Crime News: ಬೆನ್ನು ನೋವಿನಿಂದ ಬೇಸತ್ತು ಎಎಸ್​ಐ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಕುಖ್ಯಾತ ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೈಯದ್ ನದೀಂ ಹಾಗೂ ಅಜಂ ಖಾನ್ ಬಂಧಿತ ಆರೋಪಿಗಳು.

Crime News: ಬೆನ್ನು ನೋವಿನಿಂದ ಬೇಸತ್ತು ಎಎಸ್​ಐ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 04, 2022 | 3:03 PM

ಮೈಸೂರು: ಬೆನ್ನು ನೋವಿನಿಂದ ಬೇಸತ್ತು ಎಎಸ್​ಐ ಪತ್ನಿ ನೇಣಿಗೆ (hang) ಶರಣಾಗಿರುವಂತಹ ಘಟನೆ ನಜರ್​ಬಾದ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಎಸ್​ಐ ಮಂಜೇಗೌಡ ಪತ್ನಿ ಜ್ಯೋತಿ(40) ಮೃತ ಮಹಿಳೆ. ಕೆಎಸ್​ಆರ್​ಪಿಯಲ್ಲಿ ಎಎಸ್​ಐ ಆಗಿರುವ ಮಂಜೇಗೌಡ, ದೇಹದ ತೂಕ ಹೆಚ್ಚಾದ ಕಾರಣ ತೀವ್ರ ಬೆನ್ನು ನೋವು ಉಂಟಾಗಿದ್ದು, ಚಿಕಿತ್ಸೆ ಪಡೆದಿದ್ದರೂ ಕಡಿಮೆಯಾಗಿರಲಿಲ್ಲ. ಹೀಗಾಗಿ ಬೇಸತ್ತು ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಜರ್​ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಪ್ರಯಾಣಿಕರ ಸೋಗಿನಲ್ಲಿ ಚಿನ್ನ ಸಾಗಟ ಮಾಡುತ್ತಿದ್ದ ಸ್ಮಗ್ಲರ್ಸ್ ಅರೆಸ್ಟ್​; 69.74 ಲಕ್ಷ ಮೌಲ್ಯದ ಚಿನ್ನ ಜಪ್ತಿ

ಕುಖ್ಯಾತ ಮನೆಗಳ್ಳರು ಅರೆಸ್ಟ್

ಬೆಂಗಳೂರು: ಕುಖ್ಯಾತ ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೈಯದ್ ನದೀಂ ಹಾಗೂ ಅಜಂ ಖಾನ್ ಬಂಧಿತ ಆರೋಪಿಗಳು. ರಾತ್ರಿ ವೇಳೆ ಮನೆಗೆ ಹಾಕಿದ್ದ ಲಾಕ್ ಮುರಿದು ಆರೋಪಿಗಳು ಕಳವು ಮಾಡುತ್ತಿದ್ದರು. ಬಂಧಿತ ಆರೋಪಿಗಳು ಈ ಹಿಂದೆಯೂ ಕೃತ್ಯವೆಸಗಿ ಜೈಲಿಗೆ ಹೋಗಿದ್ದರು. ಕೆಜಿ ಹಳ್ಳಿ, ಆರ್​.ಟಿ ನಗರ, ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ಕೈ ಚಳಕ ತೋರಿಸಿ ಅಂದರ್ ಆಗಿದ್ದರು. ಜೈಲಿಗೆ ಹೋಗಿ ಬಂದರು ಬುದ್ದಿ ಕಲಿಯದೆ ಮತ್ತೆ ಅದೇ ಕಾಯಕವನ್ನು ಮಾಡುತ್ತಿದ್ದರು. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯವೆಸಗಿ ಮತ್ತೆ ಲಾಕ್​ ಆಗಿದ್ದು, ಬಂಧಿತರಿಂದ 4 ಲಕ್ಷ ಬೆಲೆಬಾಳುವ 92 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನು ಓದಿ: Crime News: ಬಾರ್​​ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗಲಾಟೆ; ಓರ್ವನ ಕೊಲೆ

ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದ ಗುಂಡಿಗೆ ಬಿದ್ದ ಸಾರಿಗೆ ಬಸ್​​

ಚಿಕ್ಕೋಡಿ: ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದ ಗುಂಡಿಗೆ ಸಾರಿಗೆ ಬಸ್ ಬಿದ್ದಿರುವಂತಹ ಘಟನೆ ನಡೆದಿದ್ದು, ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಘಟನೆ ನಡೆದಿದೆ. ಅಥಣಿ ಘಟಕಕ್ಕೆ ಸೇರಿದ ಸಾರಿಗೆ ಬಸ್ ಇದಾಗಿದ್ದು, ಅಥಣಿಯಿಂದ ಸಾವಳಗಿ ಗ್ರಾಮಕ್ಕೆ ಹೋಗುತ್ತಿತ್ತು. 35ಕ್ಕೂ ಹೆಚ್ಚು ಜನ ಬಸ್​ನಲ್ಲಿ ಪ್ರಯಾಣಿಸುತ್ತಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಐಗಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್