ಜೆಡಿಎಸ್ ಮುಳುಗುತ್ತಿದೆ, ಬಿಜೆಪಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳಲ್ಲ: ಮೈಸೂರಿನಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಜೆಡಿಎಸ್ ಮುಳುಗುತ್ತಿದೆ, ಬಿಜೆಪಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳಲ್ಲ: ಮೈಸೂರಿನಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
ಅರುಣ್ ಸಿಂಗ್

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿದ್ದು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅರುಣ್ ಸಿಂಗ್, ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುವುದು ನಮ್ಮ ಸಂಕಲ್ಪ. ಜೆಡಿಎಸ್, ಕಾಂಗ್ರೆಸ್ ಎರಡೂ ಸರ್ಕಾರಗಳನ್ನ ಜನ ನೋಡಿದ್ದಾರೆ.

TV9kannada Web Team

| Edited By: Ayesha Banu

Aug 31, 2021 | 9:39 AM

ಮೈಸೂರು: ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳಲ್ಲ. ಅಧಿಕೃತವಾಗಿ, ಅನಧಿಕೃತವಾಗಿ ಯಾವುದೇ ಪಕ್ಷದೊಂದಿಗೆ ಬಿಜೆಪಿ ಹೊಂದಾಣಿಕೆ ಇಲ್ಲ. ಜೆಡಿಎಸ್ ಮುಳುಗುತ್ತಿದೆ, ಬಿಜೆಪಿ ಬೆಳೆಯುತ್ತಿದೆ ಎಂದು ಮೈಸೂರಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿದ್ದು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅರುಣ್ ಸಿಂಗ್, ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುವುದು ನಮ್ಮ ಸಂಕಲ್ಪ. ಜೆಡಿಎಸ್, ಕಾಂಗ್ರೆಸ್ ಎರಡೂ ಸರ್ಕಾರಗಳನ್ನ ಜನ ನೋಡಿದ್ದಾರೆ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಮ್ಮದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ. ಬಿ.ಎಸ್.ಯಡಿಯೂರಪ್ಪ ಒಬ್ಬ ದೊಡ್ಡ ನಾಯಕ. ಅವರಿಗೆ ಸಂಘಟನೆ ಬಗ್ಗೆ ಅನುಭವ ಇದೆ. ಅವರ ಅನುಭವವನ್ನ ಪಕ್ಷ ಸಂಘಟನೆಗೆ ಬಳಸಿಕೊಳ್ಳುತ್ತೇವೆ. ಬೊಮ್ಮಾಯಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ರಾಜ್ಯದ ಹಿತದೃಷ್ಟಿಯಿಂದ ಪರಿಪೂರ್ಣ ಕೆಲಸ ಮಾಡುತ್ತಿದೆ. ಹಳೇ ಮೈಸೂರು ಭಾಗದಲ್ಲಿ ದಿನ‌ ದಿನಕ್ಕೂ ಸಂಘಟನೆ‌ ಹೆಚ್ಚಾಗುತ್ತಿದೆ.

ಈ ಭಾಗದಲ್ಲೂ ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತೇವೆ. ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಗೊಂದಲ ಇಲ್ಲ. ಇಬ್ಬರು ಸಚಿವರು ಖಾತೆಯನ್ನು ಸ್ವೀಕಾರ ಮಾಡಿದ್ದಾರೆ. ಖಾತೆ ಹಂಚಿಕೆ ಸಿಎಂ ಪರಮಾಧಿಕಾರ. ಅದರಲ್ಲಿ ನಮ್ಮ ಪಾತ್ರ ಇರುವುದಿಲ್ಲ. ಖಾತೆಗಳು ಹಂಚಿಕೆಯಾಗಿ ಎಲ್ಲ ಸಚಿವರು ಕೆಲಸ ಮಾಡುತ್ತಿದ್ದಾರೆ. ಈ‌ ಬಗ್ಗೆ ಯಾವುದೇ ಒತ್ತಡ ಇಲ್ಲ ಎಂದು ತಿಳಿಸಿದರು.

ಪ್ರಥಮ ಬಾರಿಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿದ್ದು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇವರಿಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಮೇಯರ್ ಸುನಂದಾ, ಸ್ಥಳೀಯ ನಾಯಕರು ಸಾಥ್ ನೀಡಿದ್ರು. ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆ ಬಿಜೆಪಿ ಪದಾಧಿಕಾರಿಗಳ ಸಭೆ ನಡೆದಿದ್ದು ಅರುಣ್ ಸಿಂಗ್ ಜೊತೆ ಸೆಲ್ಫಿಗಾಗಿ ಕಾರ್ಯಕರ್ತರು ಮುಗಿಬಿದ್ದಿದ್ದರು. ಈ ವೇಳೆ BJP ನಾಯಕರು, ಕಾರ್ಯಕರ್ತರಿಂದ ಕೊವಿಡ್ ರೂಲ್ಸ್ ಬ್ರೇಕ್ ಆಗಿದೆ.

ಇದನ್ನೂ ಓದಿ: ಅಫ್ಘಾನ್​​ನಿಂದ ಹೊರಬಿದ್ದ ಅಮೆರಿಕದ ಕೊನೇ ಯೋಧ ಇವರು..; ಫೋಟೋ ಶೇರ್​ ಮಾಡಿದ ರಕ್ಷಣಾ ಇಲಾಖೆ

Viral Video: ಅಮೆರಿಕಾ ಪಡೆ ಜಾಗ ಖಾಲಿ ಮಾಡುತ್ತಿದ್ದಂತೆಯೇ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ ತಾಲಿಬಾನಿಗಳು

Follow us on

Related Stories

Most Read Stories

Click on your DTH Provider to Add TV9 Kannada