AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು; ಜಾನುವಾರುಗಳ ಮೇಲೆ ದಾಳಿ ಮಾಡಿ ರೈತರಿಗೆ ಸಂಕಷ್ಟ ತಂದಿದ್ದ ಎರಡು ಚಿರತೆಗಳು ಸೆರೆ

ಜಾನುವಾರುಗಳ ಮೇಲೆ ದಾಳಿ ಮಾಡುತ್ತ ಜನರಲ್ಲಿ ಆತಂಕ ಹುಟ್ಟಿಸಿದ್ದ ಎರಡು ಚಿರತೆಗಳು ಮೈಸೂರಿನ ಎರಡು ಗ್ರಾಮದಲ್ಲಿ ಸೆರೆ ಸಿಕ್ಕಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಚಿರತೆಗಳು ಬಿದ್ದಿವೆ. ಸದ್ಯ ಗ್ರಾಮದಲ್ಲಿರುವ ಮತ್ತಷ್ಟು ಚಿರತೆಗಳನ್ನು ಆದಷ್ಟು ಬೇಗ ಹಿಡಿದು ಜನರ ಭಯ ದೂರ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಮೈಸೂರು; ಜಾನುವಾರುಗಳ ಮೇಲೆ ದಾಳಿ ಮಾಡಿ ರೈತರಿಗೆ ಸಂಕಷ್ಟ ತಂದಿದ್ದ ಎರಡು ಚಿರತೆಗಳು ಸೆರೆ
ಸೆರೆ ಸಿಕ್ಕ ಚಿರತೆ
ಆಯೇಷಾ ಬಾನು
|

Updated on: Feb 14, 2024 | 10:51 AM

Share

ಮೈಸೂರು, ಫೆ.14: ಮೈಸೂರಿನಲ್ಲಿ ದಿನದಿಂದ ದಿನಕ್ಕೆ ಚಿರತೆಗಳ (Leopard) ಕಾಟ ಹೆಚ್ಚಾಗುತ್ತಿದ್ದು ಮೈಸೂರು ಜಿಲ್ಲೆಯ ಎರಡು ಗ್ರಾಮಗಳಲ್ಲಿ 2 ಚಿರತೆಗಳನ್ನು ಅರಣ್ಯ ಇಲಾಖೆ ಸೆರೆ ಹಿಡಿದು ರಕ್ಷಿಸಿದೆ. ಚಿರತೆ ಕಾಟದ ಬಗ್ಗೆ ಹೆಚ್ಚು ದೂರುಗಳು ಹೇಳಿ ಬಂದ ಹಿನ್ನೆಲೆ ಅರಣ್ಯ ಇಲಾಖೆ (Forest Department) ಬೋನು ಇರಿಸಿತ್ತು. ಸದ್ಯ ಈಗ 2 ಚಿರತೆಗಳು ಬೋನಿಗೆ ಬಿದ್ದಿವೆ.

ನಂಜನಗೂಡು ತಾಲೂಕಿನ ರಾಂಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಸೋಮವಾರ ಬೆಳಗ್ಗೆ ನಂಜನಗೂಡು ವ್ಯಾಪ್ತಿಯ ಚಿಕ್ಕಯ್ಯನಛತ್ರ ಹೋಬಳಿಯ ಹತ್ಯಾಳು ಗ್ರಾಮದಲ್ಲಿ ಇಡಲಾಗಿದ್ದ ಬೋನಿಗೆ ಬಿದ್ದಿದೆ. ಬಲೆಗೆ ಬಿದ್ದ ಗಂಡು ಚಿರತೆಗೆ ಸುಮಾರು ಐದು ವರ್ಷ ವಯಸ್ಸಾಗಿರಬಹುದು ಎಂದು ಹೇಳಲಾಗುತ್ತಿದೆ. ಈ ಪ್ರದೇಶದಲ್ಲಿ ಚಿರತೆಗಳು ಜಾನುವಾರುಗಳ ಮೇಲೆ ದಾಳಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇದರಿಂದ ರೈತರು ಜಾನುವಾರುಗಳನ್ನು ಮೇಯಿಸಲು ಭಯಪಡುತ್ತಿದ್ದರು.

ಈ ಭಾಗದಲ್ಲಿ ಬೀಡುಬಿಟ್ಟಿರುವ ಇತರ ಚಿರತೆಗಳನ್ನು ಸೆರೆ ಹಿಡಿಯುವಂತೆ ಇಲ್ಲಿನ ನಿವಾಸಿಗಳು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಟಿ.ನರಸೀಪುರ ವ್ಯಾಪ್ತಿಯ ತಲಕಾಡು ಹೋಬಳಿಯ ಕುರುಬೋಳನಹುಂಡಿಯಲ್ಲಿ ಭಾನುವಾರ ರಾತ್ರಿ ಬಾಳೆ ತೋಟದಲ್ಲಿ ಹಾಕಲಾಗಿದ್ದ ಬಲೆಗೆ ಮತ್ತೊಂದು ಚಿರತೆ ಬಿದ್ದಿದೆ. ಇದು ಕೂಡ ಗಂಡು ಚಿರತೆಯಾಗಿದ್ದು, ಸುಮಾರು ನಾಲ್ಕು ವರ್ಷ ಪ್ರಾಯದ್ದಾಗಿದೆ.

ಇದನ್ನೂ ಓದಿ: Viral Video: ದಾಹ ನೀಗಿಸಲು ಬಂದ ಚಿರತೆಯ ಮೇಲೆರಗಿದ ಮೊಸಳೆ; ಮುಂದೆನಾಯ್ತು ನೋಡಿ

ಗ್ರಾಮಸ್ಥರು ಹಲವು ಬಾರಿ ದೂರು ನೀಡಿದ ಹಿನ್ನೆಲೆಯಲ್ಲಿ ಇಲಾಖೆ ಬೋನ್ ಇರಿಸಿತ್ತು. ಮೈಕ್ರೊಚಿಪ್ ಅಳವಡಿಸಿ ಕಿವಿಗೆ ಚುಚ್ಚಿದ ಎರಡು ಚಿರತೆಗಳನ್ನು ಕಾಡಿಗೆ ಬಿಡಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ ಎನ್ ಬಸವರಾಜ್ ತಿಳಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ರೈತರು ಈ ಭಾಗದಲ್ಲಿ ಚಿರತೆಗಳ ಹಾವಳಿ ಜಾಸ್ತಿಯಾಗಿದೆ. ಹಲವು ಚಿರತೆಗಳು ಈ ಭಾಗದಲ್ಲಿವೆ. ಇದರಿಂದ ನಾವು ಜಮೀನಿಗೆ ಮತ್ತು ಜಾನುವಾರಗಳನ್ನು ಮೇಯಿಸಲು ಭಯಪಡುವಂತಾಗಿದೆ. ಜೀವ ಭಯದಲ್ಲೇ ಜೀವನ ಸಾಗಿಸುತ್ತಿದ್ದೇವೆ. ಇನ್ನುಳಿದ ಚಿರತೆಗಳನ್ನು ಸೆರೆಹಿಡಿಯುವಂತೆ ರೈತರು ಆಗ್ರಹಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್