850 ಎಕರೆ ಚಾಮುಂಡಿ ಬೆಟ್ಟದ ಭೂ ವಿವಾದ; ಅಂದಿನ ಡಿಸಿ ಸಿಂಧೂರಿ ಮೇಲ್ಮನವಿ ತಿರಸ್ಕರಿಸಿದ ಸುಪ್ರೀಂ, ಅದು ಮಹಾರಾಜರ ಖಾಸಗಿ ಆಸ್ತಿ
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ರೋಹಿಣಿ ಸಿಂಧೂರಿ ಹಿರಿಯ ವಕೀಲರೊಬ್ಬರಿಗೆ ದುಬಾರಿ ಶುಲ್ಕ ನೀಡಿದ್ದರು.
ಮೈಸೂರು: ಚಾಮುಂಡಿ ಬೆಟ್ಟ ತಪ್ಪಲು ಬಳಿಯ ಭೂಮಿ ವಿವಾದಕ್ಕೆ ಸಂಬಂಧಿಸಿ ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಮೂರು ಸರ್ವೇ ನಂಬರ್ಗಳಿಗೆ ಸೇರಿದ ಭೂಮಿ ಮಹಾರಾಜರ ಖಾಸಗಿ ಆಸ್ತಿಯೆಂದು ಹೈಕೋರ್ಟ್ ವಿಭಾಗೀಯ ಪೀಠ ಕಳೆದ ವರ್ಷ ತೀರ್ಪು ನೀಡಿತ್ತು. ಹೈಕೋರ್ಟ್ ಆದೇಶ ಪಾಲಿಸದ ಹಿನ್ನೆಲೆ ಭೂ ಮಾಲೀಕರು ನ್ಯಾಯಾಂಗ ನಿಂದನೆ ಅರ್ಜಿ ಹಾಕಿದ್ದರು.
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ರೋಹಿಣಿ ಸಿಂಧೂರಿ ಹಿರಿಯ ವಕೀಲರೊಬ್ಬರಿಗೆ ದುಬಾರಿ ಶುಲ್ಕ ನೀಡಿದ್ದರು. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಉದಯ್ ಲಲಿತ್ ಹಾಗೂ ಅಜಯ್ ರಸ್ತೋಗಿ ಈ ಪ್ರಕರಣದ ವಿಚಾರಣೆಯನ್ನು ನಡೆಸಿದರು. ನಂತರ ಇದು ವಿಚಾರಣೆಗೆ ಯೋಗ್ಯವಲ್ಲವೆಂದು ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ್ದಾರೆ.
ಕಳೆದ ಎರಡು ದಶಕಗಳಿಂದ ಸರ್ಕಾರ ಮತ್ತು ಭೂ ಮಾಲೀಕರ ನಡುವೆ ನಡೆಯುತ್ತಿದ್ದ ಕಾನೂನು ಸಮರಕ್ಕೆ ಸದ್ಯ ತೆರೆ ಬಿದಿದ್ದು, ಹೈಕೋರ್ಟ್ ಆದೇಶ ಎತ್ತಿ ಹಿಡಿದ ಹಿನ್ನೆಲೆ ಮೈಸೂರು ಮಹಾರಾಜರ ಖಾಸಗಿ ಆಸ್ತಿ ಎಂದೇ ಇದೀಗ ತೀರ್ಮಾನಿಸಲಾಗಿದೆ.
ಈ ಪ್ರಕರಣದ ತೀರ್ಪಿಗೆ ಸಂಬಂಧಿಸಿದಂತೆ ಐಎಎಸ್ ರೋಹಿಣಿ ಸಿಂಧೂರಿ ಅವರನ್ನು ಸಂಸದ ಪ್ರತಾಪ್ ಸಿಂಹ ವ್ಯಂಗ್ಯ ಮಾಡಿಬರೆದುಕೊಂಡಿದ್ದಾರೆ.
ಇದನ್ನೂ ಓದಿ
ಆಷಾಢ ಅಮಾವಾಸ್ಯೆ; ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಈ ದಿನಗಳಲ್ಲಿ ಭಕ್ತರ ಭೇಟಿ ಸಂಪೂರ್ಣ ನಿಷೇಧ
ಇಂದು ಯಾವುದೇ ಕಾರ್ಯಕ್ರಮ ನಿಗದಿ ಮಾಡಿಕೊಳ್ಳದ ಹಂಗಾಮಿ ಸಿಎಂ ಯಡಿಯೂರಪ್ಪ; ಗುಪ್ತಚರ ಇಲಾಖೆ ಮುಖ್ಯಸ್ಥರ ಭೇಟಿ
(Supreme Court rejects plea on Chamundi hill submitted by Rohini Sindhuri and Karnataka Government)
Published On - 10:28 am, Tue, 27 July 21