ಮೈಸೂರು: ಹುಲಿ ದಾಳಿಗೆ ಬೇಸತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಥಳಿಸಿದ ಗ್ರಾಮಸ್ಥರು

ಮೈಸೂರು ಜಿಲ್ಲೆ ನಂಜನಗೂಡಿನ ಮಹದೇವನಗರದ ಹೊರವಲಯದಲ್ಲಿ ಹುಲಿ ದಾಳಿಗೆ ಬೇಸತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಗ್ರಾಮಸ್ಥರು ಥಳಿಸಿದ್ದಾರೆ. ಪದೇ ಪದೆ ಹುಲಿ ದಾಳಿ ಆದರೂ, ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯಾ ಇಲಾಖೆ ಸಿಬ್ಬಂದಿಗೆ ಥಳಿಸಿ ಆಕ್ರೋಶ ಹೊರ ಹಾಕಿದ್ದಾರೆ.

ಮೈಸೂರು: ಹುಲಿ ದಾಳಿಗೆ ಬೇಸತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಥಳಿಸಿದ ಗ್ರಾಮಸ್ಥರು
ಹುಲಿ ದಾಳಿಗೆ ಬೇಸತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಥಳಿತ
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Nov 01, 2023 | 11:56 AM

ಮೈಸೂರು, ನ.01: ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಯಿಂದಾಗಿ (Tiger Attack) ರೈತನೋರ್ವ ಗಂಭಿರವಾಗಿ ಗಾಯಗೊಂಡಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಈ ಘಟನೆ ಸಂಬಂಧ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು ಈ ವೇಳೆ ಗ್ರಾಮಸ್ಥರು ಸಿಬ್ಬಂದಿಗೆ ಥಳಿಸಿದ ಘಟನೆ ನಡೆದಿದೆ. ಮೈಸೂರು (Mysuru) ಜಿಲ್ಲೆ ನಂಜನಗೂಡಿನ ಮಹದೇವನಗರದ ಹೊರವಲಯದಲ್ಲಿ ಪದೇ ಪದೆ ಹುಲಿ ದಾಳಿ ನಡೆಯುತ್ತಿದ್ದು ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯಾ ಇಲಾಖೆ ಸಿಬ್ಬಂದಿಗೆ ಥಳಿಸಿ ಆಕ್ರೋಶ ಹೊರ ಹಾಕಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಮಹಾಂತೇಶ್ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ವರ್ಷದ ಹಿಂದೆ ಹಾದನೂರು ಒಡೆಯನಪುರದ ಮಹದೇವೇಗೌಡ ಎಂಬ ರೈತ ಹುಲಿ ದಾಳಿಗೆ ಬಲಿಯಾಗಿದ್ದರು.

ಸ್ಥಳೀಯರ ಮೊಬೈಲ್‌ನಲ್ಲಿ ಹುಲಿ ಓಡಾಟದ ದೃಶ್ಯ ಸೆರೆ

ಇನ್ನು ನಂಜನಗೂಡು ತಾಲೂಕಿನ ಮಹದೇವ ನಗರದ ಹೊರವಲಯದಲ್ಲಿ ಹುಲಿಯ ಓಡಾಟ ಆತಂಕಕ್ಕೆ ಕಾರಣವಾಗಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳೀಯರ ಮೊಬೈಲ್‌ನಲ್ಲಿ ಹುಲಿ ಓಡಾಟದ ದೃಶ್ಯ ಸೆರೆಯಾಗಿದೆ. ಮತ್ತೊಂದೆಡೆ ಗಾಯಾಳು ವೀರಭದ್ರ ಭೋವಿ ಅವರನ್ನು ಶಾಸಕ ದರ್ಶನ್ ಧೃವನಾರಾಯಣ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಇದನ್ನೂ ಓದಿ: ಹಸು, ಕರುವಿನ ಮೇಲೆ ಹುಲಿ ದಾಳಿ; ಬಿಡಿಸಲು ಹೋದ ವ್ಯಕ್ತಿ ಮೇಲೂ ಎರಗಿದ ವ್ಯಾಘ್ರ

ಘಟನೆ ಹಿನ್ನೆಲೆ

ವೀರಭದ್ರ ಭೋವಿ ಎಂಬ ರೈತ ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಸಮೀಪದ, ನಂಜನಗೂಡು ತಾಲೂಕಿನ ಮಹದೇವ ನಗರ ಗ್ರಾಮದ ಮತ್ತಿ ಮರದ ಜೇನುಕಟ್ಟೆಯ ಬಳಿ ದನ ಮೇಯಿಸುತ್ತಿದ್ದಾಗ ಹಸು ಹಾಗೂ ಕರುವಿನ ಮೇಲೆ ಹುಲಿ ದಾಳಿ ನಡೆಸಿತ್ತು. ಆಗ ಹಸುವನ್ನು ರಕ್ಷಿಸಲು ಮುಂದಾದ ವೀರಭದ್ರ ಮೇಲೂ ಹುಲಿ ದಾಳಿ ಮಾಡಿತ್ತು. ಸದ್ಯ ರೈತನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಮಹಾದೇವನಗರ ರೈತರು ಆಕ್ರೋಶ ಹೊರಹಾಕಿದ್ದಾರೆ. ಶಾಶ್ವತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ