AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮದ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಸಿಎಂ ಪುತ್ರನಿಗೆ ‘ಸನಾತನ’ದ ಪಾಠ ಹೇಳಿದ ಪೇಜಾವರ ಶ್ರೀ

ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಪುತ್ರ, ಸಚಿವರೂ ಆಗಿರುವ ಉದಯನಿಧಿ ಸ್ಟಾಲಿನ್ ಧರ್ಮದ ಬಗ್ಗೆ ಮಾತನಾಡಿ ಕಿಚ್ಚು ಹೊತ್ತಿಸಿದ್ದಾರೆ. ಸನಾತನ ಧರ್ಮದ ಬಗ್ಗೆ ನೀಡಿರುವ ಹೇಳಿಕೆ, ವಿವಾದದ ಕೇಂದ್ರ ಬಿಂದುವಾಗಿದ್ದು, ಆಕ್ರೋಶ ಭುಗಿಲೆದ್ದಿದೆ. ಇನ್ನು ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಉಡುಪಿ ಪೇಜಾವರ ಶ್ರೀ ತೀವ್ರವಾಗಿ ಖಂಡಿಸಿದ್ದು, ಮತ್ತೊಂದೆಡೆ ಪ್ರಮೋದ್ ಮುತಾಲಿಕ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧರ್ಮದ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಸಿಎಂ ಪುತ್ರನಿಗೆ ‘ಸನಾತನ’ದ ಪಾಠ ಹೇಳಿದ ಪೇಜಾವರ ಶ್ರೀ
ಉದಯನಿಧಿ, ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ
ರಾಮ್​, ಮೈಸೂರು
| Edited By: |

Updated on: Sep 04, 2023 | 10:25 AM

Share

ಮೈಸೂರು, (ಸೆಪ್ಟೆಂಬರ್ 04): ಸನಾತನ ಧರ್ಮ  (Sanatana Dharma) ಡೆಂಘಿ, ಮಲೇರಿಯಾ, ಕೊರೊನಾ ಇದ್ದಂತೆ. ಅದಕ್ಕೆ ಹೆದರಬಾರದು, ಅದನ್ನ ನಿರ್ಮೂಲನೆ ಮಾಡಬೆಕು. ಅದೇ ರೀತಿ ಸನಾತನ ಧರ್ಮವನ್ನ ನಿರ್ಮೂಲನೆ ಮಾಡಬೇಕು ಎಂದು ಸಚಿವ ಉದಯನಿಧಿ ಸ್ಟಾಲಿನ್, ಹೇಳಿಕೆಯನ್ನು ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ (Pejawar Mutt seer, Vishwaprasanna Teertha) ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಇಂದು (ಸೆಪ್ಟೆಂಬರ್ 04) ಮೈಸೂರಿನಿಂದ ಮಾಧ್ಯಮಗಳಿಗೆ ವಿಡಿಯೋ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಶ್ರೀಗಳು, ಉದಯನಿಧಿ ಸ್ಟಾಲಿನ್​​ ಒಂದು ರಾಜ್ಯದ ಮಂತ್ರಿಯಾಗಿದ್ದಾರೆ. ಸಮಾಜದಲ್ಲಿ ಇಂತಹ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ.‘ಸನಾತನ’ ಎಂದರೇ ಸದಾ ಕಾಲವೂ ಇರುವಂತಹದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರವೇ ಧರ್ಮ. ನಮ್ಮ ಸುಖದಿಂದ ಅಕ್ಕಪಕ್ಕದವರಿಗೆ ದುಃಖವಾಗಬಾರದು. ಬದಲಾಗಿ ನಮ್ಮ ಸುಖದಿಂದ ಅಕ್ಕಪಕ್ಕದವರಿಗೂ ಸಂತೋಷ ಲಭಿಸಬೇಕು. ಇದು ಸನಾತನ ಧರ್ಮದ ಮೂಲ ಆಶಯವಾಗಿದೆ. ಅಂತಹ ಧರ್ಮವನ್ನು ನಿರ್ಮೂಲಿಸಬೇಕು ಎನ್ನುವ ಪ್ರವೃತ್ತಿ ಸರಿಯಲ್ಲ ಎಂದಿದ್ದಾರೆ.

ಸಮಾಜದೊಳಗೆ ವಿಷ ಬೀಜ ಬಿತ್ತುವ ಕೆಲಸ ಮಾಡಬಾರದು. ಸಚಿವರೊಬ್ಬರ ಸನಾತನ ಧರ್ಮದ ಹೇಳಿಕೆ ಕೇಳಿ ತೀವ್ರ ಅಘಾತವಾಗಿದೆ. ಸನಾತನ ಧರ್ಮ ಅಂದ್ರೆ ಸದಾಕಾಲ ಇರುವಂತಹದ್ದು. ಎಲ್ಲಾರು ಸುಖ ಶಾಂತಿಯಿಂದ ಬಯಸುವವರು. ಸಮಾಜದಲ್ಲಿ ಸುಖ ಶಾಂತಿಯಿಂದ ಬದುಕುಬೇಕು. ಇದೇ ಸನಾತನ ಧರ್ಮದ ಆಶಯವಾಗಿರುತ್ತದೆ. ಸನಾತದ ಧರ್ಮದ ನಿರ್ಮೂಲನೆ ಹೇಳಿಕೆಯನ್ನ ಖಂಡಿಸುತ್ತೇನೆ. ಇಂತಹ ಹೇಳಿಕೆಯನ್ನ ನಾನು ಬಲವಾಗಿ ಖಂಡಿಸುತ್ತೇನೆ ಎಂದು ಹೇಳಿದ್ದಾರೆ

ಇದನ್ನೂ ಓದಿ: ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಎಂದು ಕರೆದ ಸ್ಟಾಲಿನ್ ಪುತ್ರ ಉದಯನಿಧಿ

ಮುತಾಲಿಕ್ ತೀವ್ರ ಆಕ್ರೋಶ

ಇನ್ನು ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಅವಹೇಳನಾಕಾರಿ ಹೇಳಿಕೆಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿರುವ ಅವರು, ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ಅಸಭ್ಯವಾದದ್ದು. ಸನಾತನ ಧರ್ಮ ನಾಶಪಡಿಸುತ್ತೇನೆ ಎಂಬ ಹೇಳಿಕೆಯನ್ನು ಖಂಡಿಸುತ್ತೇನೆ. ಪೆರಿಯಾರ್ ಸಂಸ್ಕೃತಿಯಿಂದ ಬಂದ ಉದಯನಿಧಿ ಆಟ ಇಲ್ಲಿ ನಡೆಯಲ್ಲ. ಉದಯನಿಧಿ ತನ್ನ ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಡೆಂಗ್ಯೂ ,ಮಲೇರಿಯಾದ ರೀತಿಯೇ ನಾಶ ಮಾಡ್ತೇವೆ ಎನ್ನುವುದನ್ನು ಶ್ರೀರಾಮ ಸೇನೆ ಖಂಡಿಸುತ್ತದೆ. ತಮಿಳುನಾಡಿನಲ್ಲೂ ಉದಯನಿಧಿ ವಿರುದ್ಧ ಶ್ರೀರಾಮಸೇನೆ ಪ್ರತಿಭಟನೆ ಮಾಡಿದೆ. ಕರ್ನಾಟಕ ಹೈಕೋರ್ಟ್​ನಲ್ಲಿ ಉದಯನಿಧಿ ವಿರುದ್ಧ ದಾವೆ ಹೂಡುತ್ತೇವೆ ಎಂದು ಕಿಡಿಕಾರಿದರು.

ನಿಮ್ಮ ನಿಮ್ಮ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!