ಟಿ. ನರಸೀಪುರ: ಚಿರತೆಗೆ ಬಲಿಯಾದ ಯುವತಿಯ ಕುಟುಂಬಕ್ಕೆ 7.5 ಲಕ್ಷ ಪರಿಹಾರ, ಉದ್ಯೋಗದ ಭರವಸೆ
ಮನೆ ಮುಂದೆ ಕುಳಿತ್ತಿದ್ದಾಗ ಯುವತಿ ಮೇಲೆ ಚಿರತೆ ದಾಳಿ ಮಾಡಿದ್ದು, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ 20 ವರ್ಷದ ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಈಕೆಯ ಕುಟುಂಬಕ್ಕೆ 7 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದ್ದು, ಉದ್ಯೋಗದ ಭರವಸೆಯೂ ನೀಡಲಾಗಿದೆ.
ಮೈಸೂರು: ಟಿ.ನರಸೀಪುರ ತಾಲೂಕಿನಲ್ಲಿ (T.Narasipura) ಚಿರತೆ ದಾಳಿ (Leopard Attack) ಗೊಳಗಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟ ಪ್ರಕರಣ ಸಂಬಂಧ ಮೃತ ಯುವತಿ ಕುಟುಂಬಕ್ಕೆ 7.5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಸ್ಥಳದಲ್ಲೇ 5 ಲಕ್ಷ ಪರಿಹಾರದ ಚೆಕ್ ವಿತರಿಸಿದರು. ಇದೇ ವೇಳೆ ಕುಟುಂಬದ ಒಬ್ಬರಿಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿದ್ದಾರೆ. ತಾಲೂಕಿನಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿಯಾದ ಹಿನ್ನೆಲೆ ಆಕ್ರೋಶಗೊಂಡಿರುವ ಗ್ರಾಮದ ಜನರು ಧರಣಿ ಕುಳಿತಿದ್ದರು. ಅದತರಂತೆ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಆರ್ಎಫ್ಒಗೆ ಕಡ್ಡಾಯ ರಜೆ ನೀಡಿ ತನಿಖೆ ಬಳಿಕ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ನಂತರ ಗ್ರಾಮಸ್ಥರು ಧರಣಿಯನ್ನು ಕೈಬಿಟ್ಟರು.
ತಾಲೂಕಿನಲ್ಲಿ ಚಿರತೆ ಹಾವಳಿ ಇರುವ ಹಿನ್ನೆಲೆ 15 ತಂಡಗಳನ್ನು ರಚನೆ ಮಾಡಿ ಬೇರೆಬೇರೆ ಕಡೆಗಳಲ್ಲಿ ಕಾರ್ಯಾಚರಣೆಗೆ ಇಳಿಸುತ್ತೇವೆ. 7 ದಿನಗಳ ಒಳಗೆ ಕಂಡಲ್ಲಿ ಗುಂಡು ಹಾರಿಸಿ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯ ನಾವು ಮಾಡುತ್ತೇವೆ. ಆರ್ಎಫ್ಒ ಅವರನ್ನು ಕಡ್ಡಾಯ ರಜೆ ಮೇಲೆ ಹೋಗಲು ಸೂಚಿಸಲಾಗಿದೆ. ಡಿ.2ರಿಂದ ಅವರು ರಜೆ ಮೇಲೆ ಹೋಗಲಿದ್ದಾರೆ ಮತ್ತು ಅವರ ಕಡೆಯಿಂದ ತಪ್ಪು ನಡೆದಿದೆಯೇ ಎಂಬುದನ್ನು ತಿನಿಖೆ ನಡೆಸಿ ವರದಿಯನ್ನು ಸರ್ಕಾರಕ್ಕೆ ಕಳುಹಿಸುತ್ತೇವೆ ಎಂದು ಮಹಿಳಾ ಅಧಿಕಾರಿ ಹೇಳಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಕೆಂಗೇರಿ, ಕುಂಬಳಗೋಡು ಸುತ್ತಮುತ್ತ ಅಲರ್ಟ್
ಏನಿದು ಪ್ರಕರಣ?
ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ಮನೆ ಮುಂದೆ ಕುಳಿತಿದ್ದಾಗ ಗುರುವಾರ ಸಂಜೆ ಚಿರತೆ ದಾಳಿ ಮಾಡಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮೇಘನಾಳನ್ನ (20) ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಕೊನೆಯುಸಿರೆಳೆದಿದ್ದಳು.
ಟಿ.ನರಸೀಪುರ ತಾಲೂಕಿನಲ್ಲೇ ಚಿರತೆ ದಾಳಿಗೆ ಎರಡನೇ ಬಲಿಯಾಗಿದೆ. ಕಳೆದ ತಿಂಗಳಷ್ಟೇ ಟಿ.ನರಸಿಪುರ ತಾಲೂಕಿನಲ್ಲೇ ಚಿರತೆ ಓರ್ವ ಯುವಕನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಇದೀಗ ಮೇಘನಾಳನ್ನ ಬಲಿಪಡೆದುಕೊಂಡಿದೆ. ಒಂದು ತಿಂಗಳಲ್ಲೇ ಚಿರತೆ ದಾಳಿಗೆ 2ನೇ ಬಲಿಯಾಗಿರುವುದರಿಂದ ಇದೀಗ ಟಿ. ನರಸೀಪುರ ತಾಲೂಕಿನ ಜನರಲ್ಲಿ ಚಿರತೆ ಭಯ ಶುರುವಾಗಿದ್ದು, ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:24 am, Fri, 2 December 22