Accident: ಟ್ರ್ಯಾಕ್ಟರ್-ಬೈಕ್ ನಡುವೆ ಡಿಕ್ಕಿ, ಇಬ್ಬರ ಸಾವು
ರಾಜ್ಯದ ಕೆಲ ಕಡೆ ಇಂದು ಅಪಘಾತಗಳು ಸಂಭವಿಸಿವೆ. ಮೈಸೂರು, ಕೊಡಗು, ಯಾದಗಿರಿ ಸೇರಿದಂತೆ ಕೆಲ ಕಡೆ ಆದ ರಸ್ತೆ ಅಪಘಾತದಲ್ಲಿ ಪ್ರಾಣ ಹಾನಿಯಾಗಿದ್ದು ಕೆಲವರಿಗೆ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರು: ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್‌ನಲ್ಲಿದ್ದ ಇಬ್ಬರು ಸವಾರರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಮೈಲಾಂಬೂರು ಗ್ರಾಮದ ರಾಜೇಗೌಡ(55), ಕೆ.ಆರ್.ನಗರ ತಾಲೂಕು ಮಾದಹಳ್ಳಿಯ ರವಿ(35) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಹುಣಸೂರು ಕಡೆಯಿಂದ ಗ್ರಾಮಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ.
ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಚಾಲಕನಿಗೆ ಗಾಯ ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದಿದ್ದು ಚಾಲಕನಿಗೆ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಲ್ ಬೆಟ್ಟ ಬಳಿ ನಡೆದಿದೆ. ಕುಶಾಲನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಸ್ ಚಾಲಕ ಮಹದೇವ್‌ಗೆ ಗಂಭೀರ ಗಾಯಗಳಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿ ಹರಿದು ಮಹಿಳೆ ಸಾವು ವಾಯುವಿಹಾರಕ್ಕೆ ತೆರಳಿದ್ದ ಮಹಿಳೆ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮಹಿಳೆ ಮೃತಪಟ್ಟ ಘಟನೆ ಕೊಡಗು ಜಿಲ್ಲೆ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳ ಬಳಿ ನಡೆದಿದೆ. ಹೊಸ ಸ್ಕೂಟರ್ಗಳನ್ನು ಸಾಗಿಸುತ್ತಿದ್ದ ಲಾರಿ ಮಹಿಳೆಯ ಮೇಲೆ ಹರಿದು ಪಲ್ಟಿಯಾಗಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರು, ಮಹಿಳೆ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.
ರಸ್ತೆಬದಿ ನಿಂತಿದ್ದ ಲಾರಿಗೆ ಪೊಲೀಸ್ ವಾಹನ ಡಿಕ್ಕಿ ರಸ್ತೆಬದಿ ನಿಂತಿದ್ದ ಲಾರಿಗೆ ಪೊಲೀಸ್ ವಾಹನ ಡಿಕ್ಕಿಯಾದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ನಡೆದಿದ್ದು ಪೊಲೀಸ್ ವಾಹನದಲ್ಲಿದ್ದ DySP, ಚಾಲಕನಿಗೆ ಗಾಯಗಳಾಗಿವೆ. ಡಿಕ್ಕಿಯ ರಭಸಕ್ಕೆ ಪೊಲೀಸ್ ವಾಹನ ನಜ್ಜುಗುಜ್ಜಾಗಿದೆ. DySP ವೆಂಕಟೇಶ ಉಗಿಬಂಡಿಗೆ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇದನ್ನೂ ಓದಿ: ಡ್ರಗ್ಸ್ ಕೇಸ್: ಬೆಂಗಳೂರಲ್ಲಿ ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸ್ ದಾಳಿ; ಮತ್ತೋರ್ವ ಕನ್ನಡದ ನಟಿಗೆ ಬಂಧನ ಭೀತಿ