AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಪ್ರತಾಪ್ ಸಿಂಹ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು

ಸಂಸದ ಪ್ರತಾಪ್ ಸಿಂಹ ವಿರುದ್ಧ ಫೇಸ್​ಬುಕ್​ನಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆ ಮೈಸೂರಿನ ವಿವಿ ಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಸಂಸದ ಪ್ರತಾಪ್ ಸಿಂಹ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು
ಪ್ರಾತಿನಿಧಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Jul 02, 2023 | 8:56 AM

Share

ಮೈಸೂರು: ಸಂಸದ ಪ್ರತಾಪ್ ಸಿಂಹ(Prathap Simha) ಬಗ್ಗೆ ಫೇಸ್​ಬುಕ್​ನಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆ ಮೈಸೂರಿನ ವಿವಿ ಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಇಲಾಖಾ ವಿಚಾರಣೆ ಬಾಕಿ ಇರಿಸಿ ಬಿ.ಪ್ರದೀಪ್ ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್(Ramesh Banoth) ಆದೇಶಿಸಿದ್ದಾರೆ.

ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್ ಬಿ.ಪ್ರದೀಪ್, ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಇದನ್ನು ಗಮನಿಸಿದ ಸಂಸದ ಪ್ರತಾಪ ಸಿಂಹ ಹಾಕಲಾಗಿದ್ದ ಕಮೆಂಟ್ ಸ್ಕ್ರೀನ್​ಶಾಟ್ ಜೊತೆ ಪೊಲೀಸ್ ಕಮಿಷನರ್​​ಗೆ ದೂರು ನೀಡಿದ್ರು. ಕ್ರಮ ಕೈಗೊಳ್ಳುವಂತೆ ಸಂಸದ ಪ್ರತಾಪ್ ಸಿಂಹ ದೂರು ನೀಡಿದ್ದರು. ದೂರಿನ ಮೇರೆಗೆ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮದ್ಯ ವಶ

ದಾವಣಗೆರೆ ಡಿಸಿಆರ್ ಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 3.61 ಲಕ್ಷ ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. ಎಂ.ಬಿ.ರವಿಕುಮಾರ (47) ಹಾಗೂ ತಿಪ್ಪೇಶ (43) ಎಂಬ ಇಬ್ಬರನ್ನು ಬಂಧಿಸಿದ್ದಾರೆ.  ಯಾವುದೇ ಪರವಾನಗಿ ಇಲ್ಲದೇ ವಿವಿಧ ಬ್ರ್ಯಾಂಡ್ ಗಳಿಗೆ ಸೇರಿದ ಮದ್ಯ ಸಂಗ್ರಹಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಡಿಸಿ ಆರ್ ಬಿ‌ ವಿಭಾಗದ ಡಿಎಸ್ಪಿ ಬಿಎಸ್ ಬಸವರಾಜ್ ಮದ್ಯ ವಶಕ್ಕೆ ಪಡೆದಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Kalaburagi News: ಆಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿಗೆ ಇಪ್ಪತ್ತು ವರ್ಷ ಜೈಲು ಶಿಕ್ಷೆ

ಪರವಾನಗಿ ಪಡೆಯದೇ ದಾಲ್ ಮಿಲ್​ನಲ್ಲಿ ಗುಟ್ಕಾ ತಯಾರಿ

ಕಲಬುರಗಿ ನಗರದಲ್ಲಿ ಅಕ್ರಮ ಗುಟ್ಕಾ ತಯಾರಿಕಾ ಘಟಕ ಪತ್ತೆಯಾಗಿದೆ. ಕಲಬುರಗಿ ನಗರದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಪರವಾನಗಿ ಪಡೆಯದೇ ದಾಲ್ ಮಿಲ್​ನಲ್ಲಿ ಗುಟ್ಕಾ ತಯಾರಿ ಮಾಡಲಾಗುತ್ತಿದೆ. ಕೆಲ‌ ಪಾನ್ ಮಸಾಲಗಳ ನಕಲಿ ಪೌಚ್​ನಲ್ಲಿ ಗುಟ್ಕಾ ಮಾರಾಟ ಮಾಡಲಾಗುತ್ತಿದೆ. ಸ್ಥಳದಲ್ಲಿ ‌ಗುಟ್ಕಾ ತಯಾರಿಕೆಗೆ ಬಳಸುತ್ತಿದ್ದ ಹಲವು ವಸ್ತುಗಳು ಪತ್ತೆಯಾಗಿವೆ. ಬಿಹಾರ, ಯುಪಿಯಿಂದ ಕಾರ್ಮಿಕರನ್ನು ಕರೆತಂದು ಗುಟ್ಕಾ ತಯಾರಿಸಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಸದ್ಯ ನಕಲಿ ಗುಟ್ಕಾ ತಯಾರಿಕೆ ಮಾಲೀಕರ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ