ಮೈಸೂರು: ತಾಲೂಕಿನ ಮೀನಾಕ್ಷಿಪುರ ಕಾವೇರಿ ಹಿನ್ನೀರಿನಲ್ಲಿ ಈಜಲು(Swimming) ಹೋದ ಮೂವರು ಯುವಕರು ನಾಪತ್ತೆಯಾದ ಘಟನೆ ನಡೆದಿದ್ದು, ಅದರಲ್ಲಿ ಓರ್ವನ ಶವ ಪತ್ತೆಯಾಗಿದೆ. ಇನ್ನುಳಿದ ಇಬ್ಬರಿಗಾಗಿ ಹುಡುಕಾಟ ನಡೆದಿದೆ. ಭರತ್(20), ಪ್ರವೀಣ್(20), ವರುಣ್(20) ನಾಪತ್ತೆಯಾದ ಯುವಕರು. ಮೂವರು ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ಓದುತ್ತಿದ್ದರು. ಒಟ್ಟು 5 ಜನ ಸ್ನೇಹಿತರು ಕಾವೇರಿ ಹಿನ್ನೀರಿಗೆ ಈಜಲು ತೆರಳಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ನಾಪತ್ತೆಯಾಗಿದ್ದರು. ಇದೀಗ ಭರತ್ ಶವ ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ಈ ಕುರಿತು ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಕೊಲೆ, ಕಳ್ಳತನಗಳ ಸಂಖ್ಯೆ ಹೆಚ್ಚಾಗಿದೆ. ಇದರಿಂದ ದುಷ್ಕರ್ಮಿಗಳಿಗೆ ಪೊಲೀಸ್ ಮೇಲಿನ ಭಯ ಹೋದಂತೆ ಕಾಣುತ್ತಿದೆ. ಹೌದು ಅದರಂತೆ ಇದೀಗ ನಗರದ ತಿಮ್ಮಯ್ಯ ಸರ್ಕಲ್ ಬಳಿಯ ಜೆ.ಸಿ.ನಗರ ಮಾರ್ಗದಲ್ಲಿ ತಡರಾತ್ರಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ತೀವ್ರವಾಗಿ ಗಾಯಗೊಂಡ ಯುವಕ ರಸ್ತೆಯಲ್ಲಿ ಬಿದ್ದು ನರಳಾಡಿದ್ದಾನೆ. ರಸ್ತೆಯಲ್ಲಿ ಯುವಕ ನರಳಾಟದ ದೃಶ್ಯವನ್ನ ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಬೋರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೌದು ಯುವತಿ ವಿಚಾರಕ್ಕೆ ಗಫರ್ ಮತ್ತು ಹುಸೇನ್ ಸೇರಿ ಮೂವರು ಸ್ನೇಹಿತರ ನಡುವೆ ಜಗಳ ಶುರುವಾಗಿದೆ. ಈ ವೇಳೆ ಕುಡಿದ ಅಮಲಿನಲ್ಲಿ ಹುಸೇನ್ ಮತ್ತೋರ್ವ ಸ್ನೇಹಿತ ಸೇರಿ ಬಿಯರ್ ಬಾಟಲ್ ಮತ್ತು ಕಲ್ಲಿನಿಂದ ಗಫರ್ ತಲೆಗೆ ಹೊಡೆದಿದ್ದಾರೆ. ಹಲ್ಲೆ ಮಾಡಿದ ಹುಸೇನ್ ಹಾಗೂ ಮತ್ತೊಬ್ಬ ಯುವಕನನ್ನ ಇದೀಗ ಪೊಲೀಸರು ವಶಕ್ಕೆ ಪಡೆದಿದ್ದು, ಸದ್ಯ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಇನ್ನು ಈ ಘಟನೆ ಕಳೆದ ರಾತ್ರಿ 9:40 ರ ವೇಳೆಗೆ ನಡೆದಿದೆ. ಹಲ್ಲೆ ಪರಿಣಾಮ ಗಾಯಾಳು ಯುವಕನ ತಲೆಗೆ ಗಂಭೀರ ಗಾಯವಾಗಿದ್ದು, ಗಾಯಾಳು ಯುವಕನನ್ನ ಸ್ಥಳೀಯರು ಬೋರಿಂಗ್ ಅಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭಾರತಿನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿ, ಹಲ್ಲೆ ನಡೆಸಿದ ಆರೋಪಿಗಳ ಪತ್ತೆಗೆ ಶೋಧಕಾರ್ಯ ಶುರು ಮಾಡಿದ್ದಾರೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ