ಮೈಸೂರು: ಬೆನ್ನು ನೋವಿನಿಂದ ಬೇಸತ್ತು ಎಎಸ್ಐ ಪತ್ನಿ ನೇಣಿಗೆ (hang) ಶರಣಾಗಿರುವಂತಹ ಘಟನೆ ನಜರ್ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಎಸ್ಐ ಮಂಜೇಗೌಡ ಪತ್ನಿ ಜ್ಯೋತಿ(40) ಮೃತ ಮಹಿಳೆ. ಕೆಎಸ್ಆರ್ಪಿಯಲ್ಲಿ ಎಎಸ್ಐ ಆಗಿರುವ ಮಂಜೇಗೌಡ, ದೇಹದ ತೂಕ ಹೆಚ್ಚಾದ ಕಾರಣ ತೀವ್ರ ಬೆನ್ನು ನೋವು ಉಂಟಾಗಿದ್ದು, ಚಿಕಿತ್ಸೆ ಪಡೆದಿದ್ದರೂ ಕಡಿಮೆಯಾಗಿರಲಿಲ್ಲ. ಹೀಗಾಗಿ ಬೇಸತ್ತು ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಪ್ರಯಾಣಿಕರ ಸೋಗಿನಲ್ಲಿ ಚಿನ್ನ ಸಾಗಟ ಮಾಡುತ್ತಿದ್ದ ಸ್ಮಗ್ಲರ್ಸ್ ಅರೆಸ್ಟ್; 69.74 ಲಕ್ಷ ಮೌಲ್ಯದ ಚಿನ್ನ ಜಪ್ತಿ
ಕುಖ್ಯಾತ ಮನೆಗಳ್ಳರು ಅರೆಸ್ಟ್
ಬೆಂಗಳೂರು: ಕುಖ್ಯಾತ ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೈಯದ್ ನದೀಂ ಹಾಗೂ ಅಜಂ ಖಾನ್ ಬಂಧಿತ ಆರೋಪಿಗಳು. ರಾತ್ರಿ ವೇಳೆ ಮನೆಗೆ ಹಾಕಿದ್ದ ಲಾಕ್ ಮುರಿದು ಆರೋಪಿಗಳು ಕಳವು ಮಾಡುತ್ತಿದ್ದರು. ಬಂಧಿತ ಆರೋಪಿಗಳು ಈ ಹಿಂದೆಯೂ ಕೃತ್ಯವೆಸಗಿ ಜೈಲಿಗೆ ಹೋಗಿದ್ದರು. ಕೆಜಿ ಹಳ್ಳಿ, ಆರ್.ಟಿ ನಗರ, ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ಕೈ ಚಳಕ ತೋರಿಸಿ ಅಂದರ್ ಆಗಿದ್ದರು. ಜೈಲಿಗೆ ಹೋಗಿ ಬಂದರು ಬುದ್ದಿ ಕಲಿಯದೆ ಮತ್ತೆ ಅದೇ ಕಾಯಕವನ್ನು ಮಾಡುತ್ತಿದ್ದರು. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯವೆಸಗಿ ಮತ್ತೆ ಲಾಕ್ ಆಗಿದ್ದು, ಬಂಧಿತರಿಂದ 4 ಲಕ್ಷ ಬೆಲೆಬಾಳುವ 92 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನು ಓದಿ: Crime News: ಬಾರ್ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗಲಾಟೆ; ಓರ್ವನ ಕೊಲೆ
ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದ ಗುಂಡಿಗೆ ಬಿದ್ದ ಸಾರಿಗೆ ಬಸ್
ಚಿಕ್ಕೋಡಿ: ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದ ಗುಂಡಿಗೆ ಸಾರಿಗೆ ಬಸ್ ಬಿದ್ದಿರುವಂತಹ ಘಟನೆ ನಡೆದಿದ್ದು, ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಘಟನೆ ನಡೆದಿದೆ. ಅಥಣಿ ಘಟಕಕ್ಕೆ ಸೇರಿದ ಸಾರಿಗೆ ಬಸ್ ಇದಾಗಿದ್ದು, ಅಥಣಿಯಿಂದ ಸಾವಳಗಿ ಗ್ರಾಮಕ್ಕೆ ಹೋಗುತ್ತಿತ್ತು. 35ಕ್ಕೂ ಹೆಚ್ಚು ಜನ ಬಸ್ನಲ್ಲಿ ಪ್ರಯಾಣಿಸುತ್ತಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಐಗಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.