ಮೈಸೂರು, ಅ.17: ಮೈಸೂರು ದಸರಾಗೆ ಈಗಾಗಲೇ ಚಾಲನೆ ನೀಡಲಾಗಿದೆ. ಅದರಂತೆ ವಿಶ್ವವಿಖ್ಯಾತ ಜಂಬೂ ಸವಾರಿ(Jambu savari) ಸೇರಿದಂತೆ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡುವುದಕ್ಕಾಗಿ ಜಿಲ್ಲಾಡಳಿತ ದಸರಾ ಗೋಲ್ಡ್ ಕಾರ್ಡ್ (Dasara Gold Card) ಬಿಡುಗಡೆ ಮಾಡಲಿದೆ. ಹೌದು, ನಾಳೆ(ಅ.18) ಬೆಳಗ್ಗೆ 10 ಗಂಟೆಗೆ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಲಿದ್ದು, ಬರೊಬ್ಬರಿ 6 ಸಾವಿರ ರೂಪಾಯಿಯನ್ನು ನಿಗದಿ ಮಾಡಲಾಗಿದೆ.
ಹೌದು, ನಾಳೆ ಬೆಳಗ್ಗೆ 10 ಗಂಟೆಗೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದ್ದು, ಆನ್ ಲೈನ್ ಮುಖಾಂತರ ಖರೀದಿ ಮಾಡಲು ಅವಕಾಶ ನೀಡಲಾಗಿದೆ. ಲಭ್ಯತೆಗೆ ಅನುಗುಣವಾಗಿ ಆನ್‌ಲೈನ್ ಮೂಲಕ ವೆಬ್ ಸೈಟ್ನಲ್ಲಿ ಖರೀದಿಸಲು ಮಾತ್ರ ಅವಕಾಶ ಕೊಡಲಾಗಿದೆ. ಒಂದು ಬಾರಿಗೆ ಗರಿಷ್ಠ ಎರಡು ಗೋಲ್ಡ್ ಕಾರ್ಡ್ ಖರೀದಿಸಬಹುದಾಗಿದೆ.
ಇನ್ನುಅ. 24 ರಂದು ಜಂಬೂಸವಾರಿ ಮತ್ತು ಪಂಜಿನ ಕವಾಯಿತು ವೀಕ್ಷಣೆಗೂ ಟಿಕೆಟ್ ಖರೀದಿಗೆ ಆನ್‌ಲೈನ್ ಮೂಲಕ ಅವಕಾಶ ನೀಡಲಾಗಿದ್ದು, ಅರಮನೆ ಆವರಣದೊಳಗೆ ದಸರಾ ಜಂಬೂಸವಾರಿ ವೀಕ್ಷಣೆಗೆ ಪ್ರತಿ ಟಿಕೆಟ್ ಬೆಲೆ ರೂ 3 ಸಾವಿರ
ಮತ್ತು ರೂ. 2 ಸಾವಿರ ನಿಗದಿ ಮಾಡಲಾಗಿದೆ. ಜೊತೆಗೆ ಬನ್ನಿಮಂಟಪದಲ್ಲಿ ಪಂಜಿನ ಕವಾಯಿತು ವೀಕ್ಷಣೆಗೆ ಪ್ರತಿ ಟಿಕೆಟಿನ ಬೆಲೆ ರೂ.500 ನಿಗದಿಸಲಾಗಿದೆ. ಈ ಟಿಕೆಟ್ ಮತ್ತು ಗೋಲ್ಡ್‌ಕಾರ್ಡ್ ಖರೀದಿಗಾಗಿ mysoredasara.gov.in ವೆಬ್‌ಸೈಟ್‌ನ್ನು ಸಂಪರ್ಕಿಸ ಬಹುದು.
ಇದನ್ನೂ ಓದಿ:ಮೈಸೂರು ದಸರಾ: ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯತಿ ನೀಡಿದ ಕರ್ನಾಟಕ ಸರ್ಕಾರ
ಆನ್‌ಲೈನ್ ಮೂಲಕ ಗೋಲ್ಡ್ ಕಾರ್ಡ್ ಹಾಗೂ ಟಿಕೆಟ್ ಖರೀದಿಸಿದವರಿಗೆ ಗೋಲ್ಡ್ ಕಾರ್ಡ್ ಟಿಕೆಟ್ ಸ್ವೀಕರಿಸಲು ಸ್ಥಳ, ದಿನಾಂಕ ಹಾಗೂ ಸಮಯ ತಿಳಿಸಲಾಗುತ್ತದೆ. ಅವರ ಮೊಬೈಲ್ಗೆ ಎಸ್ಎಂಎಸ್ ಮೂಲಕ ಮತ್ತು ಇ-ಮೇಲ್ ಐಡಿಗೆ ಮಾಹಿತಿ ಬರಲಿದೆ.
ಅದಕ್ಕನುಸಾರವಾಗಿ ಖರೀದಿಸಿದವರು ಅವರ ಭಾವಚಿತ್ರವಿರುವ ಯಾವುದಾದರೂ ಒಂದು ಪೋಟೋ, ಐಡಿ ಹಾಜರುಪಡಿಸಿ ಗೋಲ್ಡ್ ಕಾರ್ಡ್ ಅಥವಾ ಟಿಕೆಟ್ ಪಡೆದುಕೊಳ್ಳಬಹುದು. ಆನ್‌ಲೈನ್ ಹೊರತುಪಡಿಸಿ ಇತರೆ ಕಡೆ ಯಾವುದೇ ರೀತಿಯಲ್ಲಿ ಗೋಲ್ಡ್‌ಕಾರ್ಡ್ ಮತ್ತು ಟಿಕೆಟ್ ಮಾರಾಟ ಇಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಮಾಹಿತಿ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ