AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರು ವಿವಾದದ ಬಗ್ಗೆ ಅಭಿಪ್ರಾಯದ ಜೊತೆಗೆ ಮಹತ್ವದ ಸಲಹೆ ನೀಡಿದ ಸುತ್ತೂರು ಶ್ರೀ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ಪ್ರತಿಭಟನೆ ಕಿಚ್ಚು ಜೋರಾಗಿದೆ. ನಿನ್ನೆ(ಸೆ.26) ಬೆಂಗಳೂರು ಬಂದ್ ಮಾಡಲಾಗಿತ್ತು. ಇದೀಗ ಸೆ.29ಕ್ಕೆ ಅಖಂಡ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಇನ್ನು ಇದೇ ಕಾವೇರಿ ನೀರಿನ ವಿಚಾರವಾಗಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿದ್ದು,

ಕಾವೇರಿ ನೀರು ವಿವಾದದ ಬಗ್ಗೆ ಅಭಿಪ್ರಾಯದ ಜೊತೆಗೆ ಮಹತ್ವದ ಸಲಹೆ ನೀಡಿದ ಸುತ್ತೂರು ಶ್ರೀ
ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ
ರಾಮ್​, ಮೈಸೂರು
| Edited By: |

Updated on:Sep 27, 2023 | 10:19 AM

Share

ಮೈಸೂರು, (ಸೆಪ್ಟೆಂಬರ್ 27): ಬರದ ನಡುವೆಯೂ ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water)  ಹರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ಪ್ರತಿಭಟನೆ ಕಿಚ್ಚು ಜೋರಾಗಿದೆ. ನಿನ್ನೆ(ಸೆ.26) ಬೆಂಗಳೂರು ಬಂದ್ ಮಾಡಲಾಗಿತ್ತು. ಇದೀಗ ಸೆ.29ಕ್ಕೆ ಅಖಂಡ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಇನ್ನು ಇದೇ ಕಾವೇರಿ ನೀರಿನ ವಿಚಾರವಾಗಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ(suttur math Shivarathri Deshikendra swamiji)  ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿದ್ದು, ಕಾವೇರಿ ನೀರಿನ ಸಮಸ್ಯೆ ಮತ್ತೊಮ್ಮೆ ಉಲ್ಬಣಿಸಿದೆ. ಪ್ರತಿ ವರ್ಷವೂ ಈ ಸಮಸ್ಯೆ ಉಂಟಾಗುತ್ತಲೇ ಇದೆ ಶತಮಾನಗಳಿಂದ ಇದೊಂದು ಜ್ವಲಂತ ಸಮಸ್ಯೆಯಾಗಿದೆ. ಪ್ರಾರಂಭದ ದಿನಗಳಿಂದಲೂ ತಮಿಳುನಾಡು ತನಗೆ ಅಗತ್ಯವಾದುದಕ್ಕಿಂತ ಹೆಚ್ಚಿನ ನೀರನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುತ್ತಲೇ ಇದೆ. ಕರ್ನಾಟಕದ ಕಾವೇರಿ ನದಿ ಪಾತ್ರದ ರೈತರು ಸಂಕಷ್ಟಕ್ಕೆ ಒಳಗಾಗುತ್ತಲೇ ಇದ್ದಾರೆ. ಮೈಸೂರು ಬೆಂಗಳೂರು ಇತರೆಡೆಗಳಿಗೆ ಕುಡಿಯುವ ನೀರಿಗೂ ಸಮಸ್ಯೆ ತಲೆದೋರುತ್ತಿದೆ ಇದಕ್ಕೆ ಅಂತಿಮ ಪರಿಹಾರ ಯಾವಾಗ ಎಂಬುದೇ ಪ್ರಶ್ನಾರ್ಥಕವಾಗಿದೆ ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ತಪ್ಪದ ಸಂಕಷ್ಟ: ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯುಆರ್​ಸಿ ಆದೇಶ

ಕರ್ನಾಟಕ ಸರ್ಕಾರವು ಎಲ್ಲಾ ಸಂದರ್ಭಗಳಲ್ಲಿಯೂ ನೆರೆ ರಾಜ್ಯದ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಲೇ ಬಂದಿದೆ. ತನಗೆ ಎಷ್ಟೇ ತೊಂದರೆಗಳಾದರು ನ್ಯಾಯಾಧಿಕರಣ ಮತ್ತು ನ್ಯಾಯಾಲಯಗಳ ತೀರ್ಪುಗಳನ್ನು ಜನಾಭಿಪ್ರಾಯದ ಕಡು ವಿರೋಧದ ನಡುವೆಯೂ ಗೌರವಿಸಿ ಪಾಲಿಸುತ್ತ ಬಂದಿದೆ. ಇದನ್ನು ತಮಿಳುನಾಡಾಗಲಿ ಅಥವಾ ಸಂಬಂಧಪಟ್ಟವರು ಯಾರೇ ಆಗಲಿ ದೌರ್ಬಲ್ಯವೆಂದು ಭಾವಿಸಬಾರದು. ಈ ಸಮಸ್ಯೆಗೆ ಅಂತಿಮ ಪರಿಹಾರದ ಅಗತ್ಯವಿದೆ. ಮಳೆಯನ್ನು ಆಧರಿಸಿ ನೀರಿನ ಸಂಗ್ರಹದ ಆಧಾರದ ಮೇಲೆ ನೀರು ಹಂಚಿಕೆಯ ಬಗೆಗೆ ಪ್ರತಿವರ್ಷವೂ ಕ್ರಮ ತೆಗೆದುಕೊಳ್ಳಬೇಕಾದುದು ಅಗತ್ಯ. ಪ್ರತಿ ವರ್ಷ ಆಯಾ ಕಾಲಕ್ಕೆ ಸರಿಯಾಗಿ ಮಳೆಯಾದರೆ ಈ ಸಮಸ್ಯೆ ಉಂಟಾಗುವುದಿಲ್ಲ. ಆದರೆ ಅನಾವೃಷ್ಟಿಯಾದಾಗಲೆಲ್ಲ ಈ ಸಮಸ್ಯೆ ಸಹಜವಾಗಿ ಉಂಟಾಗುತ್ತಲೇ ಇರುತ್ತದೆ. ಇದೀಗ ಉಲ್ಬಣಿಸಿರುವ ಸಮಸ್ಯೆಗೆ ಭಾರತ ಸರ್ಕಾರ, ಸರ್ವೋಚ್ಚ ನ್ಯಾಯಾಲಯ ಮತ್ತು ನ್ಯಾಯಾಧಿಕರಣಗಳು ಸಮಾಲೋಚಿಸಬೇಕು. ಕರ್ನಾಟಕ ತಮಿಳುನಾಡು ಹೊರತಾದ ಹೊರ ರಾಜ್ಯಗಳ ನೀರಾವರಿ ತಜ್ಞರ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದ್ದಾರೆ.

ನೀರಿನ ಸಂಗ್ರಹಣೆಯ ವಾಸ್ತವಾಂಶವನ್ನು ಅಧ್ಯಯನ ಮಾಡಿ ಸಮಸ್ಯೆಗೆ ಪರಿಹಾರ ಸೂಚಿಸುವುದು ಇಂದಿನ ತುರ್ತು ಅಗತ್ಯವಾಗಿದೆ. ಕರ್ನಾಟಕದ ಜನರ ಕುಡಿಯುವ ನೀರಿಗೆ, ರೈತರ ಬೆಳೆಗಳಿಗೆ ಹಾಗೂ ಜಾನುವಾರುಗಳಿಗೆ ಅಗತ್ಯವಾಗುವ ನೀರನ್ನು ಬಳಸಿಕೊಂಡು ನಂತರ ಹೆಚ್ಚಿನ ನೀರನ್ನು ತಮಿಳುನಾಡಿಗೂ ಅನುಕೂಲವಾಗುವಂತೆ ಹರಿಸಲು ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರೆಲ್ಲರು ಮುಂದಾಗಬೇಕೆಂದು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇವೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:16 am, Wed, 27 September 23

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ