Mysore News: ಕಾವೇರಿ ಹಿನ್ನೀರಿನಲ್ಲಿ ಈಜಲು ಹೋದ ಮೂವರು ಯುವಕರು ನಾಪತ್ತೆ; ಓರ್ವನ ಶವ ಪತ್ತೆ

ಮೈಸೂರು ತಾಲೂಕಿನ ಮೀನಾಕ್ಷಿ ಪುರ ಕಾವೇರಿ‌ ಹಿನ್ನೀರಿನಲ್ಲಿ ಈಜಲು ಹೋದ ಮೂವರು ಯುವಕರು ನಾಪತ್ತೆಯಾದ ಘಟನೆ ನಡೆದಿದ್ದು, ಅದರಲ್ಲಿ ಓರ್ವನ ಶವ ಪತ್ತೆಯಾಗಿದೆ. ಇನ್ನುಳಿದ ಇಬ್ಬರಿಗಾಗಿ‌ ಹುಡುಕಾಟ ನಡೆದಿದೆ.

Mysore News: ಕಾವೇರಿ ಹಿನ್ನೀರಿನಲ್ಲಿ ಈಜಲು ಹೋದ ಮೂವರು ಯುವಕರು ನಾಪತ್ತೆ; ಓರ್ವನ ಶವ ಪತ್ತೆ
ಈಜಲು ಹೋಗಿ ನಾಪತ್ತೆಯಾದ ಯುವಕರು
Follow us
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 16, 2023 | 7:29 AM

ಮೈಸೂರು: ತಾಲೂಕಿನ ಮೀನಾಕ್ಷಿಪುರ ಕಾವೇರಿ‌ ಹಿನ್ನೀರಿನಲ್ಲಿ ಈಜಲು(Swimming) ಹೋದ ಮೂವರು ಯುವಕರು ನಾಪತ್ತೆಯಾದ ಘಟನೆ ನಡೆದಿದ್ದು, ಅದರಲ್ಲಿ ಓರ್ವನ ಶವ ಪತ್ತೆಯಾಗಿದೆ. ಇನ್ನುಳಿದ ಇಬ್ಬರಿಗಾಗಿ‌ ಹುಡುಕಾಟ ನಡೆದಿದೆ. ಭರತ್(20), ಪ್ರವೀಣ್(20), ವರುಣ್(20) ನಾಪತ್ತೆಯಾದ ಯುವಕರು. ಮೂವರು ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ಓದುತ್ತಿದ್ದರು. ಒಟ್ಟು 5 ಜನ ಸ್ನೇಹಿತರು ಕಾವೇರಿ ಹಿನ್ನೀರಿಗೆ ಈಜಲು ತೆರಳಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ನಾಪತ್ತೆಯಾಗಿದ್ದರು. ಇದೀಗ ಭರತ್ ಶವ ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ಈ ಕುರಿತು ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ತಡರಾತ್ರಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ರಸ್ತೆಯಲ್ಲಿ ಬಿದ್ದು ಒದ್ದಾಡಿದ ಯುವಕ

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಕೊಲೆ, ಕಳ್ಳತನಗಳ ಸಂಖ್ಯೆ ಹೆಚ್ಚಾಗಿದೆ. ಇದರಿಂದ ದುಷ್ಕರ್ಮಿಗಳಿಗೆ ಪೊಲೀಸ್​ ಮೇಲಿನ ಭಯ ಹೋದಂತೆ ಕಾಣುತ್ತಿದೆ. ಹೌದು ಅದರಂತೆ ಇದೀಗ ನಗರದ ತಿಮ್ಮಯ್ಯ ಸರ್ಕಲ್ ಬಳಿಯ ಜೆ.ಸಿ.ನಗರ ಮಾರ್ಗದಲ್ಲಿ ತಡರಾತ್ರಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ತೀವ್ರವಾಗಿ ಗಾಯಗೊಂಡ ಯುವಕ ರಸ್ತೆಯಲ್ಲಿ ಬಿದ್ದು ನರಳಾಡಿದ್ದಾನೆ. ರಸ್ತೆಯಲ್ಲಿ ಯುವಕ ನರಳಾಟದ ದೃಶ್ಯವನ್ನ ಸ್ಥಳೀಯರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದು, ಬೋರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಬಾಡಿಗೆಗೆ ಮನೆ ಕೊಟ್ಟಿದ್ದ ಓನರ್ ಆಂಟಿಯನ್ನೇ ತುಂಡು ತುಂಡಾಗಿ ಕತ್ತರಿಸಿದ ಬಿಹಾರ ಯುವಕರು; ಆನೇಕಲ್​ನ ಬೀಭತ್ಸ ಘಟನೆಗೆ ಟ್ವಿಸ್ಟ್

ಯುವತಿ ವಿಚಾರಕ್ಕೆ ಮೂವರು ಸ್ನೇಹಿತರ ನಡುವೆ ಜಗಳ

ಹೌದು ಯುವತಿ ವಿಚಾರಕ್ಕೆ ಗಫರ್ ಮತ್ತು ಹುಸೇನ್ ಸೇರಿ ಮೂವರು ಸ್ನೇಹಿತರ ನಡುವೆ ಜಗಳ ಶುರುವಾಗಿದೆ. ಈ ವೇಳೆ ಕುಡಿದ ಅಮಲಿನಲ್ಲಿ ಹುಸೇನ್ ಮತ್ತೋರ್ವ ಸ್ನೇಹಿತ ಸೇರಿ ಬಿಯರ್ ಬಾಟಲ್ ಮತ್ತು ಕಲ್ಲಿನಿಂದ ಗಫರ್ ತಲೆಗೆ ಹೊಡೆದಿದ್ದಾರೆ. ಹಲ್ಲೆ ಮಾಡಿದ ಹುಸೇನ್ ಹಾಗೂ ಮತ್ತೊಬ್ಬ ಯುವಕನನ್ನ ಇದೀಗ ಪೊಲೀಸರು ವಶಕ್ಕೆ ಪಡೆದಿದ್ದು, ಸದ್ಯ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಯುವಕನ ತಲೆಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಇನ್ನು ಈ ಘಟನೆ ಕಳೆದ ರಾತ್ರಿ 9:40 ರ ವೇಳೆಗೆ ನಡೆದಿದೆ. ಹಲ್ಲೆ ಪರಿಣಾಮ ಗಾಯಾಳು ಯುವಕನ ತಲೆಗೆ ಗಂಭೀರ ಗಾಯವಾಗಿದ್ದು, ಗಾಯಾಳು ಯುವಕನನ್ನ ಸ್ಥಳೀಯರು ಬೋರಿಂಗ್ ಅಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭಾರತಿನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿ, ಹಲ್ಲೆ ನಡೆಸಿದ ಆರೋಪಿಗಳ ಪತ್ತೆಗೆ ಶೋಧಕಾರ್ಯ ಶುರು ಮಾಡಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ