ಟಿಪ್ಪು ನಮ್ಮ ಊರಿನವರೇ ಅಲ್ವಾ, ಅವರೇನು ಹೊರ ದೇಶದವರಾ: ಸಚಿವ ಹೆಚ್​ಸಿ ಮಹದೇವಪ್ಪ ಪ್ರಶ್ನೆ

ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಬೇಕು ಎಂಬ ವಿಚಾರ ರಾಜಕೀಯ ಕೆಸರೆರಚಾಟಕ್ಕೆ‌ ಕಾರಣವಾಗಿದೆ. ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ಜಟಾಪಟಿ ನಡೆಯುತ್ತಿದೆ. ಸದ್ಯ ಈ ವಿಚಾರವಾಗಿ ಮೈಸೂರಲ್ಲಿ ಮಾತನಾಡಿದ ಸಚಿವ ಹೆಚ್​.ಸಿ.ಮಹದೇವಪ್ಪ, ಟಿಪ್ಪು ಸುಲ್ತಾನ್ ನಮ್ಮ ಊರಿನವರೇ ಅಲ್ವಾ, ಅವರೇನು ಹೊರ ದೇಶದವರಾ ಎಂದು ಪ್ರಶ್ನಿಸಿದ್ದಾರೆ.

ಟಿಪ್ಪು ನಮ್ಮ ಊರಿನವರೇ ಅಲ್ವಾ, ಅವರೇನು ಹೊರ ದೇಶದವರಾ: ಸಚಿವ ಹೆಚ್​ಸಿ ಮಹದೇವಪ್ಪ ಪ್ರಶ್ನೆ
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​.ಸಿ.ಮಹದೇವಪ್ಪ
Updated By: ಗಂಗಾಧರ​ ಬ. ಸಾಬೋಜಿ

Updated on: Dec 18, 2023 | 3:03 PM

ಮೈಸೂರು, ಡಿಸೆಂಬರ್​​ 18: ಮೈಸೂರು ವಿಮಾನ ನಿಲ್ದಾಣಕ್ಕೆ ಹೆಸರು ಇಡುವುದು ಬಿಡುವುದು ಬೇರೆ ವಿಚಾರ. ಆದರೆ ಟಿಪ್ಪುನನ್ನು ದೇಶ ದ್ರೋಹಿ ಅಂತಾ ಬಿಂಬಿಸೋದು ಸರಿಯಲ್ಲ. ಟಿಪ್ಪು ಸುಲ್ತಾನ್ ನಮ್ಮ ಊರಿನವರೇ ಅಲ್ವಾ, ಅವರೇನು ಹೊರ ದೇಶದವರಾ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​.ಸಿ.ಮಹದೇವಪ್ಪ (HC Mahadevappa) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಗೂ ನಮ್ಮ ತಕರಾರು ಇಲ್ಲ. ಟಿಪ್ಪು ವಿಚಾರದಲ್ಲಿ ಕೆಲವರು ಅಭಿಪ್ರಾಯ ಹೇಳೋದು ಅಪರಾಧವಾ ಎಂದು ಪ್ರಶ್ನಿಸಿದ್ದಾರೆ.

ವಿಮಾನ ನಿಲ್ದಾಣ ವಿಚಾರದಲ್ಲಿ ಕ್ಯಾಬಿನೆಟ್ ತೀರ್ಮಾನವಾಗಿದೆ. ಅದನ್ನು ತಿರಸ್ಕರಿಸಲು ಸಾಧ್ಯವಾ ಎಂದಿದ್ದಾರೆ. ರಾಜ್ಯದಲ್ಲಿ ಕೋವಿಡ್ ವಿಚಾರವಾಗಿ ಮಾತನಾಡಿದ ಅವರು, ಮೈಸೂರು ಜಿಲ್ಲಾಡಳಿತದ ಜೊತೆಗೆ ಸಭೆ ಮಾಡುತ್ತೇನೆ. ಗಡಿ ಜಿಲ್ಲೆಯಾದ ಕಾರಣ ಇವತ್ತೆ ಸಭೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಬೇರೆ ಧರ್ಮದವರು ಲೇಟರ್ ಕೊಟ್ಟಿದ್ದರೆ ಗತಿ ಏನಾಗುತ್ತಿತ್ತು?

ಸಂಸತ್​ನಲ್ಲಿ ಸ್ಮೋಕ್ ಬಾಂಬ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಇದು ಗಂಭೀರವಾದ ರಾಷ್ಟ್ರೀಯ ಭದ್ರತಾ ವಿಚಾರ. ಆರೋಪಿಗಳಿಗೆ ಬೇರೆಯವರು ಲೆಟರ್ ಕೊಟ್ಟಿದ್ದರೆ ಮೈಸೂರು ಗತಿ ಏನಾಗುತ್ತಿತ್ತು? ಬೇರೆ ಧರ್ಮದವರು ಲೇಟರ್ ಕೊಟ್ಟಿದ್ದರೆ ಗತಿ ಏನಾಗುತ್ತಿತ್ತು? ಲೆಟರ್ ಕೊಟ್ಟಿದ್ದ ಕಾರಣ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಒಂದೊಂದು ಬಾರಿ ಗಡಿಪಾರು ಆದವರು, ಕೊಲೆ ಆರೋಪಿಗಳು ನಮ್ಮ ಜೊತೆಯೆ ಫೋಟೋ ತೆಗೆಸಿ ಕೊಂಡಿರುತ್ತಾರೆ, ಅದನ್ನು ನಾವು ಗಮನಿಸುವುದಕ್ಕೆ ಆಗುತ್ತಾ ಎಂದಿದ್ದಾರೆ.

ಇದನ್ನೂ ಓದಿ: ಮೈಸೂರು ವಿಮಾನ ನಿಲ್ದಾಣ ನಾಮಕರಣ ವಿಚಾರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಟಾಪಟಿ, ಕ್ರೆಡಿಟ್ ವಾರ್ ಆರಂಭ

ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಬೇಕು ಎಂಬ ವಿಚಾರ ರಾಜಕೀಯ ಕೆಸರೆರಚಾಟಕ್ಕೆ‌ ಕಾರಣವಾಗಿದೆ. ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ಜಟಾಪಟಿ ನಡೆಯುತ್ತಿದೆ. ಮಹಾರಾಜರ ಹೆಸರಿಡಲು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ಸೂಚಿಸಿತ್ತು. ಹೀಗಾಗಿ ಮಹಾರಾಜರ ಹೆಸರನ್ನೇ ಇಡಬೇಕು ಅಂತಾ ಬಿಜೆಪಿ ಆಗ್ರಹಿಸಿತ್ತು.

ಇದನ್ನೂ ಓದಿ: ಪ್ರಸಾದ್ ಅಬ್ಬಯ್ಯ ಮನೆಗೆ ಟಿಪ್ಪು ಹೆಸರು ಇಟ್ಟುಕೊಳ್ಳಲಿ, ಮೈಸೂರು ವಿಮಾನ ನಿಲ್ದಾಣಕ್ಕೆ ಬೇಡ: ಸಿ.ಟಿ ರವಿ

ಆದರೆ 2015ರಲ್ಲೇ ನಾಲ್ವಡಿ ಹೆಸರಿಡಲು ಕಾಂಗ್ರೆಸ್ ಸರ್ಕಾರ ಒಪ್ಪಿಗೆ ಸೂಚಿಸಿತ್ತು. ಸಚಿವ ಸಂಪುಟದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣಕ್ಕೆ ಸಮ್ಮತಿ ನೀಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆದರೆ ಕೇಂದ್ರ ಸರ್ಕಾರ 8 ವರ್ಷದಿಂದ ಏನು ಮಾಡಿಲ್ಲ ಅಂತ ಲಕ್ಷ್ಮಣ ಆರೋಪಿಸಿದ್ದರು. ಇನ್ನೂ ಟಿಪ್ಪು ಹೆಸರಿಟ್ಟರೆ ತಪ್ಪೇನಿದೆ ನಾಯಕರು ಸಮರ್ಥಿಸಿಕೊಳ್ಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:02 pm, Mon, 18 December 23