ವಿಶ್ವವಿಖ್ಯಾತ ಮೈಸೂರು ದಸರಾ ಮೇಲೂ ಉಗ್ರರ ಕರಿನೆರಳು; ತುರ್ತಾಗಿ ಭದ್ರತೆ ಹೆಚ್ಚಿಸಿದ ಡಿಜಿ & ಐಜಿಪಿ ಅಲೋಕ್ ಮೋಹನ್

ಪ್ರತಿ ಬಾರಿ ದಸರಾಗೆ 1700 ರಿಂದ 2000 ಪೊಲೀಸರ ನಿಯೋಜಿಸಲಾಗುತ್ತಿತ್ತು. ಈ ಬಾರಿ ಭದ್ರತೆಗೆ 3500ಕ್ಕೂ ಹೆಚ್ಚು ಪೊಲೀಸರು, ರಾಜ್ಯದ ಎಲ್ಲಾ ವಲಯ, ಸಿಐಡಿ, ಐಎಸ್​ಡಿಯಿಂದಲೂ ನಿಯೋಜನೆ ಮಾಡಲಾಗಿದೆ. ಶ್ರೀರಂಗಪಟ್ಟಣ, KRS ಪೊಲೀಸರಿಗೂ ಅಲರ್ಟ್ ಇರುವಂತೆ ಕೇಂದ್ರ ಗುಪ್ತಚರ ಇಲಾಖೆ ಸೂಚನೆ ನೀಡಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಮೇಲೂ ಉಗ್ರರ ಕರಿನೆರಳು; ತುರ್ತಾಗಿ ಭದ್ರತೆ ಹೆಚ್ಚಿಸಿದ ಡಿಜಿ & ಐಜಿಪಿ ಅಲೋಕ್ ಮೋಹನ್
ಮೈಸೂರು ದಸರಾ ಮೇಲೆ ಉಗ್ರರ ಕರಿನೆರಳು
Edited By: ಕಿರಣ್ ಹನುಮಂತ್​ ಮಾದಾರ್

Updated on: Oct 22, 2023 | 9:45 AM

ಮೈಸೂರು, ಅ.22: ವಿಶ್ವವಿಖ್ಯಾತ ಮೈಸೂರು ದಸರಾ(Mysore Dasara) ಅದ್ದೂರಿಯಾಗಿ ನಡೆಯುತ್ತಿದೆ. ಈ ದೃಶ್ಯ ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ ಪ್ರವಾಸಿಗರು ಬರುತ್ತಾರೆ. ಹೀಗಾಗಿ ಈ ಬಾರಿ ಉಗ್ರರ (Extremists) ಕರಿನೆರಳು ಮೈಸೂರು ದಸರಾ ಮೇಲೆ ಬಿದ್ದಿದೆ. ಈ ಹಿನ್ನಲೆ ಎಚ್ಚೆತ್ತ ಪೊಲೀಸ್​ ಇಲಾಖೆ ತುರ್ತಾಗಿ ಭದ್ರತೆ ಹೆಚ್ಚಿಸಿದೆ. ಹೌದು, ಡಿಜಿ & ಐಜಿಪಿ ಅಲೋಕ್ ಮೋಹನ್  ಅವರು ತುರ್ತಾಗಿ ಇಂದು ಬೆಳಗ್ಗೆ 9 ಗಂಟೆಗೆ 1568 ಪೊಲೀಸರ ನಿಯೋಜನೆ ಮಾಡಿದ್ದು, ಜೊತೆಗೆ 40 CAR ತುಕಡಿಗಳು, 30 KSRP ತುಕಡಿಗಳನ್ನು ನಿಯೋಜಿಸಿದ್ದಾರೆ.

ನಾಡಹಬ್ಬ ದಸರಾ ಮೇಲೆಯೂ ಬಿತ್ತಾ ಉಗ್ರರ ಕರಿನೆರಳು?

ಪ್ರತಿ ಬಾರಿ ದಸರಾಗೆ 1700 ರಿಂದ 2000 ಪೊಲೀಸರ ನಿಯೋಜಿಸಲಾಗುತ್ತಿತ್ತು. ಈ ಬಾರಿ ಭದ್ರತೆಗೆ 3500ಕ್ಕೂ ಹೆಚ್ಚು ಪೊಲೀಸರು, ರಾಜ್ಯದ ಎಲ್ಲಾ ವಲಯ, ಸಿಐಡಿ, ಐಎಸ್​ಡಿಯಿಂದಲೂ ನಿಯೋಜನೆ ಮಾಡಲಾಗಿದೆ. ಶ್ರೀರಂಗಪಟ್ಟಣ, KRS ಪೊಲೀಸರಿಗೂ ಅಲರ್ಟ್ ಇರುವಂತೆ ಕೇಂದ್ರ ಗುಪ್ತಚರ ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ:Mysuru Dasara Gold Card: ಮೈಸೂರು ದಸರಾ ಗೋಲ್ಡ್ ಕಾರ್ಡ್ ಖರೀದಿಗೆ ಮತ್ತೆ ಅವಕಾಶ

ಸುಮಾರು 70 ಜನರು ಅಕ್ರಮವಾಗಿ ದೇಶದೊಳಗೆ ನುಸುಳಿರುವ ಮಾಹಿತಿ

ಹೌದು, ನಕಲಿ ಪಾಸ್ ಪೋರ್ಟ್ ಪಡೆದು ಅಂದಾಜು 70 ಜನರು ಅಕ್ರಮವಾಗಿ ದೇಶದೊಳಗೆ ನುಸುಳಿರುವ ಮಾಹಿತಿಯನ್ನು ಕೇಂದ್ರ ಐಬಿ ಟೀಂ ಮಾಹಿತಿ ಕಲೆಹಾಕಿದೆ. ಒಂದು ಕಡೆ ಕ್ರಿಕೆಟ್ ಮ್ಯಾಚ್,  ಮತ್ತೊಂದು ಕಡೆ ದಸರಾ ಉತ್ಸವ ನಡೆಯುತ್ತಿದೆ. ಈ ಹಿನ್ನಲೆ ಕ್ರಿಕೆಟ್ ಜೊತೆಗೆ ದಸರಾಕ್ಕೂ ಬಂದೋಬಸ್ತ್ ಹೆಚ್ಚಿಸುವಂತೆ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:39 am, Sun, 22 October 23

ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
Loading...
Unable to load recommendations.
Follow Us