AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಕಚೇರಿಯಲ್ಲಿ ಇಡಿಗೆ ಸಿಕ್ತು ಅತಿದೊಡ್ಡ ಸಾಕ್ಷ್ಯ: ವೈಟ್ನರ್ ಇರುವ, ಇಲ್ಲದ ಮೂಲ ದಾಖಲೆ ಪತ್ತೆ

ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ. ಮೈಸೂರಿನ ಮುಡಾ ಕಚೇರಿ ಸುತ್ತುವರಿದಿರುವ ಅಧಿಕಾರಿಗಳು, ಇಂಚಿಂಚೂ ಜಾಲಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಡೆದ 14 ಸೈಟ್​ನ ಮೂಲಕ ದಾಖಲೆಗಾಗಿ ತೀವ್ರ ಶೋಧ ನಡೆಯುತ್ತಿದೆ. ಈ ಮಧ್ಯೆ ಇದೀಗ 2ನೇ ದಿನದ ತನಿಖೆಯಲ್ಲಿ ಅತಿದೊಡ್ಡ ಸಾಕ್ಷ್ಯವೊಂದು ಸಿಕ್ಕಿದೆ.

ಮುಡಾ ಕಚೇರಿಯಲ್ಲಿ ಇಡಿಗೆ ಸಿಕ್ತು ಅತಿದೊಡ್ಡ ಸಾಕ್ಷ್ಯ: ವೈಟ್ನರ್ ಇರುವ, ಇಲ್ಲದ ಮೂಲ ದಾಖಲೆ ಪತ್ತೆ
ಮುಡಾ ಕಚೇರಿ ಆವರಣ
ರಾಮ್​, ಮೈಸೂರು
| Edited By: |

Updated on: Oct 19, 2024 | 12:50 PM

Share

ಮೈಸೂರು, ಅಕ್ಟೋಬರ್ 19: ಮುಡಾ ಹಗರಣ ಸಂಬಂಧ ಮೈಸೂರಿನ ಕಚೇರಿ ಮೇಲೆ ದಾಳಿ ಮಾಡಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಎರಡನೇ ದಿನವೂ ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿಯ ಮನವಿ ಪತ್ರದ ಮೇಲೆಯೇ ಇಡಿ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಪತ್ರದ ಬಗ್ಗೆ ಹತ್ತಾರು ಅನುಮಾನಗಳೇ ಹುಟ್ಟುಕೊಂಡಿವೆ. ಇದನ್ನೇ ಅರಿತ ಇಡಿ ಅಧಿಕಾರಿಗಳು ಮಹತ್ವದ ಸಾಕ್ಷಿಯೊಂದನ್ನ ಕಲೆ ಹಾಕಿದ್ದಾರೆ. ಮುಡಾ ಅಧಿಕಾರಿಗಳಿಗೆ ಸಿದ್ದರಾಮಯ್ಯ ಪತ್ನಿ ನೀಡಿದ್ದ ಮನವಿ ಪತ್ರದಲ್ಲಿ ಎರಡು ಅನುಮಾನಗಳು ಉಂಟಾಗಿವೆ. ಮನವಿ ಪತ್ರದಲ್ಲಿ ವೈಟ್ನರ್ ಹಾಕಿರುವುದು ಪತ್ತೆಯಾಗಿದೆ. ಮನವಿ ಪತ್ರದ 2ನೇ ಪುಟದಲ್ಲಿದ್ದ ಖಾಲಿ ಜಾಗಕ್ಕೆ ವೈಟ್ನರ್ ಹಾಕಲಾಗಿತ್ತು. ಆದರೆ, ಇದರ ಮಧ್ಯೆಯೇ ವೈಟ್ನರ್ ಹಾಕದಿರುವ ಪತ್ರ ಕೂಡ ಇಡಿ ಅಧಿಕಾರಿಗಳಿಗೆ ಸಿಕ್ಕಿದೆ.

ವೈಟ್ನರ್ ಹಾಕಿದ ದಾಖಲೆಯಿಂದಲೇ ಸಿದ್ದರಾಮಯ್ಯಗೆ ಸಂಕಷ್ಟ ತರಲಿದೆಯೇ ಎಂಬ ಪ್ರಶ್ನೆ ಇದೀಗ ಮೂಡಿದೆ. ಸಿಎಂ ಬಿಡುಗಡೆ ಮಾಡಿರುವ ದಾಖಲೆ ಹಾಗೂ ಆರ್​ಟಿಐನಲ್ಲಿ ನೀಡಿದ್ದ ದಾಖಲೆ ಬೇರೆ ಬೇರೆ ಇದೆ. ವೈಟ್ನರ್​ನಲ್ಲೂ ವ್ಯತ್ಯಾಸ ಕಂಡು ಬಂದಿದೆ. ಇದಿಷ್ಟೇ ಅಲ್ಲ, 2 ದಾಖಲೆಗಳಲ್ಲಿ ಸಿಎಂ ಪತ್ನಿಯ ಸಹಿಯಲ್ಲಿಯೂ ವ್ಯತ್ಯಾಸ ಕಂಡು ಬಂದಿದೆ ಎನ್ನಲಾಗಿದೆ. ಎರಡೂ ದಾಖಲೆಗಳನ್ನು ಮುಂದಿಟ್ಟುಕೊಂಡು ಮುಡಾ ಅಧಿಕಾರಿಗಳಿಗೆ ಇಡಿ ಅಧಿಕಾರಿಗಳು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳುತ್ತಿದ್ದಾರೆ. ಅಸಲಿ ಪತ್ರ ಯಾವುದು, ನಕಲಿ ಯಾವುದು ಎಂದು ಅಧಿಕಾರಿಗಳ ಬಾಯಿಬಿಡಿಸಲು ಇಡಿ ಅಧಿಕಾರಿಗಳು ಮುಂದಾಗಿದ್ದಾರೆ.

ಮುಡಾ ಶಿಫಾರಸು ಪತ್ರಗಳ ಜಾಡು ಹಿಡಿದ ಇಡಿ

ಮುಡಾದಲ್ಲಿ 50:50 ಅನುಪಾತದಡಿ ಎಷ್ಟೆಲ್ಲಾ ಸೈಟ್​ ಹಂಚಿಕೆ ಮಾಡಲಾಗಿದೆ ಎಂಬ ಬಗ್ಗೆಯೂ ಇಡಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಶಿಫಾರಸು ಪತ್ರಗಳ ಜಾಡು ಹಿಡಿದು ತನಿಖೆ ಮಾಡಿರುವ ಇಡಿ ಅಧಿಕಾರಿಗಳು, ಮುಡಾದಲ್ಲಿ ಸದಸ್ಯರಾಗಿದ್ದ ರಾಜಕೀಯ ನಾಯಕರ ಮಾಹಿತಿಯನ್ನೂ ಸಂಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯಗೆ ಸಂಕಷ್ಟ ತರುತ್ತಾ ವೈಟ್ನರ್ ಹಾಕಿದ ದಾಖಲೆ?

ಯಾರು ಯಾರಿಗೆ 50:50 ಅನುಪಾತದ ಸೈಟ್​ಗೆ ಶಿಫಾರಸು ಮಾಡಿದ್ದರು? ಯಾರು ಯಾರಿಗೆ ಬದಲಿ ನಿವೇಶನಗಳನ್ನು ಕೊಡಿಸಿದ್ದರು? ಹೀಗೆ ಹತ್ತಾರು ಆಯಾಮದ ಮೂಲಕ ಇಡಿ ತನಿಖೆ ಮಾಡುತ್ತಿದೆ. ಇನ್ನು ಹಗರಣ ಬಯಲಿಗೆಳೆಯಬಲ್ಲ ಎಲ್ಲಾ ಮೂಲ ಶಿಫಾರಸು ಪತ್ರಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆಯಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್