ಮೈಸೂರು: ಆನ್​ಲೈನ್ ಬೆಟ್ಟಿಂಗ್​ಗೆ ಒಂದೇ ಕುಟುಂಬದ ಮೂವರು ಬಲಿ

ಮೈಸೂರು ತಾಲ್ಲೂಕಿನ ಹಂಚ್ಯಾ ಗ್ರಾಮದಲ್ಲಿ ಐಪಿಎಲ್ ಮತ್ತು ಆನ್‌ಲೈನ್ ಬೆಟ್ಟಿಂಗ್‌ನಿಂದಾಗಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ನಡೆದಿದೆ. ಜೋಶಿ ಆಂಥೋನಿ, ಜೋಬಿ ಆಂಥೋನಿ ಮತ್ತು ಶರ್ಮಿಳಾ ಆತ್ಮಹತ್ಯೆ ಮಾಡಿಕೊಂಡವರು. ಜೋಬಿ ಮತ್ತು ಶರ್ಮಿಳಾ ಅಪಾರ ಸಾಲದಲ್ಲಿ ಸಿಲುಕಿದ್ದರು. ಜೋಶಿ ಆಂಥೋನಿ ಮೊದಲು ಆತ್ಮಹತ್ಯೆ ಮಾಡಿಕೊಂಡರು, ಬಳಿಕ ಅವರ ಸಹೋದರ ಮತ್ತು ಅವರ ನಾದಿನಿ ಆತ್ಮಹತ್ಯೆಗೆ ಶರಣಾದರು.

ಮೈಸೂರು: ಆನ್​ಲೈನ್ ಬೆಟ್ಟಿಂಗ್​ಗೆ ಒಂದೇ ಕುಟುಂಬದ ಮೂವರು ಬಲಿ
ಜೋಶಿ ಆಂಥೋನಿ, ಜೋಬಿ ಆಂಥೋನಿ, ಶರ್ಮಿಳಾ
Edited By:

Updated on: Feb 18, 2025 | 11:30 AM

ಮೈಸೂರು, ಫೆಬ್ರವರಿ 19: ಐಪಿಎಲ್​ (IPL) ಹಾಗೂ ಆನ್​ಲೈನ್ ಬೆಟ್ಟಿಂಗ್​ಗೆ (Online Betting) ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಮೈಸೂರು (Mysore) ತಾಲೂಕಿನ ಹಂಚ್ಯಾ ಗ್ರಾಮದ ಬಳಿ ನಡೆದಿದೆ. ಜೋಶಿ ಆಂಥೋನಿ, ಜೋಬಿ ಆಂಥೋನಿ, ಶರ್ಮಿಳಾ ಅಲಿಯಾಸ್​ ಸ್ವಾತಿ ಮೃತ ದುರ್ದೈವಿಗಳು. ಜೋಬಿ ಆಂಥೋನಿ ಹಾಗೂ ಜೋಷಿ ಆಂಥೋನಿ ಸಹೋದರರು.

ಜೋಶಿ ಆಂಥೋನಿ ತನ್ನ ತಮ್ಮನಾದ ಜೋಬಿ ಆಂಥೋನಿ ಮತ್ತು ನಾದಿನಿ ಶರ್ಮಿಳಾ ಆಲಿಯಾಸಿ ಸ್ವಾತಿ ಮೇಲೆ ಮೋಸದ ಆರೋಪ ಹೊರಿಸಿ ಸೋಮವಾರ (ಫೆ.17) ರಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ಜೋಶಿ ಆಂಥೋನಿ ವಿಡಿಯೋ ಮಾಡಿದ್ದು, “ಸಹೋದರ ಜೋಬಿ, ಆತನ ಪತ್ನಿ ಶರ್ಮಿಳಾ ಮೋಸದಿಂದ ನನ್ನ ಸಹೋದರಿ ಮೂಲಕ ಊರು ತುಂಬ ಸಾಲ ಪಡೆದು ಮೋಸ ಮಾಡಿದ್ದಾರೆ. ನನ್ನ ಸಹೋದರಿಗೆ ಗಂಡ ಇಲ್ಲ, ಅವರು ಮೋಸ ಮಾಡಿದ್ದಾರೆ. ನನ್ನ ಸಾವಿಗೆ ತಮ್ಮ ಜೋಬಿ ಆಂಥೋನಿ ಮತ್ತು ಆತನ ಪತ್ನಿ ಶರ್ಮಿಳಾ ಕಾರಣ. ಅವರಿಗೆ ಶಿಕ್ಷೆ ಕೊಡಿಸಿ” ಎಂದು ವಿಡಿಯೋದಲ್ಲಿ ಹೇಳಿ ನೇಣಿಗೆ ಶರಣದಾಗಿದ್ದಾರೆ.

ಜೋಶಿ ಆಂಥೋನಿ ಸಾವಿನ ವಿಚಾರ ತಿಳಿದು ತಮ್ಮ ಜೋಬಿ ಆಂಥೋನಿ ಹಾಗೂ ಈತನ ಪತ್ನಿ ಶರ್ಮಿಳಾ ಅಲಿಯಾಸ್​ ಸ್ವಾತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೋಬಿ ಹಾಗೂ ಶರ್ಮಿಳಾ ಐಪಿಎಲ್ ಹಾಗೂ ಆನ್ ಲೈನ್ ಗೇಮ್​ನಲ್ಲಿ ಲಕ್ಷಾಂತರ ಸಾಲ ಮಾಡಿಕೊಂಡಿದ್ದರು. ಸಾಲಗಾರರು ಪ್ರತಿ ನಿತ್ಯ ಮನೆಯ ಬಳಿ ಬಂದು ದುಡ್ಡು ಕೇಳುತ್ತಿದ್ದರು. ಇದರಿಂದ ಮನನೊಂದ ಜೋಷಿ ಆಂಥೋನಿ ಸೋಮವಾರ ಮೈಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು (ಫೆ.18) ಜೋಬಿ ಹಾಗೂ ಶರ್ಮಿಳಾ ವಿಜಯನಗರದ ಕ್ರೀಡಾ ಮೈದಾನದ ಬಳಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಅಪಾರ್ಟ್ಮೆಂಟ್​ನಲ್ಲಿ ಒಂದೇ ಕುಟುಂಬದ ನಾಲ್ವರ ಸಾವು

ಆನ್​ಲೈನ್​ ಬೆಟ್ಟಿಂಗ್​ ನಿರ್ಬಂಧಕ್ಕೆ ಕಾನೂನು: ಪರಮೇಶ್ವರ್​

2024ರ ವಿಧಾನಮಂಡಲ ಅಧಿವೇಶನದಲ್ಲಿ ಆನ್​ಲೈನ್​ ಬೆಟ್ಟಿಂಗ್​ನಿಂದ ಅನೇಕರು ಪ್ರಾಣ ಕಳೆದುಕೊಳ್ಳುತ್ತಿರುವ ಬಗ್ಗೆ ಸದಸ್ಯರು ಪ್ರಶ್ನೆ ಕೇಳಿದ್ದರು. ಇದಕ್ಕೆ ಗೃಹ ಸಚಿವ ಜಿ ಪರಮೇಶ್ವರ್​ ಅವರು ಮಾತನಾಡಿ, ಹೆಚ್ಚಿನ ಪ್ರಮಾಣದಲ್ಲಿ ಯುವ ಪೀಳಿಗೆ ಆನ್​ಲೈನ್​ ಗೇಮ್​ಗಳ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಆನ್​ಲೈನ್​ ಗೇಮ್​ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಇದರ ತಡೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಕಠಿಣ ಕಾನೂನುಗಳನ್ನು ಜಾರಿ ಮಾಡಬೇಕಿದೆ ಎಂದು ಹೇಳಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:26 am, Tue, 18 February 25