ಹಸು, ಕರುವಿನ ಮೇಲೆ ಹುಲಿ ದಾಳಿ; ಬಿಡಿಸಲು ಹೋದ ವ್ಯಕ್ತಿ ಮೇಲೂ ಎರಗಿದ ವ್ಯಾಘ್ರ
ವೀರಭದ್ರ ಅವರು ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಸಮೀಪದ ಮಹದೇವ ನಗರ ಗ್ರಾಮದ ಮತ್ತಿ ಮರದ ಜೇನುಕಟ್ಟೆಯ ಬಳಿ ದನ ಮೇಯಿಸುತ್ತಿದ್ದಾಗ ಹಸು ಹಾಗೂ ಕರುವಿನ ಮೇಲೆ ಹುಲಿ ದಾಳಿ ನಡೆಸಿತ್ತು. ಈ ವೇಳೆ ಹಸುವನ್ನು ರಕ್ಷಿಸಲು ಹೋಗಿದ್ದ ವೀರಭದ್ರ ಮೇಲೂ ಹುಲಿ ದಾಳಿ ಮಾಡಿದೆ. ಗಾಯಾಳು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಮೈಸೂರು, ನ.01: ಜಿಲ್ಲೆಯಲ್ಲಿ ಕಾಡು ಪ್ರಾಣಿ ಮಾನವ ಸಂಘರ್ಷ ಮುಂದುವರಿದಿದೆ. ನಂಜನಗೂಡು ತಾಲೂಕಿನ ಮಹದೇವ ನಗರದ ಹೊರವಲಯದಲ್ಲಿ ರೈತನ ಮೇಲೆ ಹುಲಿ ದಾಳಿ (Tiger Attack) ನಡೆಸಿದೆ. ದನ ಮೇಯಿಸುತ್ತಿದ್ದ ರೈತ ವೀರಭದ್ರ ಭೋವಿ (70) ಎಂಬುವವರ ಮೇಲೆ ಹುಲಿ ದಾಳಿ ಮಾಡಿದ್ದು ಗಾಯಾಳು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಗ್ರಾಮದ ಮತ್ತಿಮರದ ಜೇನುಕಟ್ಟೆಯ ಬಳಿ ವೀರಭದ್ರ ಅವರು ದನ ಮೇಯಿಸುತ್ತಿದ್ದಾಗ ಘಟನೆ ನಡೆದಿದೆ.
ವೀರಭದ್ರ ಅವರು ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಸಮೀಪದ ಮಹದೇವ ನಗರ ಗ್ರಾಮದ ಮತ್ತಿ ಮರದ ಜೇನುಕಟ್ಟೆಯ ಬಳಿ ದನ ಮೇಯಿಸುತ್ತಿದ್ದಾಗ ಹಸು ಹಾಗೂ ಕರುವಿನ ಮೇಲೆ ಹುಲಿ ದಾಳಿ ನಡೆಸಿತ್ತು. ಈ ವೇಳೆ ಹಸುವನ್ನು ರಕ್ಷಿಸಲು ಹೋಗಿದ್ದ ವೀರಭದ್ರ ಮೇಲೂ ಹುಲಿ ದಾಳಿ ಮಾಡಿದೆ. ಸದ್ಯ ರೈತನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಹಡಿಯಾಲ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಮಹಾದೇವನಗರ ರೈತರು ಆಕ್ರೋಶ ಹೊರಹಾಕಿದ್ದಾರೆ. ಶಾಶ್ವತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ‘ದರ್ಶನ್ ಸಾಕು ನಾಯಿ ಕಚ್ಚಿದರೂ ಅವರ ಮನೆಯವರು ಯಾರೂ ಸಹಾಯಕ್ಕೆ ಬಂದಿಲ್ಲ’; ಮಹಿಳೆಯ ಅಸಮಾಧಾನ
ನಾಯಿ ವಿಚಾರಕ್ಕೆ ಬಡಿದಾಟ
ನೊಯ್ಡಾದಲ್ಲಿ ಸಾಕು ನಾಯಿ ವಿಚಾರಕ್ಕೆ ಗಲಾಟೆ ನಡೆದಿದೆ. ನಿವೃತ್ತ ಐಎಎಸ್ ಅಧಿಕಾರಿ ಮತ್ತು ಇತರೆ ಮೂವರ ನಡುವೆ ಜಗಳ ನಡೆದಿದೆ. ಅಂದಹಾಗೆ ಲಿಫ್ಟ್‌ನಲ್ಲಿ ಇಬ್ಬರು ಮಹಿಳೆಯರು ಸಾಕು ನಾಯಿ ಜೊತೆ ನಿಂತಿದ್ದರು. ಆ ಸಂದರ್ಭದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಕೂಡ ಬಂದಿದ್ದಾರೆ. ಈ ವೇಳೆ ನಾಯಿಯನ್ನು ಲಿಫ್ಟ್‌ಗೆ ಕರೆತಂದಿದ್ದಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆ ಮಹಿಳೆಯರು ಮತ್ತು ಐಎಎಸ್ ಅಧಿಕಾರಿ ನಡುವಿನ ಮಾತಿನ ಚಕಮಕಿ ನಡೆದಿದೆ. ರೊಚ್ಚಿಗೆದ್ದ ಮಹಿಳೆಯೊಬ್ಬರು ತಮ್ಮ ಮೊಬೈಲ್‌ನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯನ್ನು ಸೆರೆ ಹಿಡಿಯುತ್ತಿದ್ದರು. ಇದಕ್ಕೆ ಪ್ರತಿಯಾಗಿ ನಿವೃತ್ತ ಐಎಎಸ್ ಅಧಿಕಾರಿಯೂ ಕೂಡ ಮೊಬೈಲ್‌ನಲ್ಲಿ ದೃಶ್ಯ ಸೆರೆ ಹಿಡಿಯಲು ಮುಂದಾದರು. ಈಗ ಮಹಿಳೆಯೊಬ್ಬರು ನಿವೃತ್ತ ಐಎಎಸ್ ಅಧಿಕಾರಿಯ ಮೊಬೈಲ್ ಕಸಿದುಕೊಳ್ಳಲು ಮುಂದಾದರು. ಆಗ ಈಗ ಇಬ್ಬರ ನಡುವೆ ತಳ್ಳಾಟ, ನೂಕಾಟ ಶುರುವಾಗಿದೆ. ಇಬ್ಬರು ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಎಂಟ್ರಿ ಕೊಟ್ಟ ಮಹಿಳೆಯೊಬ್ಬರ ಪತಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ. ವಿಷಯ ತಿಳಿದ ಅಪಾರ್ಟ್‌ಮೆಂಟ್‌ನ ಸಿಬ್ಬಂದಿ ಸ್ಥಳಕ್ಕಾಗಮಿಸಿ ಜಗಳ ಬಿಡಿಸಿ ಎಲ್ಲರನ್ನು ಲಿಫ್ಟ್ ನಿಂದ ಹೊರ ಕಳುಹಿಸಿದ್ದಾರೆ. ಕೊನೆಗೆ ಮಾತುಕತೆ ಮೂಲಕ ಗಲಾಟೆ ವಿಚಾರ ಬಗೆಹರಿಸಿಕೊಂಡಿದ್ದಾರೆ. ಪೊಲೀಸರಿಗೆ ಯಾವುದೇ ಅಧಿಕೃತ ದೂರು ಬಂದಿಲ್ಲ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ