ಮೈಸೂರು: ವಿಡಿಯೋ ಕಾಲ್ ಮಾಡಿ ಹೆಂಡತಿ ಜೊತೆ ಮಾತನಾಡುತ್ತಿದ್ದ ವ್ಯಕ್ತಿಯ ಮೇಲೆ ರೈಲು ಹರಿದು ಸಾವು
ವಿಡಿಯೋ ಕಾಲ್ ಮಾಡಿ ತನ್ನ ಹೆಂಡತಿ ಜೊತೆ ಮಾತನಾಡುತ್ತ ರೈಲು ಹಳಿಗಳ ಮೇಲೆ ಓಡಾಡುತ್ತಿದ್ದ ವ್ಯಕ್ತಿ ಮೇಲೆ ರೈಲು ಹರಿದಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿ ಬಿಹಾರ ಮೂಲದ ಕಾರ್ಮಿಕ ಎಂದು ತಿಳಿದು ಬಂದಿದೆ. ಮೃತದೇಹವನ್ನು ಎಂಎಂಸಿಆರ್‌ಐ ಶವಾಗಾರಕ್ಕೆ ರವಾನಿಸಲಾಗಿದೆ.
ಮೈಸೂರು, ಮಾರ್ಚ್.06: ನಂಜನಗೂಡಿನ ಕವಲಂದೆ ಬಳಿ ಮಂಗಳವಾರ ಮುಂಜಾನೆ ರೈಲಿಗೆ ಸಿಲುಕಿ ಬಿಹಾರ ಮೂಲದ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ (Death). ರೈಲ್ವೆ ಪೊಲೀಸರ ಪ್ರಕಾರ, ಮೃತರನ್ನು ಬಿಹಾರ ಮೂಲದ ಮನು ಕುಮಾರ್ (27) ಎಂದು ಗುರುತಿಸಲಾಗಿದ್ದು, ಬೆಳಗ್ಗೆ 8 ಗಂಟೆ ಸುಮಾರಿಗೆ ಚಾಮರಾಜನಗರದಿಂದ ಬರುತ್ತಿದ್ದ ರೈಲಿಗೆ ಸಿಲುಕಿ ಕಾರ್ಮಿಕ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.
ದುರಂತ ಸಂಭವಿಸಿದಾಗ ಮನು ವೀಡಿಯೊ ಕಾಲ್ನಲ್ಲಿದ್ದ. ತನ್ನ ಹೆಂಡತಿಗೆ ವಿಡಿಯೋ ಕಾಲ್ ಮಾಡಿ ಮಾತನಾಡುತ್ತ ರೈಲ್ವೆ ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಗು ನಂಜನಗೂಡಿನಲ್ಲಿ ಬಡಗಿಗಳಿಗೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಮೃತದೇಹವನ್ನು ಎಂಎಂಸಿಆರ್‌ಐ ಶವಾಗಾರಕ್ಕೆ ರವಾನಿಸಲಾಗಿದೆ.
ಜಾರ್ಖಂಡ್‌ನಲ್ಲಿ ರೈಲು ಅಪಘಾತಕ್ಕೆ ಇಬ್ಬರ ಸಾವು
ಜಾರ್ಖಂಡ್‌ನ ಜಮ್ತಾರಾ ಜಿಲ್ಲೆಯಲ್ಲಿ ರೈಲಿಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಗಿದ ಬಳಿಕ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಮೃತ ಪ್ರಯಾಣಿಕನನ್ನು ಬಿಹಾರದ ಕತಿಹಾರ್ ಜಿಲ್ಲೆಯ ಮನೀಶ್ ಕುಮಾರ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ದೇಶದ ಮೊದಲ ನೀರೊಳಗಿನ ಮೆಟ್ರೋಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಚಾಲಕನ ನಿಯಂತ್ರಣ ತಪ್ಪಿ ಟಾಟಾಸುಮೋ ಪಲ್ಟಿ, ಓರ್ವ ಸಾವು
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ನಿಡಘಟ್ಟಬಳಿಯ ಬೆಂ-ಮೈ ಎಕ್ಸ್ಪ್ರೆಸ್ ವೇನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಸುಮೋ ಪಲ್ಟಿಯಾಗಿದ್ದು ಸ್ಥಳದಲ್ಲಿ ಫೈರೋಜ್(36) ಎಂಬ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳೂರಿನಿಂದ ಮೈಸೂರುಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ನಿವಾಸಿ ಫೈರೋಜ್ನ ಸಹೋದರ ಅಪ್ರೋಜ್ಗೆ ಮಿಮ್ಸ್ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಂತಿದ್ದ ಲಾರಿಗೆ ಮತ್ತೊಂದು ಮೈನಿಂಗ್ ಲಾರಿ ಡಿಕ್ಕಿ
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತುಮಟಿ ತಾಂಡಾ ಬಳಿ ನಿಂತಿದ್ದ ಲಾರಿಗೆ ಮೈನಿಂಗ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಲಾರಿ ನಜ್ಜುಗುಜ್ಜಾಗಿದೆ. ಗಾಯಗೊಂಡ ಡ್ರೈವರ್ನನ್ನ ಟ್ಯಾಕ್ಟರ್ ಮೂಲಕ ಹೊರ ತೆಗೆಯಲಾಗಿದೆ. ಜನಾರ್ದನರೆಡ್ಡಿ ಪತ್ನಿ ಲಕ್ಷ್ಮೀ ಗಾಯಾಳುವಿನ ಯೋಗಕ್ಷೇಮ ವಿಚಾರಿಸಿದರು. ತೋರಣಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ