ನಲ್ಲ, ಅಭಿಮಾನಿಗಳನ್ನು ಎಂದ ಸುಮಲತಾ

Published On - 12:24 pm, Wed, 9 March 22

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?