Tiger attack: ಹುಲಿ ದಾಳಿಗೆ ರೈತ ಬಲಿ, ಕಾಡಾನೆ ದಾಳಿಯಿಂದ ವೃದ್ಧನಿಗೆ ಗಂಭೀರ ಗಾಯ

ಹುಲಿ ದಾಳಿಯಿಂದ‌ ಕುಸಿದು ಬಿದ್ದು ರೈತ ಮರಿಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಳೆದ ಹಲವು ದಿನಗಳಿಂದ ಹೆಚ್ ಡಿ ಕೋಟೆ ತಾಲ್ಲೂಕು ಭಾಗದಲ್ಲಿ ಹುಲಿ ದಾಳಿ ಮಾಡುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Tiger attack: ಹುಲಿ ದಾಳಿಗೆ ರೈತ ಬಲಿ, ಕಾಡಾನೆ ದಾಳಿಯಿಂದ ವೃದ್ಧನಿಗೆ ಗಂಭೀರ ಗಾಯ
ಹುಲಿ ದಾಳಿಗೆ ರೈತ ಬಲಿ, ಹಲವು ದಿನಗಳಿಂದ ದಾಳಿ ಮಾಡುತ್ತಿರುವ ಹುಲಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 22, 2022 | 8:57 AM

ಮೈಸೂರು: ಮೈಸೂರಿನ ಹೆಚ್ ಡಿ ಕೋಟೆ ತಾಲ್ಲೂಕು ಕೋತನಹಳ್ಳಿ ಗ್ರಾಮದಲ್ಲಿ ಹುಲಿ ದಾಳಿಗೆ ಒಬ್ಬ ರೈತ ಬಲಿಯಾಗಿದ್ದಾರೆ. ಮರಿಗೌಡ (61) ಮೃತ ರೈತ. ಹಸು‌ ಮೇಯಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಹಸು‌ ಮೇಯಿಸುತ್ತಿದ್ದ ವೃದ್ಧ ಮರಿಗೌಡ ಮೇಲೆ ಹುಲಿ ಏಕಾ‌ಏಕಿ ದಾಳಿ ಮಾಡಿದೆ. ಹುಲಿ ದಾಳಿಯಿಂದ‌ ಕುಸಿದು ಬಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಹುಲಿ ದಾಳಿ ಮಾಡುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕಳತ್ಮಾಡು ಬಳಿ ಕಾಡಾನೆ ದಾಳಿ, ವೃದ್ಧನಿಗೆ ಗಂಭೀರ ಗಾಯ ವಿರಾಜಪೇಟೆ ತಾಲ್ಲೂಕಿನ ಕಳತ್ಮಾಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಚಿಂತಾಜನಕ ಸ್ಥಿತಿ ತಲುಪಿದ್ದಾರೆ. ಹೊಸೊಕ್ಲು ಮಾಚಯ್ಯ (65) ಎಂಬುವರ ಮೇಲೆ ಸಲಗ ದಾಳಿ ಮಾಡಿದೆ. ಮಾಚಯ್ಯ ಅವರ ಎರಡೂ ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ.

ವರದಕ್ಷಿಣೆ ಕಿರುಕುಳ: ಪತಿ-ಅತ್ತೆಗೆ 10 ವರ್ಷ ಜೈಲು ಶಿಕ್ಷೆ ಮೈಸೂರು: ವರದಕ್ಷಿಣೆ ಕಿರುಕುಳದಿಂದ 2013ರಲ್ಲಿ ಸವಿತಾ ಆತ್ಮಹತ್ಯೆ ಪ್ರಕರಣದಲ್ಲಿ ಟಿ. ನರಸೀಪುರ ತಾಲೂಕಿನ ಮರಡಿಪುರ ಗ್ರಾಮದ ಮೃತ ಸವಿತಾ ಅವರ ಪತಿ ಸೋಮಣ್ಣ ಮತ್ತು ಅತ್ತೆ ರತ್ನಮ್ಮಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ.

ಸೋಮಣ್ಣ ಪತ್ನಿ ಸವಿತಾ 2013ರಲ್ಲಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಪತಿ ಮತ್ತು ಅತ್ತೆ ನೀಡುತ್ತಿದ್ದ ವರದಕ್ಷಿಣೆ ಕಿರುಕುಳ ಕಾರಣ ಎಂದು ಆರೋಪಿಸಲಾಗಿತ್ತು. ನ್ಯಾಯಾಧೀಶರಾದ ಅಶ್ವಿನಿ ವಿಜಯ ಶರಿಯಣ್ಣವರ್ ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರವಾಗಿ ಪಿಪಿ ನಾಗಪ್ಪ ಸಿ. ನಾಕಮನ್ ವಾದ ಮಂಡಿಸಿದ್ದರು.

ವಾಹನ ಡಿಕ್ಕಿಯಾಗಿ ಚಿರತೆ ಸಾವು ಮೈಸೂರು: ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗಮಂಗಲ ಗ್ರಾಮದ ಹುಣಸೂರು ಪಿರಿಯಪಟ್ಟಣ ರಸ್ತೆಯ ಬಳಿ ವಾಹನ ಡಿಕ್ಕಿಯಾಗಿ ಚಿರತೆ ಮೃತಪಟ್ಟಿದೆ. ಸ್ಥಳಕ್ಕೆ ನಾಗಮಂಗಲ ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟು, ಪರಿಶೀಲನೆ ನಡೆಸಿದ್ದಾರೆ. ಮೃತ ಚಿರತೆ ಬಳಿ ಜಮಾಯಿಸಿದ್ದ ಜನರು ಮೃತ ಚಿರತೆ ಪೋಟೋ ತೆಗೆಯಲು ಪೈಪೋಟಿ ನಡೆಸಿದ್ದಾರೆ, ಜೊತೆಗೆ ಅದರ ಉಗುರು ತೆಗೆದುಕೊಳ್ಳಲು ಮುಂದಾಗಿದ್ದಾರೆ.

500 ಚೀಲ ಸಿಮೆಂಟ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿ: ತುಮಕೂರು: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಕಳ್ಳಿಪಾಳ್ಯ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ತೊಂಡೆಬಾವಿಯಿಂದ ಹಾಸನಕ್ಕೆ 500 ಚೀಲ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಇದಾಗಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಗೊರವನಹಳ್ಳಿ ಬಳಿ ಮದ್ಯದಂಗಡಿಯಲ್ಲಿ ಹಣ, ಮದ್ಯ ಕಳವು: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಬಳಿ ಎಮ್ ಎಸ್ ಐಎಲ್ ಮದ್ಯದಂಗಡಿಯಲ್ಲಿ ಹಣ, ಮದ್ಯ ಕಳವಾಗಿದೆ. ಅಂಗಡಿ ಬಾಗಿಲು ಮುರಿದು 71 ಸಾವಿರ ರೂ., ಮದ್ಯದ ಬಾಟಲ್‌ಗಳನ್ನು ಕದಿಯಲಾಗಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಗ್ರಾಮದಲ್ಲಿ 2 ಹಸು, ಬಸ್‌ನ ಡೀಸೆಲ್ ಕಳವು ಮಾಡಲಾಗಿದೆ. ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗ್ರಾಮದ ಅರಸಪ್ಪ ಎಂಬುವರಿಗೆ ಸೇರಿದ ಹಸುಗಳು ಇವಾಗಿವೆ. ಗ್ರಾಮದಲ್ಲಿ ನಿಂತಿದ್ದ ಬಸ್ ನಲ್ಲಿ 60 ಲೀಟರ್ ಡಿಸೇಲ್ ಕದ್ದಿದ್ದಾರೆ.

Published On - 7:16 am, Sat, 22 January 22

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಬಿರುಗಾಳಿ: ಯತ್ನಾಳ್ ಸ್ಫೋಟಕ ಹೇಳಿಕೆ
ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಬಿರುಗಾಳಿ: ಯತ್ನಾಳ್ ಸ್ಫೋಟಕ ಹೇಳಿಕೆ