ಮೈಸೂರು: ಲಾಕ್​ಡೌನ್​ ನಂತರ ಕೋಟ್ಯಾಧೀಶನಾದ ನಂಜುಂಡೇಶ್ವರ; ಒಂದೇ ತಿಂಗಳಲ್ಲಿ ಕಾಣಿಕೆ ಹುಂಡಿ ಭರ್ತಿ

| Updated By: preethi shettigar

Updated on: Sep 04, 2021 | 11:10 AM

ನಂಜನಗೂಡಿನ ದೇವಸ್ಥಾನದ ಸಿಬ್ಬಂದಿ ಹಾಗೂ ಕಾವೇರಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಸಿಬ್ಬಂದಿ ದೇವಸ್ಥಾನದ ಹುಂಡಿಯಲ್ಲಿರುವ ಹಣ ಹಾಗೂ ಚಿನ್ನಾಭರಣ ಎಣಿಕೆ ಮಾಡಿದ್ದಾರೆ.

ಮೈಸೂರು: ಲಾಕ್​ಡೌನ್​ ನಂತರ ಕೋಟ್ಯಾಧೀಶನಾದ ನಂಜುಂಡೇಶ್ವರ; ಒಂದೇ ತಿಂಗಳಲ್ಲಿ ಕಾಣಿಕೆ ಹುಂಡಿ ಭರ್ತಿ
ನಂಜನಗೂಡಿನ ನಂಜುಂಡೇಶ್ವರ
Follow us on

ಮೈಸೂರು: ಕೊರೊನಾ ಎರಡನೇ ಅಲೆಯ ಲಾಕ್​ಡೌನ್​ ನಂತರದಲ್ಲಿ ದೇವಾಲಯದ ಪ್ರವೇಶಕ್ಕೆ ಅವಕಾಶ ದೊರೆತಿದ್ದು, ಅದರಂತೆ ಭಕ್ತರು ಕೂಡ ತಮ್ಮ ನೆಚ್ಚಿನ ದೇವರ ದರ್ಶನಕ್ಕೆ ಮುಂದಾಗಿದ್ದಾರೆ. ಇದರ ಅನುಸಾರ ಮೈಸೂರಿನ ನಂಜನಗೂಡಿನ ನಂಜುಂಡೇಶ್ವರ ದೇವಾಲಯವೂ ಸಹ ಭಕ್ತರ ದರ್ಶನಕ್ಕೆ ಮುಕ್ತವಾಗಿದ್ದು, ಭಕ್ತರು ಹೆಚ್ಚನ ಸಂಖ್ಯೆಯಲ್ಲಿ ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ಆ ಪ್ರಕಾರ ಒಂದೇ ತಿಂಗಳಿನಲ್ಲಿ 1,29,73,194 ರೂಪಾಯಿ ಕಾಣಿಕೆ ಹಣ ಸಂಗ್ರಹವಾಗಿದ್ದು, ನಂಜನಗೂಡಿನ ನಂಜುಂಡೇಶ್ವರ ಕೋಟ್ಯಾಧೀಶರನಾಗಿದ್ದಾನೆ.

ಭಕ್ತಾದಿಗಳಿಂದ ಕಾಣಿಕೆ ಹುಂಡಿ ಕೇವಲ ಒಂದು ತಿಂಗಳಲ್ಲಿ ಭರ್ತಿಯಾಗಿದೆ. ನಂಜನಗೂಡಿನ ದೇವಸ್ಥಾನದ ಸಿಬ್ಬಂದಿ ಹಾಗೂ ಕಾವೇರಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಸಿಬ್ಬಂದಿ ದೇವಸ್ಥಾನದ ಹುಂಡಿಯಲ್ಲಿರುವ ಹಣ ಹಾಗೂ ಚಿನ್ನಾಭರಣ ಎಣಿಕೆ ಮಾಡಿದ್ದಾರೆ. ಆ ಪ್ರಕಾರ 50ಗ್ರಾಂ ಚಿನ್ನ, 8 ಕೆಜಿ 200 ಗ್ರಾಂ ಬೆಳ್ಳಿ, 12 ವಿದೇಶಿ ಕರೆನ್ಸಿಗಳು ಹುಂಡಿಯಲ್ಲಿ ಸಂಗ್ರಹವಾಗಿದೆ.  ಲಾಕ್​ಡೌನ್​ ತೆರವು ನಂತರ ನಂಜುಂಡೇಶ್ವರ ದರ್ಶನ ಪಡೆಯಲು ಭಕ್ತಾದಿಗಳ ಸಂಖ್ಯೆ ದಿನೇ ದಿನೇ ಏರುತ್ತಿರುವುದರಿಂದ ಹುಂಡಿಗೆ ಕಾಣಿಕೆ ಹೆಚ್ಚಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಇದನ್ನೂ ಓದಿ:
Tirupati Temple : ಲಾಕ್​ಡೌನ್​ ಬಳಿಕ ತಿಮ್ಮಪ್ಪನ ಹುಂಡಿಯಲ್ಲಿ ಸಂಗ್ರಹವಾದ ಕಾಣಿಕೆ ಹಣ ಎಷ್ಟು ಗೊತ್ತಾ?

Temple Hundi | ದೇವಾಲಯದ ಹುಂಡಿ ಎಣಿಕೆ: ಒಂದೇ ತಿಂಗಳಲ್ಲಿ‌ ಕೋಟ್ಯಾಧೀಶ್ವರನಾದ ನಂಜುಂಡೇಶ್ವರ, ಮಲೆ ಮಹದೇಶ್ವರ

Published On - 8:40 am, Sat, 4 September 21