ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ; ಮೈಸೂರಿನಲ್ಲಿ ನೈಟ್ ಬೀಟ್ ಮತ್ತಷ್ಟು ಚುರುಕುಗೊಳಿಸಿದ ಖಾಕಿ ಪಡೆ

ಬೆಂಗಳೂರಿನಲ್ಲಿ ನಿನ್ನೆ(ಜು.19) ಶಂಕಿತ ಉಗ್ರರ ಬಂಧನ ಮಾಡಲಾದ ಹಿನ್ನೆಲೆ ರಾಜ್ಯದೆಲ್ಲೆಡೆ ಹೈ ಅಲರ್ಟ್​ ಮಾಡಲಾಗಿದೆ. ಅದರಂತೆ ಸಾಂಸ್ಕೃತೀಕ ನಗರಿ ಮೈಸೂರಿನಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದ್ದು, ನಗರದ ಉದಯಗಿರಿ ಠಾಣಾ ಪೊಲೀಸರಿಂದ ನೈಟ್ ಬೀಟ್ ಮತ್ತಷ್ಟು ಚುರುಕುಗೊಳಿಸಲು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಅವರು ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ; ಮೈಸೂರಿನಲ್ಲಿ ನೈಟ್ ಬೀಟ್ ಮತ್ತಷ್ಟು ಚುರುಕುಗೊಳಿಸಿದ ಖಾಕಿ ಪಡೆ
ಮೈಸೂರಿನಲ್ಲಿ ಪೊಲೀಸ್​ ಹೈ ಅಲರ್ಟ್​
Follow us
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 20, 2023 | 9:12 AM

ಮೈಸೂರು, ಜು.20: ಬೆಂಗಳೂರಿನಲ್ಲಿ ನಿನ್ನೆ(ಜು.19) ಶಂಕಿತ ಉಗ್ರರ ಬಂಧನ ಮಾಡಲಾದ ಹಿನ್ನೆಲೆ ರಾಜ್ಯದೆಲ್ಲೆಡೆ ಹೈ ಅಲರ್ಟ್​ ಮಾಡಲಾಗಿದೆ. ಅದರಂತೆ ಸಾಂಸ್ಕೃತಿಕ ನಗರಿ ಮೈಸೂರಿ(Mysore)ನಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದ್ದು, ನಗರದ ಉದಯಗಿರಿ ಠಾಣಾ ಪೊಲೀಸರಿಂದ ನೈಟ್ ಬೀಟ್ ಮತ್ತಷ್ಟು ಚುರುಕುಗೊಳಿಸಲು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಅವರು ಸೂಚನೆ ನೀಡಿದ್ದಾರೆ. ಜೊತೆಗೆ ಮೈಸೂರಲ್ಲಿ ಕಿಡಿಗೇಡಿಗಳ ಚಟುವಟಿಕೆಗೆ ಬ್ರೇಕ್ ಹಾಕಲು, ಯಾರೇ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ವಶಕ್ಕೆ ಪಡೆದು ವಿಚಾರಣೆ ನಡೆಸುವಂತೆ ಹೇಳಿದ್ದಾರೆ. ಇನ್ನು ಮೈಸೂರಿನ ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್​​ ಸಿಬ್ಬಂದಿ ನಿಯೋಜನೆ ಮಾಡುವಂತೆ ಸೂಚಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಸೂಚನೆ ಮೇರೆಗೆ ರಾತ್ರಿ ಗಸ್ತು ನಡೆಸಲಾಗಿದೆ.

ನಿನ್ನೆ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಶಂಕಿತ ಉಗ್ರರು

ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ವಿಧ್ವಂಸಕ ಕೃತ್ಯವೆಸಗಲು ಪ್ಲ್ಯಾನ್​ ಮಾಡಿದ್ದ ಐವರು ಶಂಕಿತ ಉಗ್ರರನ್ನ ನಿನ್ನೆ (ಜು.19) ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಳಿಕ ಶಂಕಿತ ಭಯೋತ್ಪಾದಕರನ್ನ ಕರೆದುಕೊಂಡು ಮಡಿವಾಳದ FSL ಆವರಣದ ಇಂಟ್ರಾಗೇಷನ್ ಸೆಲ್​ನಲ್ಲಿ ಇರಿಸಿ, ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಈ ವೇಳೆ ಶಂಕಿತ ಉಗ್ರರು ಸ್ಫೋಟಕ ಅಂಶಗಳನ್ನು ಬಾಯ್ಬಿಟ್ಟಿದ್ದರೆಂದು ತಿಳಿದುಬಂದಿದೆ. ಬಸ್​​, ಹೋಟೆಲ್​​, ಬಸ್​​ ನಿಲ್ದಾಣಗಳಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಲಾಗಿತ್ತು ಎಂದು ವಿಚಾರಣೆ ವೇಳೆ ಶಂಕಿತ ಉಗ್ರರು ಬಾಯ್ಬಿಟ್ಟಿದ್ದರು. ಜೊತೆಗೆ ಇದಕ್ಕೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳ ವಿರುದ್ಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಯುಎಪಿಎ, 120 B, ಶಸ್ತ್ರಾಸ್ತ್ರ ನಿಗ್ರಹ ಕಾಯ್ದೆ ಸೆಕ್ಷನ್​​​​​​​ 122 , 121ಯಡಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ವಿಚಾರಣೆ ವೇಳೆ ಸಿಸಿಬಿ ಮುಂದೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಶಂಕಿತ ಉಗ್ರರು

ಇನ್ನು 2008ರಲ್ಲಿ ನಡೆದ ಬೆಂಗಳೂರು ಸರಣಿ ಸ್ಫೋಟದ ಆರೋಪಿಯಾಗಿದ್ದ ಟಿ.ನಜೀರ್​ ಎಂಬಾತ ಇದರಲ್ಲಿ ಎ1 ಆರೋಪಿಯಾಗಿದ್ದಾನೆ. ಸದ್ಯ ನಜೀರ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ವಿದೇಶದಲ್ಲಿ ಇದರ ಜೊತೆಗೆ ಪ್ರಕರಣ ಎ2 ಆರೋಪಿಯಾದ ಜುನೈದ್ ತಲೆಮರೆಸಿಕೊಂಡಿದ್ದಾನೆ. ಬೆಂಗಳೂರಿನಲ್ಲಿ ಬಂಧಿತರಾಗಿರುವ 5 ಜನ ಆರೋಪಿಗಳಲ್ಲಿ ಸುಹೇಲ್​ ಎ3, ಉಮರ್ ಎ4, ಜಾಹಿದ್​ ಎ5, ಮುದಾಸಿರ್​ ಎ6, ಫೈಜರ್​ 7ನೇ ಆರೋಪಿ ಎಂದು ಕೇಸ್ ದಾಖಲಾಗಿತ್ತು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:05 am, Thu, 20 July 23

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM