ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸೋದಿಲ್ಲ; ಸಿದ್ದರಾಮಯ್ಯ ಸ್ಪಷ್ಟನೆ
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ. ಗ್ಯಾರಂಟಿ ಯೋಜನೆಗಳು ಪುನರ್ ಪರಿಶೀಲನೆಯೂ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಮತಕ್ಕಾಗಿ ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ ಎಂದರು.
ಮೈಸೂರು , ಜೂ.14: ಗ್ಯಾರಂಟಿ ಯೋಜನೆ(Guarantee scheme)ಗಳ ಬಗ್ಗೆ ಹಬ್ಬಿರುವ ಊಹಾಪೋಹದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ(Siddaramaiah) ಸ್ಪಷ್ಟನೆ ನೀಡಿದ್ದಾರೆ. ‘ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ. ಗ್ಯಾರಂಟಿ ಯೋಜನೆಗಳು ಪುನರ್ ಪರಿಶೀಲನೆಯೂ ಆಗಲ್ಲ ಎಂದಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಮತಕ್ಕಾಗಿ ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ. ಬಡವರಿಗಾಗಿ ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.
ಲೋಕಸಭಾ ಸ್ಥಾನಗಳಲ್ಲಿ ಹಿನ್ನಡೆ; ಮತಗಳಿಕೆ ವಿಚಾರದಲ್ಲಿ ಹೆಚ್ಚಳ
ನಮಗೆ ಲೋಕಸಭಾ ಸ್ಥಾನಗಳಲ್ಲಿ ಹಿನ್ನಡೆಯಾಗಿರಬಹುದು. ಆದರೆ. ಮತಗಳಿಕೆ ವಿಚಾರದಲ್ಲಿ ಶೇಕಡಾ13ರಷ್ಟು ಹೆಚ್ಚಾಗಿದೆ. ಮೈಸೂರು ಸೋತಿದ್ದು ಸತ್ಯ, ಚಾಮರಾಜನಗರ ಗೆದ್ದಿದ್ದೇವೆ. ಪಕ್ಷದ ಹೈಕಮಾಂಡ್ಗೆ ಸೋಲಿನ ಬಗ್ಗೆ ಕಾರಣ ಹೇಳುತ್ತೇನೆ. ರಾಜ್ಯದಲ್ಲಿ 1 ರಿಂದ 9 ಲೋಕಸಭಾ ಸ್ಥಾನವನ್ನು ಗೆದ್ದಿದ್ದೇವೆ ಎಂದು ಹೇಳಿದರು. ಇದೇ ವೇಳೆ 7 ನೇ ವೇತನ ಆಯೋಗದ ಪ್ರಶ್ನೆ ಕೇಳುತ್ತಿದ್ದಂತೆ ಮಾತನಾಡದೆ ಸಿಎಂ ತೆರಳಿದರು.
ಇದನ್ನೂ ಓದಿ:ಲೋಕಸಭಾ ಚುನಾವಣೆ ಸೋತ ಎಂ ಲಕ್ಷ್ಮಣ್ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕೆಂದರು!
ಇನ್ನು ಈ ಕುರಿತು ಜೂ.8 ರಂದು ಮಾತನಾಡಿದ್ದ ಗೃಹ ಸಚಿವ ಜಿ ಪರಮೇಶ್ವರ್, ‘ಕಾಂಗ್ರೆಸ್ ಪಕ್ಷದ ಕೆಲ ನಾಯಕರೇ ಹೇಳುತ್ತಿರುವ ಹಾಗೆ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು ನಿಂತು ಹೋಗಲಿವೆಯೇ? ಯಾವ ಕಾರಣಕ್ಕೂ ನಿಲ್ಲಲ್ಲ ಎಂದು ಸ್ಪಷ್ಟನೆ ನೀಡಿದ್ದರು. ನಾವು ರಾಜಕೀಯ ದೃಷ್ಟಿಕೋನದಿಂದ ಜಾರಿಗೊಳಿಸಿಲ್ಲ, ರಾಜ್ಯದ ಲಕ್ಷಾಂತರ ಬಡವರು, ಕೂಲಿ ಕಾರ್ಮಿಕರು, ಕೃಷಿ ಕೂಲಿ ಕಾರ್ಮಿಕರು, ಗ್ರಾಮೀಣ ಭಾಗದ ಜನರನ್ನು ಬಡತನ ರೇಖೆಯಿಂದ ಮೇಲೆತ್ತಲು ಯೋಜನೆಗಳನ್ನು ರಚಿಸಿ ಜಾರಿಗೊಳಿಸಲಾಗಿದೆ ಎಂದಿದ್ದರು. ಇದೀಗ ಸಿಎಂ ಕೂಡ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:22 pm, Fri, 14 June 24