Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ತಾಲೂಕಿನ ಬ್ಯಾತಳ್ಳಿ, ಕಡಕೊಳ ಸುತ್ತಮುತ್ತ ಹುಲಿಗಳು ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ

ಮೈಸೂರು ಜಿಲ್ಲೆಯಲ್ಲಿ ಆಗ ಆಗ ಹುಲಿಗಳು ಪ್ರತ್ಯಕ್ಷವಾಗುತ್ತಿರುತ್ತವೆ. ಇದರಿಂದ ಜನರು ಭಯದಿಂದ ಜೀವನ ನಡೆಸುವಂತಾಗಿದೆ. ಇದೀಗ ಮತ್ತೆ ಮೈಸೂರು ತಾಲೂಕಿನ ಬ್ಯಾತಳ್ಳಿ, ಕಡಕೊಳ ಸುತ್ತಮುತ್ತಲಿನ ರೈತರ ಹೊಲದಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿವೆ.

ಮೈಸೂರಿನ ತಾಲೂಕಿನ ಬ್ಯಾತಳ್ಳಿ, ಕಡಕೊಳ ಸುತ್ತಮುತ್ತ ಹುಲಿಗಳು ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ
ಬ್ಯಾತಳ್ಳಿ, ಕಡಕೊಳ ಗ್ರಾಮಗಳಲ್ಲಿ ಕಾಣಿಸಿಕೊಂಡ ಹುಲಿ
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Nov 26, 2023 | 8:44 AM

ಮೈಸೂರು ನ.26: ಮೈಸೂರು (Mysore) ತಾಲೂಕಿನ ಬ್ಯಾತಳ್ಳಿ, ಕಡಕೊಳ ಸುತ್ತಮುತ್ತಲಿನ ರೈತರ ಹೊಲದಲ್ಲಿ ಎರಡು ಹುಲಿಗಳು (Tigers) ಕಾಣಿಸಿಕೊಂಡಿದ್ದು ಮೊಬೈಲ್​ ಕ್ಯಾಮೆರಾದಲ್ಲಿ ಚಿತ್ರ ಸೆರೆಯಾಗಿದೆ. ಎರಡು ಹುಲಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ಸ್ಥಳೀಯರು ಎಚ್ಚರಿಕೆಯಿಂದ ಇರುವಂತೆ ಸಂದೇಶ ರವಾನಿಸಲಾಗುತ್ತಿದೆ. ​

ಹುಲಿ ದಾಳಿಗೆ ಮಹಿಳೆ ಮೃತ: ಅಧಿಕಾರಿಗಳಿಗೆ ಶಾಸಕ ದರ್ಶನ್​​ ಕ್ಲಾಸ್​

ನಂಜನಗೂಡು ತಾಲೂಕಿನ ಬಳ್ಳೂರ್ ಹುಂಡಿಯಲ್ಲಿ ಹುಲಿ ದಾಳಿಗೆ ಮಹಿಳೆ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡು ತಾಲೂಕಿನ ಬಳ್ಳೂರ್ ಹುಂಡಿ, ಮಹಾದೇವನಗರ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಧಿಕಾರಿ ಕುಮಾರ್ ಪುಷ್ಕರ್ ಜೊತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಭೆ ನಡೆಸಿದರು.

ಹಲವು ದಿನಗಳಿಂದ ನಿರಂತರವಾಗಿ ಹುಲಿ ದಾಳಿಯಾಗಿದೆ. ಅದೇ ಸ್ಥಳದಲ್ಲಿ ಮತ್ತೆ ಮತ್ತೆ ದಾಳಿಯಾಗುತ್ತಿದೆ. ಇಲಾಖೆಯ ಸಿಬ್ಬಂದಿಗಳು ನಿರ್ಲಕ್ಷ ವಹಿಸಿದ್ದೀರಿ ಎಂದು ಗ್ರಾಮಸ್ಥರ ಮುಂದೆ ಶಾಸಕ ದರ್ಶನ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಶಾಸಕರು ಬಿಸಿ ಮುಟ್ಟಿಸಿದ ಬಳಿಕ ಕಾರ್ಯಚರಣೆ ಚುರುಕುಗೊಂಡಿದೆ. ಹುಲಿ ಸೆರೆಗೆ ಇಲಾಖೆ ಈಗಾಗಲೇ 200 ಸಿಬ್ಬಂದಿಗಳು, 3 ಆನೆ ಬಳಸಿ ಬಂಡೀಪುರ ಅರಣ್ಯದ ಹೆಡಿಯಾಲ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಸುತ್ತಿದೆ.

ಇದನ್ನೂ ಓದಿ: ಮೈಸೂರು: ನಂಜನಗೂಡಿನ ಬಳ್ಳೂರ್ ಹುಂಡಿಯಲ್ಲಿ ಹುಲಿ ದಾಳಿಗೆ ಮಹಿಳೆ ಬಲಿ

ಮನೆಯೊಂದರಲ್ಲಿ ಕಾಣಿಸಿಕೊಂಡ ಅಪರೂಪದ ಹಾವು

ನಗರದ ವಿಜಯನಗರ ಬಡಾವಣೆಯ ಮನೆಯೊಂದರಲ್ಲಿ ಕಾಣಿಸಿಕೊಂಡ ಅಪರೂಪದ ಬೆಂಗಾಲ್​​ ಕ್ರೈಟ್​​ ಹಾವು ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ಕೂಡಲೇ ಉರಗ ತಜ್ಞ ಅರವಿಂದ್ ಸ್ಥಳಕ್ಕೆ ಆಗಮಿಸಿ ಹಾವು ರಕ್ಷಣೆ ಮಾಡಿ, ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಈ ಹಾವು ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:07 am, Sun, 26 November 23

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ