ಈ ಬಾರಿ ತಮಿಳುನಾಡಿಗೆ ಕಾವೇರಿ ನೀರು ಕೊಡಲು ಸಾಧ್ಯವಾಗಲ್ಲ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್
ರಾಜ್ಯಕ್ಕೆ ಮುಂಗಾರು ಪೂರ್ಣ ಪ್ರಮಾಣದಲ್ಲಿ ಕಾಲಿಟ್ಟಿಲ್ಲ. ಕುಡಿಯುವ ನೀರಿಗಾಗಿ ಎಲ್ಲಡೆ ಹಾಹಾಕಾರ ಶುರುವಾಗಿದೆ. ಈ ಬಾರಿ ತಮಿಳುನಾಡಿಗೆ ಕಾವೇರಿ ನೀರು ಕೊಡಲು ಸಾಧ್ಯವಾಗಲ್ಲ. ಕಾವೇರಿ ನೀರಾವರಿ ನಿಗಮದವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.
ಮೈಸೂರು: ಕರ್ನಾಟಕ (Karnataka) ಮತ್ತು ತಮಿಳುನಾಡು (Tamilnadu) ರಾಜ್ಯಗಳ ನಡುವೆ ಕಾವೇರಿ (Kaveri) ನದಿ ನೀರು ವಿಚಾರವಾಗಿ ಗಲಾಟೆ ನಡೆಯುತ್ತಿದೆ. ರಾಜ್ಯಕ್ಕೆ ಮುಂಗಾರು ಪೂರ್ಣ ಪ್ರಮಾಣದಲ್ಲಿ ಕಾಲಿಟ್ಟಿಲ್ಲ. ಕುಡಿಯುವ ನೀರಿಗಾಗಿ ಎಲ್ಲಡೆ ಹಾಹಾಕಾರ ಶುರುವಾಗಿದೆ. ಈ ಬಾರಿ ತಮಿಳುನಾಡಿಗೆ ಕಾವೇರಿ ನೀರು ಕೊಡಲು ಸಾಧ್ಯವಾಗಲ್ಲ. ಕಾವೇರಿ ನೀರಾವರಿ ನಿಗಮದವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾವೇರಿ ವ್ಯಾಪ್ತಿಯ 4 ಡ್ಯಾಂಗಳಲ್ಲಿ ಒಟ್ಟು 7 ಟಿಎಂಸಿ ನೀರು ಮಾತ್ರ ಇದೆ. ಪ್ರತಿ ವರ್ಷ ನಾವು ತಮಿಳುನಾಡಿಗೆ 3.5 ಟಿಎಂಸಿ ನೀರು ಬಿಡಬೇಕು. ತಮಿಳುನಾಡಿಗೆ ನೀರು ಬಿಟ್ಟರೆ ನಮಗೆ ಬಹಳ ಸಮಸ್ಯೆ ಆಗಲಿದೆ. ಈ ಸಂಬಂಧ ಸರ್ಕಾರ ಸೆಂಟ್ರಲ್ ವಾಟರ್ ಕಮಿಷನ್ಗೆ ಪತ್ರ ಬರೆದಿದೆ. ಕಾವೇರಿ ನೀರು ಬಿಡುವ ವಿಚಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರಲಿದೆ. ಹೀಗಾಗಿ ಕೇಂದ್ರ ಸರ್ಕಾರ ತಮಿಳುನಾಡಿಗೆ ಮನವರಿಕೆ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಬಿಜೆಪಿ ನಾಯಕರು ಕೂಡ ಕೇಂದ್ರದ ಗಮನಕ್ಕೆ ತರಲಿ. ರಾಜ್ಯದಲ್ಲಿ ಮಳೆಯ ಅಭಾವ ಇದೆ. ಜುಲೈ ತಿಂಗಳಿಂದ ಮಳೆಯಾಗುವ ಸಾಧ್ಯತೆ ಇದೆ. ಸದ್ಯ ಕುಡಿಯುವ ನೀರಿಗೆ ಸಮಸ್ಯೆಯಾಗುವ ವಾತಾವರಣ ಇದೆ. ಈಗಲೇ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ ಎಂದರು.
ಹಳೇ ಮೈಸೂರು ಭಾಗದ ಕಾವೇರಿ, ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳಲ್ಲಿ ಒಟ್ಟು 7 ಟಿಎಂಸಿ ನೀರು ಮಾತ್ರ ಸಂಗ್ರಹ ಇದೆ. ಕೆ.ಆರ್.ಎಸ್‌ನಲ್ಲಿ 2.825 ಟಿಎಂಸಿ, ಹಾರಂಗಿಯಲ್ಲಿ 1.556 ಟಿಎಂಸಿ, ಕಬಿನಿಯಲ್ಲಿ 0.68 ಟಿಎಂಸಿ, ಹೇಮಾವತಿಯಲ್ಲಿ 2 ಟಿಎಂಸಿ ನೀರು ಮಾತ್ರ ಇದೆ ಎಂದು ತಿಳಿಸಿದರು.
ಇದನ್ನೂ ಓದಿ: ಬೆಂಗಳೂರಿಗೆ ಜಲಕ್ಷಾಮದ ಭೀತಿ.! ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ಕುಸಿತ
ಇನ್ನು ಬೆಂಗಳೂರು ನಗರ ಒಂದಕ್ಕೆ ಮೂರುವರೆ ಟಿಎಂಸಿ ನೀರು ಬೇಕು. ಹಾಸನ, ಮಡಿಕೇರಿ, ಮೈಸೂರು ಚಾಮರಾಜನಗರ, ರಾಮನಗರ, ಮಂಡ್ಯ, ತುಮಕೂರು, ಬೆಂಗಳೂರು ರೂರಲ್‌ಗೆ ಎರಡೂವರೆ ಟಿಎಂಸಿ ನೀರು ಬೇಕು. ಕೃಷಿಗೆ ಐದು ಟಿಎಂಸಿ ನೀರು ಬೇಕು. ನಾವು ತಮಿಳುನಾಡಿಗೆ 3.5 ಟಿಎಂಸಿ ನೀರು ಬಿಡಬೇಕು. ತಮಿಳುನಾಡಿಗೆ ನೀರು ಬಿಟ್ಟರೆ ನಮಗೆ ಬಹಳ ಸಮಸ್ಯೆ ಆಗುತ್ತದೆ ಎಂದು ಹೇಳಿದರು.
ಸೆಂಟ್ರಲ್ ವಾಟರ್ ಕಮಿಷನ್‌ನವರಿಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕಯಮಾರ್ ಪತ್ರ ಬರೆದಿದ್ದೇವೆ. ಈಗ ತಮಿಳುನಾಡಿಗೆ ನೀರು ಬಿಟ್ಟರೆ ಪರಿಸ್ಥಿತಿ ಕಷ್ಟವಾಗುತ್ತದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡಲಾಗಲ್ಲ ಎಂದರು. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರಕ್ಕೆ ಹೇಳಬೇಕು. ಬಿಜೆಪಿಯವರು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಕಾವೇರಿ ನೀರು ಬಿಡುವುದು ತಡೆಯುವುದು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದೆ. ಆಮೇಲೆ ಮೀಡಿಯಾ ಮುಂದೆ ಬಾಯಿ ಬಡಿದುಕೊಳ್ಳಬೇಡಿ. ರಾಜ್ಯದ ಜನರಿಗೆ ನೀರು ಕೊಡಿಸುವ ಕೆಲಸ ಮಾಡಿ ಕೇಂದ್ರದಲ್ಲಿ ನಿಮ್ಮ ಸರ್ಕಾರವೇ ಇರುವುದು ಎಂದು ವಾಗ್ದಾಳಿ ಮಾಡಿದರು.
ಮೇಕೆದಾಟುವಿನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ
ಕಾವೇರಿ ನೀರು ತಮಿಳುನಾಡು ಮೂಲಕ ವ್ಯರ್ಥವಾಗಿ ಹೋಗುವ ಕಾವೇರಿ ನೀರನ್ನು ಬೆಂಗಳೂರಿಗೆ ತರಬೇಕಿದೆ. ಹೀಗಾಗಿ ಮೇಕೆದಾಟುವಿನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದರು.
ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ಬೆಂಗಳೂರಿಗೆ ನೀರಿನ ಅವಶ್ಯಕತೆ ತುಂಬಾ ಇದೆ. ಹೀಗಾಗಿಯೇ ನಾವು ಮೇಕೆದಾಟು ಪಾದಯಾತ್ರೆ ಮಾಡಿದ್ದೆವು. ಕಾವೇರಿ ನೀರು ತಮಿಳುನಾಡು ಮೂಲಕ ಸಮುದ್ರಕ್ಕೆ ಸೇರುತ್ತಿದೆ. ವ್ಯರ್ಥವಾಗಿ ಹೋಗುವ ಕಾವೇರಿ ನೀರನ್ನು ಬೆಂಗಳೂರಿಗೆ ತರಬೇಕಿದೆ ಎಂದಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ