ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು; ಮೌನಕ್ಕೆ ಶರಣಾದ ಸುತ್ತೂರು ಮಠದ ಶ್ರೀಗಳು

ಸಿ.ಪಿ.ಯೋಗೇಶ್ವರ್, ಅರವಿಂದ ಬೆಲ್ಲದ್, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಆರ್​.ಅಶೋಕ್ ಸೇರಿದಂತೆ ಹಲವು ಬಿಜೆಪಿ‌ ನಾಯಕರು ಕೂಡ ಭೇಟಿ ನೀಡಿದ್ದರು. ಸದ್ಯ ಯಾವುದೇ ಅಭಿಪ್ರಾಯ ನೀಡದ ಸುತ್ತೂರು ಶ್ರೀಗಳ ಈ ಮೌನ ರಾಜ್ಯದಲ್ಲಿ ಕುತೂಹಲ ಉಂಟುಮಾಡಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು; ಮೌನಕ್ಕೆ ಶರಣಾದ ಸುತ್ತೂರು ಮಠದ ಶ್ರೀಗಳು
ಸುತ್ತೂರು ಸ್ವಾಮೀಜಿ (ಸಂಗ್ರಹ ಚಿತ್ರ)
Follow us
TV9 Web
| Updated By: preethi shettigar

Updated on:Jul 21, 2021 | 9:54 AM

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ​​ ಬದಲಾವಣೆ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಬಹುತೇಕ ಎಲ್ಲಾ ಮಠಾಧೀಶರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (CM BS Yediyurappa) ಅವರ ಪರವಾಗಿ ಮಾತನಾಡುತ್ತಿದ್ದಾರೆ. ಆದರೆ ಸುತ್ತೂರು ಮಠದ ಶ್ರೀಗಳು ಮಾತ್ರ ಈ ಬಗ್ಗೆ ಯಾವುದೇ ರೀತಿಯ ಪ್ರತಿಕ್ರೀಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ.

ಕೆಲ ದಿನಗಳಿಂದ ಶಕ್ತಿ ಕೇಂದ್ರವಾಗಿದ್ದ ಸುತ್ತೂರು ಮಠಕ್ಕೆ ಸಚಿವರು, ಶಾಸಕರು, ಬಂಡಾಯ ನಾಯಕರು ಭೇಟಿ ನೀಡಿದ್ದರು. ಸಿ.ಪಿ.ಯೋಗೇಶ್ವರ್, ಅರವಿಂದ ಬೆಲ್ಲದ್, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಆರ್​.ಅಶೋಕ್ ಸೇರಿದಂತೆ ಹಲವು ಬಿಜೆಪಿ‌ ನಾಯಕರು ಕೂಡ ಭೇಟಿ ನೀಡಿದ್ದರು. ಸದ್ಯ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಯಾವುದೇ ಅಭಿಪ್ರಾಯ ನೀಡದ ಸುತ್ತೂರು ಶ್ರೀಗಳ ಈ ಮೌನ ರಾಜ್ಯದಲ್ಲಿ ಕುತೂಹಲ ಉಂಟುಮಾಡಿದೆ.

ಸಿಎಂ ಯಡಿಯೂರಪ್ಪ ಪರ ಪೇಜಾವರ ಶ್ರೀಗಳ ಬ್ಯಾಟಿಂಗ್

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರ ರಾಜ್ಯದ ವಿವಿಧ ಮಠಾಧೀಶರು ಬ್ಯಾಟಿಂಗ್ ಮುಂದುವರೆಸಿದ್ದಾರೆ. ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ತೆರವುಗೊಳಿಸುತ್ತಾರೆ ಎಂದ ಮಾತು ಬಲಗೊಳ್ಳೊತ್ತಿದ್ದಂತೆಯೇ ಪ್ರತಿಕ್ರಿಯಿಸಿರುವ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ‘ರಾಜ್ಯದ ಈ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಮಾಡಬಾರದು. ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಪರಿಸ್ಥಿತಿ ಅನುಕೂಲಕರವಾಗಿಲ್ಲ. ನಾಯಕತ್ವ ಬದಲಾವಣೆ ಈಗ ಸೂಕ್ತವಲ್ಲ. ಇಷ್ಟು ಸಮಯ ಯಡಿಯೂರಪ್ಪ ಚೆನ್ನಾಗಿ ನಾಯಕತ್ವ ಮಾಡಿದ್ದಾರೆ. ಕೊವಿಡ್ ಸಂದರ್ಭವನ್ನು ಚೆನ್ನಾಗಿ ನಿಭಾಯಿಸಿದ್ದಾರೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಿಎಂ ಯಡಿಯೂರಪ್ಪಗೆ ಬೆಂಬಲ ವ್ಯಕ್ತಪಡಿಸಿರುವ ವಿವಿಧ ಜಿಲ್ಲೆಗಳ ಮಠಾಧೀಶರು  ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಭೇಟಿ ಬಳಿಕ ಪ್ರತಿಕ್ರಿಯಿಸಿರುವ ದಿಂಗಾಲೇಶ್ವರ ಸ್ವಾಮೀಜಿ, ಸಿಎಂ ಯಡಿಯೂರಪ್ಪ ನನ್ನ ಕೈಯಲ್ಲಿ ಏನೂ ಇಲ್ಲ ಎಲ್ಲ ಹೈಕಮಾಂಡ್ ನಿರ್ಧಾರ ಎಂದರು. ಒಂದೊಮ್ಮೆ ಯಡಿಯೂರಪ್ಪರನ್ನು ಬದಲಿಸಿದರೆ ಬಿಜೆಪಿ ಸರ್ವನಾಶವಾಗಲಿದೆ. ಯಾವುದೇ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ಬದಲಿಸಿದರೆ ಬಿಜೆಪಿ ನಾಯಕರು ಕೆಟ್ಟ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ನಮ್ಮ ಎಲ್ಲರ ಅಭಿಪ್ರಾಯವನ್ನು ಒಟ್ಟಿಗೆ ಹೇಳುತ್ತಿದ್ದೇವೆ. ಉಳಿದ ಅವಧಿ ಯಡಿಯೂರಪ್ಪರನ್ನು ಮುಂದುವರಿಸಬೇಕು ಬಿಜೆಪಿ ಹೈಕಮಾಂಡ್​ಗೆ ದಿಂಗಾಲೇಶ್ವರ ಸ್ವಾಮೀಜಿ ಎಚ್ಚರಿಕೆ ನೀಡಿದರು. ಯಡಿಯೂರಪ್ಪ ಕೇವಲ ಲಿಂಗಾಯತ ನಾಯಕರಲ್ಲ. ಅವರು ಅಗ್ರಗಣ್ಯ ನಾಯಕ. 2-3 ದಿನದಲ್ಲಿ 500ಕ್ಕೂ ಹೆಚ್ಚು ಮಠಾಧೀಶರು ಸೇರುತ್ತೇವೆ. ಬೆಂಗಳೂರಿನಲ್ಲೇ ಸಭೆ ಸೇರಿ ಮಠಾಧೀಶರು ನಿರ್ಣಯಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಿಎಂ ಯಡಿಯೂರಪ್ಪರ ಬೆನ್ನಿಗೆ ಶ್ರೀ ಶೈಲ ಜಗದ್ಗುರು ಪೀಠ ಇದೆ. ಇದರಲ್ಲಿ ಎರಡು ಮಾತಿಲ್ಲ. ಸ್ಪಷ್ಟವಾಗಿ ಶ್ರೀ ಶೈಲ ಜಗದ್ಗುರು ಪೀಠ ಅವರೊಂದಿಗೆ ಇದೆ. ಸದ್ಯ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯುವುದು ಸೂಕ್ತ. ಬಿಜೆಪಿ ಹೈ ಕಮಾಂಡ ಬಿಎಸ್ ವೈ ಅವರನ್ನ ಗೌರವಯುತವಾಗಿ ನಡೆಸಿಕೊಳ್ಳಬೇಕು. ರಾಜ್ಯದ ಜನ ಯಡಿಯೂರಪ್ಪ ಅವರನ್ನ ಒಬ್ಬ ಜನನಾಯಕ ಎಂದು ಒಪ್ಪಿಕೊಂಡಿದ್ದಾರೆ. ಕಾರಣ ಅವರು ಸಿಎಂ ಆದ ಬಳಿಕ ನಡೆದ ಚುನಾವಣೆ ಗಳೇ ಇದಕ್ಕೆ ಉತ್ತರ. ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷ ಆಡಿಯೋ ಸಹ ಬಿಡುಗಡೆ ಆಗಿದೆ‌. ಅದು ತಮ್ಮದಲ್ಲ ಎಂದು ಅವರೇ ಹೇಳಿದ್ದಾರೆ. ಹೀಗೆ ತೆರೆಮರೆಯಲ್ಲಿ ಕೆಲ ಚಟುವಟಿಕೆ ಗಳು ನಡೆಯುತ್ತಿವೆ. ಇದರ ಬಗ್ಗೆ ಇನ್ನಷ್ಟು ದಿನ ಕಾಯ್ದು ಸಮ ಪೀಠಾಧಿಪತಿಗಳೊಂದಿಗೆ ಸಮಾಲೋಚನೆ ನಡೆಸಿ ಪ್ರತಿಕ್ರಿಯೆ ನೀಡಲಾಗುವುದು. ವೀರಶೈವ ಮಹಾಸಭೆ ಪಂಚಪೀಠಗಳು ಸೇರಿದಂತೆ ಎಲ್ಲರೂ ಯಡಿಯೂರಪ್ಪ ಅವರ ಪರ ಇವೆ.  ಇದರಲ್ಲಿ ಎರಡು ಮಾತಿಲ್ಲ. ಮೇಲಾಗಿ ಗುರುಪೂರ್ಣಿಮೆ ಪ್ರಯುಕ್ತ ನಾಳೆ ಬೆಂಗಳೂರಿಗೆ ಹೋಗುತ್ತಿದ್ದೇವೆ. ಅಗತ್ಯ ಬಿದ್ದರೇ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಾಗುವುದು ಎಂದು ದಾವಣಗೆರೆಯಲ್ಲಿ ಶ್ರೀಶೈಲ ಜಗದ್ಗುರು ಪೀಠದ ಡಾ.ಚನ್ನಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಶಾಸಕಾಂಗ ಸಭೆ ರದ್ದಾದರೆ ಯಡಿಯೂರಪ್ಪ ಪದಚ್ಯುತಿ ಸಲೀಸು; ಸಿಎಂ ಬೆಂಬಲಿಗರ ಬಾಯಿ ಮುಚ್ಚಿಸಲು ಮಾಸ್ಟರ್ ಪ್ಲ್ಯಾನ್?

ಸಿಎಂ ಯಡಿಯೂರಪ್ಪ ಪರ ಪೇಜಾವರ ಶ್ರೀಗಳ ಬ್ಯಾಟಿಂಗ್; ಯಡಿಯೂರಪ್ಪರ ತಂಟೆಗೆ ಬರದಂತೆ ವಿವಿಧ ಮಠಾಧೀಶರಿಂದಲೂ ಎಚ್ಚರಿಕೆ

Published On - 9:51 am, Wed, 21 July 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ