AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸರಕಾರದಲ್ಲಿ ಯಾವ ಸಮುದಾಯಕ್ಕೂ ಅನ್ಯಾಯವಾಗಿಲ್ಲ; ಈಶ್ವರ್​ ಖಂಡ್ರೆ

ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಯಾವ ಸಮುದಾಯಕ್ಕೂ ಅನ್ಯಾಯವಾಗಿಲ್ಲ ಎಂದು ಬಸವಜಯಂತಿ ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ (Eshwar Khandre) ಅವರು ಪರೋಕ್ಷವಾಗಿ ಶಾಮನೂರು ಅವರ ವಿಚಾರ ಪ್ರಸ್ತಾಪಿಸಿದ್ದಾರೆ.

ಸಿದ್ದರಾಮಯ್ಯ ಸರಕಾರದಲ್ಲಿ ಯಾವ ಸಮುದಾಯಕ್ಕೂ ಅನ್ಯಾಯವಾಗಿಲ್ಲ; ಈಶ್ವರ್​ ಖಂಡ್ರೆ
ಸಚಿವ ಈಶ್ವರ್​ ಖಂಡ್ರೆ
ದಿಲೀಪ್​, ಚೌಡಹಳ್ಳಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 07, 2023 | 4:29 PM

Share

ಮೈಸೂರು, ಅ.06: ಇತ್ತೀಚೆಗೆ ಕಾಂಗ್ರೆಸ್​ನ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ (Shamanuru Shivashankarappa) ನವರು ‘ಸರ್ಕಾರ ಲಿಂಗಾಯತ ಅಧಿಕಾರಿಗಳ ಕಡೆಗಣನೆ ಮಾಡುತ್ತಿದೆ ಎಂದಿದ್ದರು. ಅವರ ಹೇಳಿಕೆಗೆ ಸ್ವತಃ ಅವರ ಪುತ್ರ ಎಸ್​ ಎಸ್​ ಮಲ್ಲಿಕಾರ್ಜುನ್​ ಕೂಡ ವಿರೋಧ ವ್ಯಕ್ತಪಡಿಸಿದ್ದರು. ಈ ಕುರಿತಾಗಿ  ಇದೀಗ ‘ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಯಾವ ಸಮುದಾಯಕ್ಕೂ ಅನ್ಯಾಯವಾಗಿಲ್ಲ ಎಂದು ಬಸವಜಯಂತಿ ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ (Eshwar Khandre) ಅವರು ಪರೋಕ್ಷವಾಗಿ ಶಾಮನೂರು ಅವರ ವಿಚಾರ ಪ್ರಸ್ತಾಪಿಸಿದ್ದಾರೆ.

ಇಂದು (ಅ.07) ಮೈಸೂರಿನ ಕಲಾಮಂದಿರದಲ್ಲಿ ನಡೆದ ಬಸವಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ ನಮ್ಮ ಸರ್ಕಾರದಲ್ಲಿ ಯಾವ ಸಮುದಾಯದ ಕಡೆಗಣನೆಯೂ ಆಗಿಲ್ಲ, ಸಮುದಾಯವನ್ನು ಕಡೆಗಣಿಸುವುದಕ್ಕೆ ಸಿಎಂ ಅವಕಾಶ ಕೊಡಲ್ಲ. ಈ ಮಾತನ್ನು ಎಲ್ಲರೂ ಸೂಕ್ಷ್ಮವಾಗಿ ಅರ್ಥ ಮಾಡಿಕೊಳ್ಳಿ. ಎಲ್ಲಾ ಯೋಜನೆಗಳು ಜಾತಿರಹಿತ ಸಮಾಜ ನಿರ್ಮಾಣಕ್ಕೆ ಪೂರಕವಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣನ ತತ್ವದ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರವನ್ನು ಕಡ್ಡಾಯಗೊಳಿಸಿದ್ದಾರೆ ಎಂದರು.

ಇದನ್ನೂ ಓದಿ:ನನ್ನ ತಂದೆ ಲಿಂಗಾಯತ ಅಧಿಕಾರಿಗಳ ಬಗ್ಗೆ ಮಾತಾಡಿದ್ದು ಮುಗಿದ ಅಧ್ಯಾಯ: ಎಸ್ ಎಸ್ ಮಲ್ಲಿಕಾರ್ಜುನ, ಸಚಿವ

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಸಂತೋಷ್ ಲಾಡ್​ ತಿರುಗೇಟು

ಇನ್ನು ಬಳ್ಳಾರಿಯಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗ್ತಿದೆ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವ ಸಂತೋಷ್ ಲಾಡ್ ‘ ನಮ್ಮ ಸರ್ಕಾರದಲ್ಲಿ ಎಲ್ಲಾ ಸಮುದಾಯಕ್ಕೂ ಸ್ಥಾನಮಾನ ನೀಡಲಾಗಿದೆ. ಶಾಮನೂರು ಶಿವಶಂಕರಪ್ಪ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. 2013 ಮತ್ತು 2023ರಲ್ಲಿ ಎಲ್ಲರಿಗೂ ಸಮನಾದ ಅವಕಾಶ ನೀಡಲಾಗಿದೆ. ಎಲ್ಲಾ ಜಾತಿಯವರಿಗೂ ಸಿಎಂ ಸಿದ್ದರಾಮಯ್ಯ ನ್ಯಾಯ ಒದಗಿಸಿದ್ದಾರೆ. ನಮ್ಮ ಪಕ್ಷದ ತತ್ವ, ಸಿದ್ಧಾಂತವೂ ಕೂಡ ಅದೇ ಆಗಿದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Sat, 7 October 23

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ