ಟಿಪ್ಪು ಎಕ್ಸ್‌ಪ್ರೆಸ್‌ ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ನಾಮಕರಣ: ಶುಕ್ರವಾರದ ಶುಭ ಸುದ್ದಿ ಎಂದ ಪ್ರತಾಪ್ ಸಿಂಹ

| Updated By: ವಿವೇಕ ಬಿರಾದಾರ

Updated on: Oct 07, 2022 | 9:07 PM

ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್​ಪ್ರೆಸ್​​​ ರೈಲಿನ ಹೆಸರನ್ನು ಬದಲಾಯಿಸಿ ಒಡೆಯರ್​ ಎಕ್ಸ್​ಪ್ರೆಸ್​ ಎಂದು ರೈಲ್ವೆ ಇಲಾಖೆ ಮರುನಾಮಕರಣ ಮಾಡಿದೆ.

ಟಿಪ್ಪು ಎಕ್ಸ್‌ಪ್ರೆಸ್‌ ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ನಾಮಕರಣ:  ಶುಕ್ರವಾರದ ಶುಭ ಸುದ್ದಿ ಎಂದ ಪ್ರತಾಪ್ ಸಿಂಹ
ಟಿಪ್ಪು ಎಕ್ಸ್‌ಪ್ರೆಸ್‌
Follow us on

ಮೈಸೂರು: ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್​ಪ್ರೆಸ್​​​ (Tippu Express) ರೈಲಿನ ಹೆಸರನ್ನು ಬದಲಾಯಿಸಿ ಒಡೆಯರ್​ ಎಕ್ಸ್​ಪ್ರೆಸ್ (Wodeyar Express)​ ಎಂದು ರೈಲ್ವೆ ಇಲಾಖೆ ಮರುನಾಮಕರಣ ಮಾಡಿದೆ. ತಾಳಗುಪ್ಪ-ಮೈಸೂರು ನಡುವೆ ಸಂಚರಿಸುವ ತಾಳಗುಪ್ಪ ಎಕ್ಸ್​ಪ್ರೆಸ್ ರೈಲಿನ ಹೆಸರನ್ನು ಬದಲಾಯಿಸಿ ಕುವೆಂಪು ಎಕ್ಸ್​ಪ್ರೆಸ್​ ಎಂದು ಮರುನಾಮಕರಣ ಮಾಡಲಾಗಿದೆ.

ಹಿನ್ನೆಲೆ

ಟಿಪ್ಪು ಎಕ್ಸ್​ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ಎಂದು ಹೆಸರಿಡುವಂತೆ ರೈಲ್ವೆ ಸಚಿವ ಅಶ್ವಿನಿ‌ ವೈಷ್ಣವ್‌ಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿ ಮನವಿ ಮಾಡಿದ್ದರು. ಈ ಸಂಬಂಧ ಫೆಬ್ರವರಿ ತಿಂಗಳಲ್ಲಿ ದೆಹಲಿಯಲ್ಲಿ ಸಚಿವ ಅಶ್ವಿನಿ‌ ವೈಷ್ಣವ್‌ಗೆ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿ ಲಿಖಿತ ಮನವಿ ಸಲ್ಲಿಸಿದ್ದರು. ಮೈಸೂರಿಗೆ ರೈಲು ಸೇವೆ ಕಲ್ಪಿಸುವಲ್ಲಿ ಮಹಾರಾಜರ ಕೊಡುಗೆ ಬಹಳಷ್ಟು ಇದೆ. ಹೀಗಾಗಿ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ಹೆಸರಿಡಲು ಒತ್ತಾಯ ಮಾಡಿದ್ದಾರೆ. ಸಂಸದರ ಮನವಿ ಮೇರೆ ಹೆಸರು ಬದಲಾಯಿಸಲಾಗಿದೆ.

ಟಿಪ್ಪು ಜಯಂತಿಗೆ ತಿಲಾಂಜಲಿ ಹಾಡಿದ ಬಿಜೆಪಿ ಸರ್ಕಾರ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2016 ರ ನವೆಂಬರ್ 10 ರಂದು ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಆರಂಭಿಸಿತ್ತು. ಬಳಿಕ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಮೈತ್ರಿ ಸರ್ಕಾರವೂ ಕೂಡ ಇದನ್ನು ಮುಂದುವರಿಸಿತ್ತು. ಆದರೆ ದೋಸ್ತಿ ಸರ್ಕಾರ 14 ತಿಂಗಳ ಆಡಳಿತ ಬಳಿಕ ಪತನವಾಗಿಯ್ತು.

ಬಳಿಕ 2019ರಲ್ಲಿ ಅಧಿಕಾರಕ್ಕೆ ಬಂದ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಟಿಪ್ಪು ಜಯಂತಿಗೆ ತಿಲಾಂಜಲಿ ಹಾಡಿತು. ಅಂದಿನ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ 2ನೇ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿತ್ತು.

ಪಠ್ಯಪುಸ್ತಕದಿಂದ ಟಿಪ್ಪು ಇತಿಹಾಸಕ್ಕೆ ಪುಲ್​ಸ್ಟಾಪ್​

7 ನೇ ತರಗತಿ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಪಠ್ಯವನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ 6 ಹಾಗೂ 10 ನೇ ತರಗತಿಯಲ್ಲಿ ಟಿಪ್ಪು ಪಠ್ಯವನ್ನ ಮುಂದುವರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕಲ್ಲಿಕ್ ಮಾಡಿ

Published On - 7:43 pm, Fri, 7 October 22