AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಹೋರಾಟದಲ್ಲಿ ಭಾಗಿಯಾದವರಿಗೆ ಸಮನ್ಸ್: ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಈ ಮೊದಲೂ ಹಲವು ಬಾರಿ ಪ್ರಕರಣ ಹಿಂಪಡೆಯುವಂತೆ ಸರ್ಕಾರಗಳಿಗೆ ಹೋರಾಟಗಾರರು ಮನವಿ ಮಾಡಿದ್ದರು.

ಕಾವೇರಿ ಹೋರಾಟದಲ್ಲಿ ಭಾಗಿಯಾದವರಿಗೆ ಸಮನ್ಸ್: ಉಪವಾಸ ಸತ್ಯಾಗ್ರಹದ ಎಚ್ಚರಿಕೆ
ಕಾವೇರಿ ಹೋರಾಟ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Nov 10, 2021 | 3:12 PM

Share

ಮಂಡ್ಯ: ಜಿಲ್ಲೆಯ ಪಾಂಡವಪುರದಲ್ಲಿ (Pandavapura) 2016ರಲ್ಲಿ ನಡೆದಿದ್ದ ಕಾವೇರಿ ಹೋರಾಟದಲ್ಲಿ ಭಾಗಿಯಾದ್ದ 139 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಸರ್ಕಾರ ಹಿಂಪಡೆದಿಲ್ಲ. ಹೋರಾಟದಲ್ಲಿ ಭಾಗಿಯಾದವರಿಗೆ ಇದೀಗ ಮತ್ತೆ ಕೋರ್ಟ್​ನಿಂದ ಸಮನ್ಸ್ ಜಾರಿಮಾಡಲಾಗಿದೆ. ಈ ಮೊದಲೂ ಹಲವು ಬಾರಿ ಪ್ರಕರಣ ಹಿಂಪಡೆಯುವಂತೆ ಸರ್ಕಾರಗಳಿಗೆ ಹೋರಾಟಗಾರರು ಮನವಿ ಮಾಡಿದ್ದರು. ಸರ್ಕಾರವು ಪ್ರಕರಣ ಹಿಂಪಡೆಯುವ ಭರವಸೆ ನೀಡಿತ್ತು. ಆದರೆ ಈ ಭರವಸೆ ಈಡೇರಿರಲಿಲ್ಲ. ಹೀಗಾಗಿ ಹೋರಾಟಗಾರರು ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ತಿಂಗಳೊಳಗೆ ಪ್ರಕರಣ ವಾಪಸ್ ಪಡೆಯಬೇಕು, ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಇದೀಗ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.

2016ರಲ್ಲಿ ಕಾವೇರಿ ನೀರಿಗಾಗಿ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ವೇಳೆ ಕಲ್ಲು ತೂರಾಟವಾಗಿ ಸಾರ್ವಜನಿಕ ಆಸ್ತಿಗೆ ಹಾನಿಯಾಗಿದ್ದ ಹಿನ್ನೆಲೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ 139 ಮಂದಿ ಮೇಲೆ ಪಬ್ಲಿಕ್ ಪ್ರಾಪರ್ಟಿ ಡ್ಯಾಮೇಜ್ ಆಕ್ಟ್ ಅಡಿ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಪ್ರಕರಣ ಹಿಂಪಡೆಯುವಂತೆ ಹಲವು ಬಾರಿ ಹೋರಾಟಗಾರರು ಮನವಿ ಮಾಡಿದ್ದರು. ಈ ಕುರಿತು ಭರವಸೆಗಳನ್ನು ಕೊಟ್ಟಿದ್ದ ಸರ್ಕಾರ ನಂತರದ ದಿನಗಳಲ್ಲಿ ಈಡೇರಿಸುವುದನ್ನು ಮರೆತಿತ್ತು. ಹೋರಾಟದಲ್ಲಿ ಭಾಗಿಯಾಗಿದ್ದಕ್ಕೆ ನ್ಯಾಯಾಲಯಗಳಿಗೆ ಅಲೆಯಬೇಕಾಗಿರುವ ದುಸ್ಥಿತಿ ಒದಗಿದೆ ಎಂದು ಪ್ರತಿಭಟನೆ ನಡೆಸಿದ್ದರು ಇದೀಗ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಕಾವೇರಿ ಜಲ ವಿವಾದ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ವಿವಾದಕ್ಕೆ ಶತಮಾನಗಳ ಹಿನ್ನೆಲೆಯಿದೆ. ಕಾವೇರಿ ನದಿ ನೀರು ಹಂಚಿಕೆ ಕುರಿತು 6 ವರ್ಷಗಳ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧಿಕರಣ 2007ರ ಫೆ.5ರಂದು ಕಾವೇರಿ ನದಿ ಪಾತ್ರದಲ್ಲಿ 740 ಟಿಎಂಸಿ ನೀರು ಲಭ್ಯವಿದೆ. ಇದರಲ್ಲಿ 419 ಟಿಎಂಸಿ ನೀರು ತಮಿಳುನಾಡಿಗೆ, ಕರ್ನಾಟಕಕ್ಕೆ 270 ಟಿಎಂಸಿ, ಕೇರಳಕ್ಕೆ 30 ಟಿಎಂಸಿ, ಪಾಂಡಿಚೇರಿಗೆ 7 ಟಿಎಂಸಿ ಮತ್ತು 4 ಟಿಎಂಸಿ ನೀರು ಸಮುದ್ರಕ್ಕೆ ಹರಿಯುಲು ಬಿಡುವಂತೆ ಅಂತಿಮ ತೀರ್ಪು ನೀಡಿತ್ತು. 2007 ಫೆ.5ರಲ್ಲಿ ಹೊರಡಿಸಿದ್ದ ಅಂತಿಮ ಐತೀರ್ಪಿನ ಅಧಿಸೂಚನೆ ಹೊರಬಿದ್ದಿದ್ದು 6 ವರ್ಷಗಳ ಬಳಿಕ. ಅಂದರೆ 2013 ಫೆ. 20ರಂದು. ಅಂದಿನಿಂದ ಇಂದಿನ ವರೆಗೆ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಕನ್ನಡಿಗರು ಹೋರಾಟ ಮಾಡಿಕೊಂಡೇ ಬಂದಿದ್ದಾರೆ.

ಇದನ್ನೂ ಓದಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ: ನಡೆಯಲಿಲ್ಲ ಮೇಕೆದಾಟು ಯೋಜನೆಯ ಚರ್ಚೆ ಇದನ್ನೂ ಓದಿ: ಕಾವೇರಿ ಕೂಗು ಯೋಜನೆ ವಿರುದ್ಧದ ಪಿಐಎಲ್ ವಜಾ; ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ