ಕೊನೆಗೂ ದಸರಾ ಗೋಲ್ಡ್​ ಕಾರ್ಡ್​ ಬಿಡುಗಡೆಗೆ ಮುಹೂರ್ತ ಫಿಕ್ಸ್​; ಒಂದರ ಬೆಲೆ ಎಷ್ಟು ಗೊತ್ತಾ?

ನಾಳೆ ಬೆಳಗ್ಗೆ 10 ಗಂಟೆಗೆ ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಲು ನಿರ್ಧರಿಸಲಾಗಿದ್ದು, ಆನ್ ಲೈನ್ ಮುಖಾಂತರ ಖರೀದಿ ಮಾಡಲು ಅವಕಾಶ ನೀಡಲಾಗಿದೆ. ಲಭ್ಯತೆಗೆ ಅನುಗುಣವಾಗಿ ಆನ್‌ಲೈನ್ ಮೂಲಕ ವೆಬ್ ಸೈಟ್​ನಲ್ಲಿ ಖರೀದಿಸಲು ಮಾತ್ರ ಅವಕಾಶ ಕೊಡಲಾಗಿದೆ. ಒಂದು ಬಾರಿಗೆ ಗರಿಷ್ಠ ಎರಡು ಗೋಲ್ಡ್ ಕಾರ್ಡ್​ ಖರೀದಿಸಬಹುದಾಗಿದೆ.

ಕೊನೆಗೂ ದಸರಾ ಗೋಲ್ಡ್​ ಕಾರ್ಡ್​ ಬಿಡುಗಡೆಗೆ ಮುಹೂರ್ತ ಫಿಕ್ಸ್​; ಒಂದರ ಬೆಲೆ ಎಷ್ಟು ಗೊತ್ತಾ?
ಮೈಸೂರು ದಸರಾ
Follow us
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 17, 2023 | 7:50 PM

ಮೈಸೂರು, ಅ.17: ಮೈಸೂರು ದಸರಾಗೆ ಈಗಾಗಲೇ ಚಾಲನೆ ನೀಡಲಾಗಿದೆ. ಅದರಂತೆ ವಿಶ್ವವಿಖ್ಯಾತ ಜಂಬೂ ಸವಾರಿ(Jambu savari) ಸೇರಿದಂತೆ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡುವುದಕ್ಕಾಗಿ ಜಿಲ್ಲಾಡಳಿತ ದಸರಾ ಗೋಲ್ಡ್​ ಕಾರ್ಡ್ (Dasara Gold Card)​ ಬಿಡುಗಡೆ ಮಾಡಲಿದೆ. ಹೌದು, ನಾಳೆ(ಅ.18) ಬೆಳಗ್ಗೆ 10 ಗಂಟೆಗೆ ದಸರಾ ಗೋಲ್ಡ್​ ಕಾರ್ಡ್ ಬಿಡುಗಡೆ ಮಾಡಲಿದ್ದು, ಬರೊಬ್ಬರಿ 6 ಸಾವಿರ ರೂಪಾಯಿಯನ್ನು ನಿಗದಿ ಮಾಡಲಾಗಿದೆ.

ಆನ್‌ಲೈನ್ ಮೂಲಕ ಮಾರಾಟಕ್ಕೆ‌ ನಿರ್ಧಾರ

ಹೌದು, ನಾಳೆ ಬೆಳಗ್ಗೆ 10 ಗಂಟೆಗೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದ್ದು, ಆನ್ ಲೈನ್ ಮುಖಾಂತರ ಖರೀದಿ ಮಾಡಲು ಅವಕಾಶ ನೀಡಲಾಗಿದೆ. ಲಭ್ಯತೆಗೆ ಅನುಗುಣವಾಗಿ ಆನ್‌ಲೈನ್ ಮೂಲಕ ವೆಬ್ ಸೈಟ್​ನಲ್ಲಿ ಖರೀದಿಸಲು ಮಾತ್ರ ಅವಕಾಶ ಕೊಡಲಾಗಿದೆ. ಒಂದು ಬಾರಿಗೆ ಗರಿಷ್ಠ ಎರಡು ಗೋಲ್ಡ್ ಕಾರ್ಡ್​ ಖರೀದಿಸಬಹುದಾಗಿದೆ.

ಇನ್ನುಅ. 24 ರಂದು ಜಂಬೂಸವಾರಿ ಮತ್ತು ಪಂಜಿನ ಕವಾಯಿತು ವೀಕ್ಷಣೆಗೂ ಟಿಕೆಟ್‌ ಖರೀದಿಗೆ ಆನ್‌ಲೈನ್ ಮೂಲಕ ಅವಕಾಶ ನೀಡಲಾಗಿದ್ದು, ಅರಮನೆ ಆವರಣದೊಳಗೆ ದಸರಾ ಜಂಬೂಸವಾರಿ ವೀಕ್ಷಣೆಗೆ ಪ್ರತಿ ಟಿಕೆಟ್ ಬೆಲೆ ರೂ 3 ಸಾವಿರ ಮತ್ತು ರೂ. 2 ಸಾವಿರ ನಿಗದಿ ಮಾಡಲಾಗಿದೆ. ಜೊತೆಗೆ ಬನ್ನಿಮಂಟಪದಲ್ಲಿ ಪಂಜಿನ ಕವಾಯಿತು ವೀಕ್ಷಣೆಗೆ ಪ್ರತಿ ಟಿಕೆಟಿನ ಬೆಲೆ ರೂ.500 ನಿಗದಿಸಲಾಗಿದೆ. ಈ  ಟಿಕೆಟ್ ಮತ್ತು ಗೋಲ್ಡ್‌ಕಾರ್ಡ್ ಖರೀದಿಗಾಗಿ mysoredasara.gov.in ವೆಬ್‌ಸೈಟ್‌ನ್ನು ಸಂಪರ್ಕಿಸ ಬಹುದು.

ಇದನ್ನೂ ಓದಿ:ಮೈಸೂರು ದಸರಾ: ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯತಿ ನೀಡಿದ ಕರ್ನಾಟಕ ಸರ್ಕಾರ

ಆನ್‌ಲೈನ್ ಮೂಲಕ ಗೋಲ್ಡ್ ಕಾರ್ಡ್ ಹಾಗೂ ಟಿಕೆಟ್ ಖರೀದಿಸಿದವರಿಗೆ ಗೋಲ್ಡ್ ಕಾರ್ಡ್ ಟಿಕೆಟ್ ಸ್ವೀಕರಿಸಲು ಸ್ಥಳ, ದಿನಾಂಕ ಹಾಗೂ ಸಮಯ ತಿಳಿಸಲಾಗುತ್ತದೆ. ಅವರ ಮೊಬೈಲ್​ಗೆ ಎಸ್​ಎಂಎಸ್ ಮೂಲಕ ಮತ್ತು ಇ-ಮೇಲ್ ಐಡಿಗೆ ಮಾಹಿತಿ ಬರಲಿದೆ. ಅದಕ್ಕನುಸಾರವಾಗಿ ಖರೀದಿಸಿದವರು ಅವರ ಭಾವಚಿತ್ರವಿರುವ ಯಾವುದಾದರೂ ಒಂದು ಪೋಟೋ, ಐಡಿ ಹಾಜರುಪಡಿಸಿ ಗೋಲ್ಡ್ ಕಾರ್ಡ್ ಅಥವಾ ಟಿಕೆಟ್ ಪಡೆದುಕೊಳ್ಳಬಹುದು. ಆನ್‌ಲೈನ್ ಹೊರತುಪಡಿಸಿ ಇತರೆ ಕಡೆ ಯಾವುದೇ ರೀತಿಯಲ್ಲಿ ಗೋಲ್ಡ್‌ಕಾರ್ಡ್ ಮತ್ತು ಟಿಕೆಟ್ ಮಾರಾಟ ಇಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ