ಮೈಸೂರಲ್ಲಿ ವಿಷಕಾರಿ ಅನಿಲ ಸೋರಿಕೆ; 50 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು
ಮೈಸೂರಿ(Mysore)ನ ಹಳೇ ಕೆಸರೆಯ ಗುಜರಿ ಗೋದಾಮಿನಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಐವರು ಅಸ್ವಸ್ಥರಾದ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಹಾಗೂ ಪೊಲೀಸರು ಭೇಟಿ ನೀಡಿದ್ದು, ಗೋದಾಮಿನಲ್ಲಿ ವಿಷಕಾರಿ ಅನಿಲ ಸೋರಿಕೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.
ಮೈಸೂರು, ಜೂ.07: ವಿಷಕಾರಿ ಅನಿಲ ಸೋರಿಕೆಯಾಗಿ ಆರು ಜನ ಅಸ್ವಸ್ಥರಾದ ಘಟನೆ ಮೈಸೂರಿ(Mysore)ನ ಹಳೇ ಕೆಸರೆಯ ಗುಜರಿ ಗೋದಾಮಿನಲ್ಲಿ ನಡೆದಿದ್ದು, ಕೂಡಲೇ ಆರು ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಅಕ್ಕಪಕ್ಕದ ನಿವಾಸಿಗಳೂ ಅಸ್ವಸ್ಥರಾಗಿದ್ದು, ಉಸಿರಾಟದ ತೊಂದರೆ, ಕೆಮ್ಮು ಕಾಣಿಸಿಕೊಂಡು ಪರದಾಡುತ್ತಿದ್ದಾರೆ. ಈ ಹಿನ್ನಲೆ ಸುಮಾರು 50 ಕ್ಕೂ ಹೆಚ್ಚು ಮಂದಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಹಾಗೂ ಪೊಲೀಸರು ಭೇಟಿ ನೀಡಿದ್ದಾರೆ. ಗೋದಾಮಿನಲ್ಲಿ ವಿಷಕಾರಿ ಅನಿಲ ಸೋರಿಕೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಸಧ್ಯ ಅಸ್ವಸ್ಥಗೊಂಡವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಾರ್ಟ್ಸರ್ಕ್ಯೂಟ್ನಿಂದ ಲೇಡಿಸ್ ಹಾಸ್ಟೆಲ್ನಲ್ಲಿ ಬೆಂಕಿ
ತುಮಕೂರು: ನಗರದ ಬಿ.ಹೆಚ್ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಲೇಡಿಸ್ ಹಾಸ್ಟೆಲ್ನಲ್ಲಿ ಶಾರ್ಟ್ಸರ್ಕ್ಯೂಟ್ನಿಂದ ಬೆಂಕಿ ಆವರಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿದ್ಯಾರ್ಥಿನಿಯರು ಹೊರಬಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕಾಗಮಿಸಿ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇತ್ತ ಘಟನೆ ಬೆನ್ನಲ್ಲೇ ಹಾಸ್ಟೆಲ್ಗೆ ಡಿಸಿ ಶುಭಕಲ್ಯಾಣ್ ಭೇಟಿ ನೀಡಿ, ವಾರ್ಡನ್ ಹಾಗೂ ವಿದ್ಯಾರ್ಥಿನಿಯರ ಜೊತೆ ಮಾತುಕತೆ ನಡೆಸಿದ್ದಾರೆ. ಈ ಕುರಿತು ಹೊಸ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:ಆನೇಕಲ್: ಇಲಿ ಬಿದ್ದ ಪಲ್ಯ ಸೇವಿಸಿ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ
ಮನೆಗಳ ಮೇಲಿನ ಗಿಡಗಳನ್ನು ಕೀಳಲು ಹೋಗಿ ಪಂಪ್ ಆಪರೇಟರ್ ಸಾವು
ಹುಬ್ಬಳ್ಳಿ: ನಗರದ ಗಿರಣಿ ಚಾಳ ಬಳಿಯಿರುವ ಪೋಸ್ಟ್ ಆಫೀಸ್ ಕ್ವಾರ್ಟರ್ಸ್ ಮೇಲಿಂದ ಬಿದ್ದು ಪಂಪ್ ಆಪರೇಟರ್ ಪರಶುರಾಮ ನಿಂಗಪ್ಪ ಉಪ್ಪಾರ(60) ಸಾವನ್ನಪ್ಪಿದ್ದಾರೆ. ಮನೆಗಳ ಮೇಲಿನ ಸಸಿಗಳನ್ನು ಕೀಳುವಾಗ ಆಯತಪ್ಪಿ ಬಿದ್ದು ದುರ್ಘಟನೆ ನಡೆದಿದೆ. ಕಳೆದ 40 ವರ್ಷಗಳಿಂದ ಪೋಸ್ಟ್ ಆಫೀಸ್ ಕ್ವಾರ್ಟರ್ಸ್ನಲ್ಲಿ ಪಂಪ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಈ ಕುರಿತು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:33 pm, Fri, 7 June 24