ನಾನು ನೀಡಿದ ಲಿಸ್ಟ್​​ನದ್ದು ಮಾತ್ರ ಮಾಡಿ: ಡಾ.ಯತೀಂದ್ರ ಎಡವಟ್ಟು ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ ಅವರು ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ, ವೈಎಸ್​ಟಿ ಕಲೆಕ್ಟ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಯತೀಂದ್ರ ಅವರು ಮಾಡಿದ ಮತ್ತೊಂದು ಎಡವಟ್ಟಿನ ವಿಡಿಯೋ ವೈರಲ್ ಆಗುತ್ತಿದೆ. ಸಿದ್ದರಾಮಯ್ಯ ಜೊತೆ ದೂರವಾಣಿ ಕರೆ ಮೂಲಕ ಮಾತನಾಡಿದ ವಿಡಿಯೋ ವೈರಲ್ ಆಗುತ್ತಿದೆ.

ಮೈಸೂರು, ನ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ (Dr.Yathindra Siddaramaiah) ಅವರು ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ, ವೈಎಸ್​ಟಿ ಕಲೆಕ್ಟ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಯತೀಂದ್ರ ಅವರು ಮಾಡಿದ ಮತ್ತೊಂದು ಎಡವಟ್ಟಿನ ವಿಡಿಯೋ ವೈರಲ್ ಆಗುತ್ತಿದೆ. ಸಾರ್ವಜನಿಕ ಸಭೆಯಲ್ಲಿ ಸಿದ್ದರಾಮಯ್ಯ ಜೊತೆ ದೂರವಾಣಿ ಕರೆ ಮೂಲಕ ಮಾತನಾಡಿದ ವಿಡಿಯೋ ವೈರಲ್ (Video Viral) ಆಗುತ್ತಿದೆ.

ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಯತೀಂದ್ರ ಅವರು ದೂರವಾಣಿ ಕರೆ ಮಾಡಿ “ಅಪ್ಪ ಹೇಳಿ” ಅಂತ ಮಾತು ಆರಂಭಿಸಿ ತಾನು ನೀಡಿದ ಲಿಸ್ಟ್​ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ವಿವೇಕಾನಂದರ ಹೆಸರು ಎತ್ತಿದ್ದು, ಇದಕ್ಕೆ ಯಾರು ಎಂದು ಯತೀಂದ್ರ ಅವರು ಪ್ರಶ್ನೆ ಮಾಡುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನೂ ಓದಿ: ಜೆಡಿಎಸ್ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಮೋನಮಃ ಎಂದು ಯಾಕೆ ಹೇಳಿದರು?

ಅಲ್ಲದೆ, ಬೇರೊಂದು ಲಿಸ್ಟ್​ ನೀಡಿದ ಬಗ್ಗೆ ಅಸಮಾಧಾನಗೊಂಡ ಯತೀಂದ್ರ ಅವರು, ನಾನು ಕೊಟ್ಟಿರುವುದೇ ಐದು ಅಂತ ಹೇಳಿ ಮಹದೇವರಿಗೆ‌ ಫೋನ್ ನೀಡುವಂತೆ ಸಿದ್ದರಾಮಯ್ಯಗೆ ಸೂಚಿಸುತ್ತಾರೆ. ಬಳಿಕ ಮಹದೇವ್ ಜೊತೆ ಮಾತನಾಡಿದ ಯತೀಂದ್ರ, ಮಹದೇವ್​ ಯಾಕೆ ಯಾವ್ದ್ಯಾವುದು ಕೊಡ್ತೀಯಾ? ಮತ್ತೆ ಇದೆಲ್ಲ ಯಾರು ಕೊಡ್ತಿರೋದು ಅಂತ ಪ್ರಶ್ನೆ ಮಾಡಿದ್ದಾರೆ.

ಅಲ್ಲದೆ, ಇಲ್ಲ ಅದೆಲ್ಲ ಬೇಡ. ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟೇ ಮಾತ್ರ ಮಾಡಿ ಅಂತ ಹೇಳುವಂತೆ ಯತೀಂದ್ರ ಅವರು ಮಹದೇವರಿಗೆ ಸೂಚಿಸಿ ಮಾತು ನಿಲ್ಲಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.

ಆಶ್ರಯ ಸಮಿತಿ ಅಧ್ಯಕ್ಷರಾಗಿರುವ (ಸಾಂವಿಧಾನಿಕ ಹುದ್ದೆ) ಯತೀಂದ್ರ ಅವರು ಜನ ಸಂಪರ್ಕ ಸಭೆ ಎಲ್ಲರ ಮನವಿ ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಸೂಚಿಸಲು ಯತೀಂದ್ರ ಅವರು ಯತ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 am, Thu, 16 November 23

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us