ಸಾಂಸ್ಕೃತಿಕ ನಗರಿಯಲ್ಲಿ 9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಯುವಕರಿಂದ ಅತ್ಯಾಚಾರ

| Updated By: ಆಯೇಷಾ ಬಾನು

Updated on: Aug 31, 2022 | 1:11 PM

ಬಾಲಕಿ ಅನಾರೋಗ್ಯಕ್ಕೆ ಒಳಗಾದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀವ್ರ ಜ್ವರದಿಂದ ಬಳಲುತ್ತಿರುವ ಬಾಲಕಿ ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಸಾಂಸ್ಕೃತಿಕ ನಗರಿಯಲ್ಲಿ 9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಯುವಕರಿಂದ ಅತ್ಯಾಚಾರ
ಸಾಂದರ್ಭಿಕ ಚಿತ್ರ
Follow us on

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಲಾಗಿದೆ. 9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಪೈಶಾಚಿಕ ಕೃತ್ಯ ಎಸಗಿ ನಾಪತ್ತೆಯಾಗಿದ್ದಾರೆ. ಮೈಸೂರಿನ ವಿವಿ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಲಕಿ ಅನಾರೋಗ್ಯಕ್ಕೆ ಒಳಗಾದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀವ್ರ ಜ್ವರದಿಂದ ಬಳಲುತ್ತಿರುವ ಬಾಲಕಿ ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಮೈಸೂರಿನ ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

500 ಮುಖಬೆಲೆಯ ನಕಲಿ ನೋಟು ಮುದ್ರಿಸಿ ಚಲಾವಣೆಗೆ ಯತ್ನ

ಬೆಳಗಾವಿ ‌ಜಿಲ್ಲೆ ಮೂಡಲಗಿ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ 500 ಮುಖಬೆಲೆಯ ನಕಲಿ ನೋಟು ಮುದ್ರಿಸಿ ಚಲಾವಣೆಗೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಘಟಪ್ರಭಾ ಠಾಣೆ ಪೊಲೀಸರು ರಾಯಚೂರು ಜಿಲ್ಲೆ ಸಿಂಧನೂರು ಮೂಲದ ಕಿರಣ್‌ಕುಮಾರ್​​ ರಂಗರೇಜ್, ಕೊಪ್ಪಳ ಜಿಲ್ಲೆಯ ಕಾರಟಗಿ ಮೂಲದ ಸಾಗರ ನಿರಂಜನ್, ಉಡುಪಿ ಜಿಲ್ಲೆಯ ಕೊಲ್ಲೂರು ಮೂಲದ ಶಶಿಧರ ಶೆಟ್ಟಿ ಅವರನ್ನು ಬಂಧಿಸಿದ್ದಾರೆ. ಬಂಧಿತರಿಂದ 500 ಮುಖಬೆಲೆಯ 473 ನಕಲಿ ನೋಟು ಜಪ್ತಿ ಮಾಡಲಾಗಿದೆ. ಚಿಲ್ಡ್ರನ್​​ ಬ್ಯಾಂಕ್​ ಆಫ್​ ಇಂಡಿಯಾ ಹೆಸರಲ್ಲಿ ನೋಟುಗಳನ್ನು ಮುದ್ರಿಸಲಾಗಿತ್ತು. ಆರೋಪಿಗಳು ಬಾರ್​​ನಲ್ಲಿ ನಕಲಿ ನೋಟು ಚಲಾವಣೆಗೆ ಯತ್ನಿಸಿದ್ದಾರೆ. ಘಟಪ್ರಭಾ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:01 pm, Wed, 31 August 22