AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು; ಮುಗಿಲು ಮುಟ್ಟಿದ್ದ ಪೋಷಕರ ಆಕ್ರಂದನ

ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರಿಬ್ಬರು ಸಾವನ್ನಪ್ಪಿರುವ ಘಟನೆ ತಲಕಾಡಿನ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ. ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಲಕಾಡಿಗೆ ಈಜಲು ತೆರಳಿದ್ದ ಲೋಹಿತ್(15), ಯತೀಶ್(13) ಸಾವನ್ನಪ್ಪಿದ್ದಾರೆ.

ಮೈಸೂರು: ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು; ಮುಗಿಲು ಮುಟ್ಟಿದ್ದ ಪೋಷಕರ ಆಕ್ರಂದನ
ಪ್ರಾತಿನಿಧಿಕ ಚಿತ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on:May 23, 2023 | 11:30 AM

ಮೈಸೂರು: ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರಿಬ್ಬರು ಸಾವನ್ನಪ್ಪಿರುವ ಘಟನೆ ತಲಕಾಡಿನ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ. ಜಿಲ್ಲೆಯ ಟಿ. ನರಸೀಪುರ (Tirumakudalu Narasipura) ತಾಲೂಕಿನ ತಲಕಾಡಿಗೆ ಈಜಲು ತೆರಳಿದ್ದ ಲೋಹಿತ್(15), ಯತೀಶ್(13) ಸಾವನ್ನಪ್ಪಿದ್ದಾರೆ. ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ರವಿಗೌಡರ ಪುತ್ರರು, ಸ್ನೇಹಿತರ ಜೊತೆ ಬೆಂಗಳೂರಿನಿಂದ ತಲಕಾಡಿಗೆ ಆಗಮಿಸಿದ್ದ ಬಾಲಕರು, ಈಜಲು ನದಿಗೆ ಇಳಿದಿದ್ದರು. ಈ ವೇಳೆ ನದಿಯಲ್ಲಿ ಮುಳುಗಿ ದುರಂತ ಅಂತ್ಯ ಕಂಡಿದ್ದಾರೆ. ಇನ್ನು ಅಲ್ಲೇ ಇದ್ದ ಅಂಬಿಗರಿಂದ 6 ಬಾಲಕರ ರಕ್ಷಣೆ ಮಾಡಲಾಗಿದೆ. ಮಕ್ಕಳ ಮೃತದೇಹ ಕಂಡು ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಈ ಕುರಿತು ತಲಕಾಡು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡಿಯುವ ನೀರಿಗಾಗಿ ನದಿಗೆ ಇಳಿದಿದ್ದ ಬಾಲಕನನ್ನ ಹೊತ್ತೊಯ್ದ ಮೊಸಳೆ

ರಾಯಚೂರು: ಕುಡಿಯುವ ನೀರಿಗಾಗಿ ನದಿಗೆ ಇಳಿದಿದ್ದ ಬಾಲಕನನ್ನ ಮೊಸಳೆ ಹೊತ್ತೊಯ್ದ ಘಟನೆ ತಾಲೂಕಿನ ಕುರವಕಲಾ ಗ್ರಾಮದಲ್ಲಿ ನಡೆದಿದೆ. ನವೀನ್​(9) ಮೃತ ಬಾಲಕ. ಪೋಷಕರ ಜತೆ ನದಿ ಬಳಿ ಇರುವ ಜಮೀನಿಗೆ ನವೀನ್ ತೆರಳಿದ್ದ. ಈ ವೇಳೆ ಪೋಷಕರು ನದಿಗೆ ಹೋಗಿ ಕುಡಿಯಲು ನೀರು ತರಲು ಹೇಳಿದ್ದರು. ಕುಡಿಯುವ ನೀರಿಗಾಗಿ ನದಿಗೆ ತೆರಳಿದ್ದ ನವೀನ್ ಹಾಗೂ ಮತ್ತೊಬ್ಬ ಬಾಲಕ, ಬಾಟಲಿಗೆ ನೀರು ತುಂಬಿಸಲು ಮುಂದಾಗಿದ್ದಾರೆ. ಇದೇ ಸಂದರ್ಭದಲ್ಲಿ ನವೀನನ​ ಮೇಲೆ ಮೊಸಳೆ ದಾಳಿ ಮಾಡಿದ್ದು, ಹೊತ್ತೊಯ್ದಿದೆ. ನವೀನ್​ ಜತೆ ಇದ್ದ ಮತ್ತೊಬ್ಬ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನು ಬಾಲಕ ನವೀನ್​ಗಾಗಿ ಕೃಷ್ಣಾ ನದಿಯಲ್ಲಿ ಶೋಧ ಕಾರ್ಯ ಆರಂಭವಾಗಿದ್ದು, ಯಾಪಲದಿನ್ನಿ ಪೊಲೀಸರು, ಅಗ್ನಿಶಾಮಕ ದಳ ಜೊತೆ ಸ್ಥಳೀಯರಿಂದ ಕಾರ್ಯಾಚರಣೆ. ನಡೆಸಿದ್ದಾರೆ. ಈ ಕುರಿತು ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಉತ್ತರಾಖಂಡ್ ಕೊಲೆ ಪ್ರಕರಣ; ನೀರಿನಲ್ಲಿ ಮುಳುಗಿ ಯುವತಿಯ ಸಾವು ಸಂಭವಿಸಿದೆ: ಮರಣೋತ್ತರ ಪರೀಕ್ಷೆ ವರದಿ

ಸಿರವಾರದಲ್ಲಿ ಅನುಮಾನಾಸ್ಪದವಾಗಿ ತಂದೆ, ಇಬ್ಬರು ಮಕ್ಕಳು ಸಾವು

ರಾಯಚೂರು: ತಂದೆ ಮತ್ತು ಇಬ್ಬರು ಮಕ್ಕಳು ಅನುಮಾನಸ್ಪದವಾಗಿ ಸಾವನ್ನಪ್ಪಿರುವ (Suspicious death) ಘಟನೆ ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ನಡೆದಿದೆ. ಮುದಕಪ್ಪ (60), ಶಿವು (23), ಬಸವರಾಜ್ (20) ಸಾವನ್ನಪ್ಪಿದವರು. ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಮೂವರ ಶವವನ್ನು ಹೊರತೆಗೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಸಿರವಾರ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದು, ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:30 am, Tue, 23 May 23