ಮೈಸೂರು: ಮೈಸೂರಿನಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ, ಟಿ.ನರಸೀಪುರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಒಂದು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದ ಮಾಜಿ ಶಾಸಕಿ ಸುನೀತಾ ವೀರಪ್ಪಗೌಡ ಸೇರಿ ಜೆಡಿಎಸ್‌ನ ಬೀರಿ ಹುಂಡಿ ಬಸವಣ್ಣ, ಮಾದೇಗೌಡ ಮಾವಿನಹಳ್ಳಿ, ಸಿದ್ದೇಗೌಡ ಹಿನಕಲ್, ಕೆಂಪನಾಯಕ ಹಲವಾರು ಕಾರ್ಯಕರ್ತರು, ನಾಯಕರು ಸೇರಿ ಇಂದು(ಜ.20) ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಸಿಂಹಾದ್ರಿಯ ಸಿಂಹ ಹಾಡಿನೊಂದಿಗೆ ಸ್ವಾಗತ ಮಾಡುತ್ತಿದ್ದಂತೆ ಕಾರ್ಯಕರ್ತರು ಸಿದ್ದರಾಮಯ್ಯರನ್ನು ಸುತ್ತುವರಿದು ವೇದಿಕೆ ಮೇಲೆ ನೂಕಾಟ ತಳ್ಳಾಟ ಶುರುವಾಗಿದೆ. ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮೈಕ್ ಹಿಡಿದು ಎಲ್ಲರನ್ನೂ ವೇದಿಕೆಯಿಂದ ಕೆಳಗೆ ಇಳಿಯುವಂತೆ ಸೂಚನೆ ನೀಡುತ್ತಾ ಎಂಎಲ್‌ಎಗಳಿಗೆ ಜಾಗ ಕೊಡಿ ನೀವೆ ಕುಳಿತರ ಹೇಗೆ ಎಂದು ಗದರಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಪರಿಷತ್ ಸದಸ್ಯ ಡಾ. ತಿಮ್ಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧೃವನಾರಾಯಣ್, ಮಾಜಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಮಾಜಿ ಶಾಸಕ ಕೆ.ವೆಂಕಟೇಶ್ ಸೇರಿ ಹಲವು ಮುಖಂಡರು ಭಾಗಿಯಾಗಿದ್ದಾರೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ